Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:7 - ಕನ್ನಡ ಸತ್ಯವೇದವು C.L. Bible (BSI)

7 ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ತೇಮಾನ್ ಸೀಮೆಗಿದ್ದ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಬುದ್ಧಿ ಉಳಿದಿಲ್ಲವೇ? ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನ್ನು ಕೊಡಲು ಸಮರ್ಥರಾಗಿಲ್ಲವೇ? ಅವರು ತಮ್ಮ ಜ್ಞಾನವನ್ನು ಕಳೆದುಕೊಂಡರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:7
39 ತಿಳಿವುಗಳ ಹೋಲಿಕೆ  

ಹೀಗಿರಲು, ಸರ್ವೇಶ್ವರನಾದ ನಾನು, ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.


ಎದೋಮ್, ಮೋವಾಬ್, ಅಮ್ಮೋನ್ ಜನರೆಲ್ಲರು;


ಏಸಾವನ ವಂಶದ ಕುಲನಾಯಕರು: ಏಸಾವನ ಜೇಷ್ಠಪುತ್ರನಾದ ಎಲೀಫಜನಿಂದ ತೇಮಾನ, ಏಮಾರ, ಚೆಫೋ, ಕೆನೆಜ್,


‘ನಾನು ಬಹಳವಾಗಿ ದಣಿದು ಬಂದಿದ್ದೇನೆ. ಆ ಕೆಂಪು ಪದಾರ್ಥವನ್ನು ತಿನ್ನಲು ಕೊಡು’, ಎಂದು ಕೇಳಿದ. (ಈ ಕಾರಣದಿಂದಲೇ ಏಸಾವನಿಗೆ ಎದೋಮ್ ಎಂದು ಹೆಸರಾಯಿತು.)


ಯೋಬನಿಗೆ ಒದಗಿದ್ದ ಆಪತ್ತಿನ ಸುದ್ದಿ ಆತನ ಮೂವರು ಮಿತ್ರರಿಗೆ ಮುಟ್ಟಿತು. ಅವರು ತಮ್ಮ ತಮ್ಮ ಊರುಗಳಿಂದ, ಅಂದರೆ, ತೇಮಾನ್ಯದಿಂದ ಎಲೀಫಜನೂ, ಶೂಹ್ಯದಿಂದ ಬಿಲ್ದದನು, ನಾಮಾಥ್ಯದಿಂದ ಚೋಫರನೂ ಹೊರಟುಬಂದರು. ಯೋಬನಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿ ಅವನನ್ನು ಸಾಂತ್ವನಗೊಳಿಸಬೇಕೆಂಬ ಒಂದೇ ಉದ್ದೇಶದಿಂದ ಅವರು ಆತನ ಬಳಿಗೆ ಬಂದರು.


ಎಲೀಫಜನಿಗೆ ತೇಮಾನ್, ಓಮಾರ್, ಚೆಫೋ, ಗತಾಮ್, ಕೆನಜ್, ಎಂಬ ಐದು ಮಕ್ಕಳು.


ಬರುತಿಹನು ದೇವನು ಎದೋಮಿನಿಂದ ಆ ಪರಮಪಾವನಸ್ವಾಮಿ ಪಾರಾನ್ ಪರ್ವತದಿಂದ. ಆವರಿಸುವುದು ಆತನ ಪ್ರಭಾವ ಆಕಾಶಮಂಡಲವನು ತುಂಬಿಹುದು ಆತನ ಮಹಿಮೆ ಭೂಮಂಡಲವನು.


“ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ಧಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.


ಆ ‘ಚೆಲುವಿನ ನಾಡಿಗೂ’ ನುಗ್ಗುವನು. ಅನೇಕ ಸೀಮೆಗಳು ಅವನಿಂದ ನಾಶವಾಗುವುವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".


ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II


ಆಗ ತೇಮಾನ್ಯನಾದ ಎಲೀಫಜನು ಹೀಗೆಂದನು:


“ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಿಮ್ಮ ಬಂಧುಜನಗಳು. ಈಜಿಪ್ಟರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲವೆ?


ಯೋಬಾಬನು ಸತ್ತ ಮೇಲೆ ತೇಮಾನೀಯರ ನಾಡಿನವನಾದ ಹುಷಾಮನು ಅವನಿಗೆ ಬದಲಾಗಿ ಆಳಿದನು.


ಈ ಕಾರಣ ಏದೋಮನೆಂಬ ಏಸಾವನು ಸೇಯೀರ್ ಮಲೆನಾಡಿಗೆ ಹೋಗಿ ಅಲ್ಲೇ ವಾಸವಾಗಿದ್ದನು.


ತಂದೆಯಿಂದ ಯಕೋಬನು ಪಡೆದುಕೊಂಡ ಆಶೀರ್ವಾದದ ನಿಮಿತ್ತ ಏಸಾವನು ಯಕೋಬನ ಮೇಲೆ ಹಗೆಗೊಂಡನು. “ತಂದೆಯ ಮರಣಕ್ಕಾಗಿ ದುಃಖಿಸುವ ಕಾಲ ಸಮೀಪಿಸಿತು. ಆ ಬಳಿಕ ನನ್ನ ತಮ್ಮ ಯಕೋಬನನ್ನು ಕೊಂದುಹಾಕುತ್ತೇನೆ,” ಎಂದು ತನ್ನೊಳಗೇ ನೆನಸಿಕೊಂಡನು.


ಬಳಿಕ ಯಕೋಬನು ಎದೋಮ್ಯರ ನಾಡಿನ ‘ಸೇಯೀರ್’ ಎಂಬಲ್ಲಿ ವಾಸವಾಗಿದ್ದ ತನ್ನ ಅಣ್ಣ ಏಸಾವನ ಬಳಿಗೆ ಮುಂದಾಳುಗಳನ್ನು ಕಳಿಸಿದನು.


ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?


ಸರ್ವೇಶ್ವರ ಸ್ವಜನರಾದ ಇಸ್ರಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ : “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. (ಅವರ ಮಧ್ಯೆಯಿಂದ ಕಿತ್ತುಬಿಡುವೆನು ಯೆಹೂದ ವಂಶವನ್ನು).


ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾ, ಬೂಜ್ ನಾಡಿನವರು, ಮುಂದಲೆಗೂದಲು ಕತ್ತರಿಸಿಕೊಳ್ಳುವವರೆಲ್ಲರು;


“ಎದೋಮೂ ಅದರ ಅರಸರೂ ಎಲ್ಲ ಸರದಾರರೂ ಅಲ್ಲಿದ್ದಾರೆ; ಅವರು ಹಿಂಸಾಚಾರಿಗಳಾಗಿದ್ದು, ಖಡ್ಗಹತರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ನಡುವೆ ನೆಲಸಿದ್ದಾರೆ.


‘ದೂಮ’ ಕುರಿತ ದೈವೋಕ್ತಿ : “ಪಹರೆಯವನೇ, ರಾತ್ರಿ ಕಳೆಯುವುದು ಯಾವಾಗ? ಪಹರೆಯವನೇ, ಕತ್ತಲು ಕಳೆಯುವುದು ಯಾವಾಗ?” ಎಂಬ ಕೂಗು ಸೇಯಾರಿನಿಂದ ನನಗೆ ಕೇಳಿಬಂತು.


‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು