Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:10 - ಕನ್ನಡ ಸತ್ಯವೇದವು C.L. Bible (BSI)

10 ಆಕ್ರಮಣಕಾರರಿಗೆ ಕರೆ; ಸಿಯೋನೆಂಬ ದ್ರಾಕ್ಷಾತೋಟದ ಸಾಲುಗಿಡಗಳನ್ನು ಹಾಳುಮಾಡಿ. ಆದರೆ ಅದನ್ನು ನಿರ್ಮೂಲಮಾಡಬೇಡಿ. ಅದರ ರೆಂಬೆಗಳನ್ನು ಕಿತ್ತುಹಾಕಿ. ಅವು ಸರ್ವೇಶ್ವರನಾದ ನನಗೆ ಸೇರಿದವುಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಚೀಯೋನೆಂಬ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ; ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವಳ ದ್ರಾಕ್ಷಿತೋಟಗಳ ಮೂಲಕ ಹೋಗಿ ಅವುಗಳನ್ನು ಹಾಳುಮಾಡಿರಿ. ಆದರೆ ಸಂಪೂರ್ಣವಾಗಿ ನಾಶಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ ಏಕೆಂದರೆ ಅವು ಯೆಹೋವ ದೇವರಿಗೆ ಸೇರಿದವುಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:10
24 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಹೀಗೆಂದಿದ್ದಾರೆ : ನಾಡೆಲ್ಲ ಬಟ್ಟಬರಿದಾಗುವುದು; ಆದರೆ ನಾನು ಅದನ್ನು ಸಂಪೂರ್ಣವಾಗಿ ಲಯಮಾಡುವುದಿಲ್ಲ.


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


ಆಗ ಸರ್ವೇಶ್ವರ: “ಈ ಮಗುವಿಗೆ ‘ಲೋ-ಅಮ್ಮಿ’ ಎಂದು ನಾಮಕರಣ ಮಾಡು. ಏಕೆಂದರೆ, ಇನ್ನು ನೀವು ನನ್ನ ಪ್ರಜೆಯಲ್ಲ; ನಾನು ನಿಮ್ಮ ದೇವರಲ್ಲ,” ಎಂದರು.


ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬಾಬಿಲೋನಿಯದವರು ಬೆಂಕಿಯಿಂದ ಸುಟ್ಟು ಜೆರುಸಲೇಮಿನ ಸುತ್ತಣವಿದ್ದ ಗೋಡೆಗಳನ್ನು ಕೆಡವಿದರು.


ಒಡೆಯ ಸರ್ವೇಶ್ವರನಾದ ನಾನು ಈ ಪಾಪಮಯ ರಾಜ್ಯದ ಮೇಲೆ ಕಣ್ಣಿಟ್ಟಿದ್ದೇನೆ ಎಂಬುದನ್ನು ಗಮನಿಸಿರಿ. ಇದನ್ನು ಭೂಮಂಡಲದಿಂದ ನಾಶಮಾಡುವೆನು. ಆದರೆ ಯಕೋಬ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.


“ ‘ಖಡ್ಗವೇ, ಆ ನಾಡನ್ನು ಹೊಕ್ಕುಹೋಗು’ ಎಂದು ಆಜ್ಞಾಪಿಸಿ ನಾನು ಅದನ್ನು ಆ ನಾಡಿಗೆ ತಂದು, ಜನ ಹಾಗು ಜಾನುವಾರುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ


ನಾನು ಕೆಲವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಉಳಿಸಿ, ಅವರು ತಮ್ಮ ಅಸಹ್ಯಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು: ನಾನೇ ಸರ್ವೇಶ್ವರ ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”


ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”


ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


“ಆದರೂ ಆ ದಿನಗಳಲ್ಲಿ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ಇವುಗಳ ನಿಮಿತ್ತ ನಾನು ದಂಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪವನ್ನು ತೀರಿಸದಿರುವೆನೋ?


ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ನನಗೆ ಬಹಳವಾಗಿ ದ್ರೋಹವೆಸಗಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಜುದೇಯ ನಾಡಿನ ಕೋಟೆಕೊತ್ತಲುಗಳಿಂದ ಕೂಡಿದ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಜೆರುಸಲೇಮನ್ನು ಸಮೀಪಿಸಿದನು.


ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು