ಯೆರೆಮೀಯ 5:19 - ಕನ್ನಡ ಸತ್ಯವೇದವು C.L. Bible (BSI)19 ‘ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ಇವುಗಳನ್ನೆಲ್ಲ ನಮಗೇಕೆ ಮಾಡಿದ್ದಾರೆ?’ ಎಂದು ಕೇಳುವಾಗ ನೀನು ಅವರಿಗೆ, ‘ನೀವು ಸರ್ವೇಶ್ವರನನ್ನೇ ತೊರೆದು, ಸ್ವಂತನಾಡಿನಲ್ಲೆ ಅನ್ಯದೇವತೆಗಳಿಗೆ ಸೇವೆಸಲ್ಲಿಸಿದ್ದೀರಿ. ಅಂತೆಯೇ ಹೊರನಾಡಿನಲ್ಲಿ ಅನ್ಯರಿಗೆ ಸೇವೆಮಾಡುವಿರಿ’ ಎಂದು ಹೇಳು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ ಎಂದು ನನ್ನ ಜನರು ಅನ್ನುವಾಗ ನೀನು ಅವರಿಗೆ - ನೀವು ಯೆಹೋವನನ್ನು ತೊರೆದು ಸ್ವದೇಶದಲ್ಲಿ ಅನ್ಯದೇವತೆಗಳನ್ನು ಸೇವಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೂದದ ಜನರು ನಿನ್ನನ್ನು, ‘ಯೆರೆಮೀಯನೇ, ನಮ್ಮ ದೇವರಾದ ಯೆಹೋವನು ನಮಗೆ ಇಂಥಾ ಕೇಡನ್ನು ಏಕೆ ಮಾಡಿದನು’ ಎಂದು ಕೇಳಬಹುದು. ಆಗ ಅವರಿಗೆ ಹೀಗೆ ಉತ್ತರಕೊಡು: ‘ಯೆಹೂದದ ಜನರಾದ ನೀವು ಯೆಹೋವನನ್ನು ತೊರೆದಿದ್ದೀರಿ, ನಿಮ್ಮ ದೇಶದಲ್ಲಿ ನೀವು ಅನ್ಯರ ವಿಗ್ರಹಗಳ ಸೇವೆ ಮಾಡುತ್ತಿದ್ದೀರಿ. ಆದ್ದರಿಂದಲೇ ನೀವು ಪರದೇಶದಲ್ಲಿ ಪರದೇಶಿಯರ ಸೇವೆಯನ್ನು ಮಾಡುವಿರಿ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ ‘ನಮ್ಮ ದೇವರಾದ ಯೆಹೋವ ದೇವರು ನಮಗೆ ಯಾತಕ್ಕೆ ಇವುಗಳನ್ನೆಲ್ಲಾ ಮಾಡುತ್ತಾರೆ,’ ಎಂದು ನೀವು ಕೇಳುವಾಗ, ನೀನು ಅವರಿಗೆ ಹೀಗೆ ಹೇಳಬೇಕು: ‘ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ, ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ.’ ಅಧ್ಯಾಯವನ್ನು ನೋಡಿ |