Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:2 - ಕನ್ನಡ ಸತ್ಯವೇದವು C.L. Bible (BSI)

2 ನೀವು ‘ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳೇ ಸುಳ್ಳು ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಜನರು ಯೆಹೋವನ ಜೀವದಾಣೆ ಎಂದರೂ ಆ ಆಣೆಯು ಸುಳ್ಳೇ ಸುಳ್ಳು [ಎಂದು ಯೆಹೋವನು ಅನ್ನುತ್ತಾನೆ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜನರು ಆಣೆ ಮಾಡುವಾಗ ‘ಯೆಹೋವನಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಬಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:2
15 ತಿಳಿವುಗಳ ಹೋಲಿಕೆ  

ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


ಅವರು ಭಕ್ತಿಯ ವೇಷ ಧರಿಸಿದ್ದರೂ ಅದರ ನಿಜವಾದ ಶಕ್ತಿಯನ್ನು ಅಲ್ಲಗಳೆಯುವರು. ಇಂಥವರ ಸಹವಾಸ ನಿನಗೆ ಬೇಡ.


ಅವರು ಹರಟೆಹೊಡೆಯುತ್ತಾರೆ; ಸುಳ್ಳಾಣೆ ಇಟ್ಟು ಸಂಧಾನಮಾಡಿಕೊಳ್ಳುತ್ತಾರೆ. ಉತ್ತಹೊಲದಲ್ಲಿ ಬೆಳೆಯುವ ವಿಷದ ಕಳೆಗಳಂತೆ ನ್ಯಾಯಸ್ಥಾನಕ್ಕೆ ಬರುವ ಅವರ ವಾದವಿವಾದಗಳು ಹೆಚ್ಚಿಕೊಳ್ಳುತ್ತವೆ.


ಕಳವು, ಕೊಲೆ, ವ್ಯಭಿಚಾರಗಳನ್ನು ಮಾಡುತ್ತೀರಿ. ಸುಳ್ಳುಸಾಕ್ಷಿ ಹೇಳುತ್ತೀರಿ. ಬಾಳನಿಗೆ ಧೂಪಾರತಿ ಎತ್ತುತ್ತೀರಿ. ಕಂಡು ಕೇಳದ ಅನ್ಯದೇವತೆಗಳನ್ನು ಆರಾಧಿಸುತ್ತೀರಿ.


ಇಸ್ರಯೇಲೆಂಬ ನಾಮಧಾರಿಗಳೇ, ಯೆಹೂದ ವಂಶೋತ್ಪನ್ನರೇ, ಯಕೋಬ ಮನೆತನದವರೇ, ಇಡುತ್ತೀರಿ ನೀವು ಸರ್ವೇಶ್ವರನ ಮೇಲೆ ಆಣೆ ಸ್ಮರಿಸುತ್ತೀರಿ ನಿಸ್ಸಂದೇಹವಾಗಿ ಇಸ್ರಯೇಲಿನ ದೇವರನೆ. ಆದರೆ, ದೂರವಾಗಿದೆ ಸತ್ಯಕ್ಕೂ ಧರ್ಮಕ್ಕೂ ನಿಮ್ಮ ಕಾರ್ಯಾಚರಣೆ.


ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿನ್ನ ದೇವರ ನಾಮಕ್ಕೆ ಅಪಕೀರ್ತಿ ತರಬೇಡ. ನಾನೇ ಸರ್ವೇಶ್ವರ.


ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


“ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.


ಈಜಿಪ್ಟಿನಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರು ಸರ್ವೇಶ್ವರನಾದ ನಾನು ಹೇಳುವ ಮಾತನ್ನು ಕೇಳಿರಿ: ‘ಸರ್ವೇಶ್ವರನಾದ ದೇವರ ಜೀವದಾಣೆ’ ಎಂದು ನನ್ನ ಹೆಸರನ್ನು ಬಾಯಿಂದ ಉಚ್ಚರಿಸಲಿಕ್ಕೆ ಈಜಿಪ್ಟಿನಲ್ಲಿ ಯಾವ ಯೆಹೂದ್ಯನು ಇನ್ನಿರನು ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆ ಇಟ್ಟಿದ್ದೇನೆ.


ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು.


ಅಕಟಾ, ದಾರಿಗರು ತಂಗುವ ಗುಡಿಸಲೊಂದು ಕಾಡಿನಲ್ಲಿ ಸಿಗಬಾರದೆ ! ಆಗ ಜನರನ್ನು ತ್ಯಜಿಸಿಬಿಟ್ಟು ನಾನಲ್ಲಿಗೆ ತೆರಳುತ್ತಿದ್ದೆ ! ಅವರೆಲ್ಲರು ವ್ಯಭಿಚಾರಿಗಳು, ದ್ರೋಹಿಗಳ ಗುಂಪೇ ಅಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು