Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:23 - ಕನ್ನಡ ಸತ್ಯವೇದವು C.L. Bible (BSI)

23 ನೀವಾದರೋ ನನ್ನ ಅಧೀನದಿಂದ ತಪ್ಪಿಸಿಕೊಂಡು ಎದುರಿಬೀಳುವ ಹೃದಯವುಳ್ಳವರಾಗಿ ಇದ್ದೀರಿ. ಹದ್ದುಮೀರಿ ನನ್ನನ್ನು ಬಿಟ್ಟುಹೋಗಿ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಈ ಜನರ ಹೃದಯವೋ [ನನ್ನ] ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೂದದ ಜನರು ಹಟಮಾರಿಗಳಾಗಿದ್ದಾರೆ. ಅವರು ನನ್ನ ವಿರುದ್ಧ ಹೋಗುವದಕ್ಕೆ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಅವರು ನನ್ನಿಂದ ತಿರುಗಿ ಬಹಳ ದೂರ ಹೋಗಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು. ಅವರು ತಿರುಗಿಬಿದ್ದು ಹೋಗಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:23
14 ತಿಳಿವುಗಳ ಹೋಲಿಕೆ  

ಅವರೆಲ್ಲರು ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ತಾಮ್ರ, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.


ಅವರು ನನ್ನ ಕಡೆಯಿಂದ ದೂರಹೋಗುವ ಹಠಹಿಡಿದಿದ್ದಾರೆ; ಅವರು ನೊಗದ ಭಾರವನ್ನು ತಾಳದೆ ಕೂಗಿಕೊಂಡರೂ ಅದನ್ನು ಬಿಚ್ಚುವವರು ಯಾರೂ ಇಲ್ಲ.


ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II


“ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ, ಶಿಕ್ಷಿಸಿದ್ದರೂ ಮೊಂಡನೂ ಅವಿಧೇಯನೂ ಆಗಿ, ಅವರ ಮಾತನ್ನು ಕೇಳದೆಹೋದರೆ,


ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.


ನನ್ನ ಜನರ ಪಾಪವೇ ಅವರಿಗೆ ಜೀವನಾಧಾರ. ಎಂತಲೇ ಅವರು ಪಾಪಕೃತ್ಯಗಳನ್ನೇ ಅಧಿಕವಾಗಿ ಬಯಸುತ್ತಾರೆ.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಆದುದರಿಂದ ಗಣ್ಯವ್ಯಕ್ತಿಗಳ ಬಳಿಗೆ ಹೋಗಿ ಮಾತಾಡುವೆನು ಅವರು ಸರ್ವೇಶ್ವರನ ಮಾರ್ಗ ಹಾಗೂ ಅವರ ದೇವರ ನ್ಯಾಯವಿಧಿಗಳನ್ನು ಬಲ್ಲವರು,” ಎಂದುಕೊಂಡೆನು. ಆದರೆ ಆ ವ್ಯಕ್ತಿಗಳು ಕೂಡ ನೊಗವನ್ನು ಮುರಿದವರು, ಕಣ್ಣಿಗಳನ್ನು ಕಿತ್ತುಬಿಟ್ಟವರು.


ಸರ್ವೇಶ್ವರ ಇಂತೆಂದರು : “ಇಸ್ರಯೇಲಿನ ಜನರೇ, ನೀವು ನನಗೆ ದೊಡ್ಡ ದ್ರೋಹಮಾಡಿದಿರಿ. ಈಗಲಾದರೂ ನನ್ನ ಕಡೆಗೆ ತಿರುಗಿಕೊಳ್ಳಿರಿ.


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ಹೊಲ ಕಾಯುವವರಂತೆ ಅದನ್ನು ಸುತ್ತುಗಟ್ಟುವರು. ಏಕೆಂದರೆ ಅದರ ಜನರು ಸರ್ವೇಶ್ವರ ಸ್ವಾಮಿಗೇ ತಿರುಗಿಬಿದ್ದಿದ್ದಾರೆ. ಇದು ಆ ಸ್ವಾಮಿಯ ನುಡಿ.


ದಬ್ಬಾಳಿಕೆ ನಡೆಸುವ, ದಂಗೆಯೇಳುವ ದುಷ್ಟ ನಗರಕ್ಕೆ ಧಿಕ್ಕಾರ!


ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು