ಯೆರೆಮೀಯ 5:22 - ಕನ್ನಡ ಸತ್ಯವೇದವು C.L. Bible (BSI)22 ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನೀವು ನನಗೆ ಅಂಜುವದಿಲ್ಲವೋ, ನನ್ನೆದುರಿಗೆ ನಡುಗುವದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇವಿುಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀವು ನನಗೆ ಭಯಪಡುವುದಿಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಸಮ್ಮುಖದಲ್ಲಿ ನಡುಗುವುದಿಲ್ಲವೋ? ನಾನು ಮರಳನ್ನು ನಿತ್ಯ ನೇಮವಾಗಿ ಸಮುದ್ರಕ್ಕೆ, ಅದು ದಾಟಕೂಡದ ಹಾಗೆ ಮೇರೆಯಾಗಿಟ್ಟಿದ್ದೇನೆ. ಅದರ ತೆರೆಗಳು ಎದ್ದರೂ ದಡ ಮೀರಲಾರವು; ಘೋಷಿಸಿದರೂ ಅದನ್ನು ದಾಟಲಾರವು. ಅಧ್ಯಾಯವನ್ನು ನೋಡಿ |