ಯೆರೆಮೀಯ 49:8 - ಕನ್ನಡ ಸತ್ಯವೇದವು C.L. Bible (BSI)8 ದೇದಾನಿನವರೇ, ಹಿಂದಿರುಗಿ ಓಡಿಹೋಗಿರಿ. ಒಳ ಪ್ರಾಂತ್ಯವನ್ನು ಸೇರಿ ವಾಸಿಸಿರಿ. ಏಕೆಂದರೆ ನಾನು ಎದೋಮನ್ನು ದಂಡಿಸುವೆನು. ಏಸಾವನಿಗೆ ವಿಧಿಸಿದ್ದ ಆಪತ್ತನ್ನು ಅದರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೆದಾನಿನ ನಿವಾಸಿಗಳೇ, ಓಡಿಹೋಗಿರಿ, ಅಡಗಿಕೊಳ್ಳಿರಿ; ಏಕೆಂದರೆ ಏಸಾವನು ಮಾಡಿದ ತಪ್ಪಿಗಾಗಿ ನಾನು ಅವನನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇದಾನಿನ ನಿವಾಸಿಗಳೇ, ಓಡಿಹೋಗಿರಿ; ತಿರುಗಿಕೊಳ್ಳಿರಿ; ಆಳವಾದ ಗುಹೆಯಲ್ಲಿ ವಾಸಮಾಡಿರಿ; ಏಕೆಂದರೆ ಏಸಾವನ ಆಪತ್ತನ್ನೂ, ನಾನು ಅವನನ್ನು ಶಿಕ್ಷಿಸುವ ಕಾಲವನ್ನೂ ಅವನ ಮೇಲೆ ಬರಮಾಡುತ್ತೇನೆ. ಅಧ್ಯಾಯವನ್ನು ನೋಡಿ |