ಯೆರೆಮೀಯ 5:26 - ಕನ್ನಡ ಸತ್ಯವೇದವು C.L. Bible (BSI)26 “ನನ್ನ ಜನರ ನಡುವೆ ಕೆಟ್ಟವರು ಕಂಡುಬಂದಿದ್ದಾರೆ. ಬೇಡರು ಹೊಂಚುಹಾಕುವ ಹಾಗೆ ಅವರು ಹೊಂಚುಹಾಕುತ್ತಾರೆ. ಬೋನೊಡ್ಡಿ ಜನರನ್ನು ಹಿಡಿಯುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ; ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚುವ ಹಾಗೆ ಹೊಂಚುಹಾಕುತ್ತಾರೆ; ಬೋನೊಡ್ಡಿ ಮನುಷ್ಯರನ್ನು ಹಿಡಿಯುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಮ್ಮ ಜನರಲ್ಲಿ ದುಷ್ಟರಿದ್ದಾರೆ. ಅವರು ಪಕ್ಷಿಗಳ ಬಲೆಯನ್ನು ಮಾಡುವ ಬಲೆಗಾರರಂತಿದ್ದಾರೆ. ಅವರು ಬಲೆಗಳನ್ನು ಬೀಸುತ್ತಾರೆ. ಆದರೆ ಅವರು ಹಿಡಿಯುವುದು ಪಕ್ಷಿಗಳನ್ನಲ್ಲ, ಮನುಷ್ಯರನ್ನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಏಕೆಂದರೆ ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ. ಬೇಟೆಗಾರನ ಹಾಗೆ ಹೊಂಚುಹಾಕುತ್ತಾರೆ; ಪಕ್ಷಿಗಳನ್ನು ಬಲೆಗೆ ಬೀಳಿಸುವ ಮನುಷ್ಯರಂತೆ ಕಾಯುತ್ತಿದ್ದಾರೆ ಮತ್ತು ಜನರನ್ನು ಹಿಡಿಯಲು ಬಲೆ ಹಾಕುತ್ತಾರೆ. ಅಧ್ಯಾಯವನ್ನು ನೋಡಿ |