Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:28 - ಕನ್ನಡ ಸತ್ಯವೇದವು C.L. Bible (BSI)

28 ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಕೊಬ್ಬಿ ಮೆರಮೆರುಗಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪಕ್ಷಹಿಡಿದು ವ್ಯಾಜ್ಯ ನಡಿಸರು, ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅವರು ಮಾಡಿದ ದುಷ್ಕೃತ್ಯಗಳಿಂದ ಅವರು ಬೆಳೆದಿದ್ದಾರೆ, ಕೊಬ್ಬಿದ್ದಾರೆ. ಅವರು ಮಾಡುವ ದುಷ್ಕೃತ್ಯಗಳಿಗೆ ಕೊನೆಯೇ ಇಲ್ಲ. ಅವರು ಅನಾಥ ಮಕ್ಕಳ ಪಕ್ಷವಹಿಸಿ ಮಾತನಾಡುವದಿಲ್ಲ. ಅವರು ಅನಾಥರಿಗೆ ಸಹಾಯ ಮಾಡುವದಿಲ್ಲ. ಅವರು ದಿಕ್ಕಿಲ್ಲದವರಿಗೆ ನ್ಯಾಯ ದೊರೆಯದಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ. ಅವರ ಕೆಟ್ಟ ಕೆಲಸಗಳಿಗೆ ಮಿತಿಯಿಲ್ಲ; ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವುದಿಲ್ಲ; ಆದರೂ ಅವರು ಸಫಲವಾಗುತ್ತಾರೆ, ಬಡವರ ನ್ಯಾಯವನ್ನು ತೀರಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:28
24 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಪ್ರೀತಿ ಕರುಣೆಯನ್ನು ತೋರಿಸಿರಿ. ವಿಧವೆಯರು, ಅನಾಥರು, ವಿದೇಶಿಯರು, ಬಡವರು, ಇವರಾರನ್ನೂ ಶೋಷಣೆಮಾಡಬೇಡಿ. ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ದುರ್ಜನರಿದೊ ನಿಶ್ಚಿಂತರಾಗಿಹರು I ಸಿರಿಮೇಲೆ ಸಿರಿಯ ಶೇಖರಿಸುತಿಹರು II


ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ.


ಅನ್ಯಜನರಲ್ಲಿ ಕೂಡ ಇಲ್ಲದಂಥ ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ.


ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ನೀವು ನಿಮ್ಮ ನಲ್ಲನಲ್ಲೆಯರನ್ನು ಹುಡುಕಿಕೊಂಡು ಹೋಗುವುದರಲ್ಲಿ ಎಷ್ಟೋ ನಿಪುಣರು ! ಬಲು ಕೆಟ್ಟ ಹೆಂಗಸು ಕೂಡ ನಿಮ್ಮಿಂದ ಕಲಿತುಕೊಳ್ಳಬಹುದಾಗಿದೆ.


ಕೊಬ್ಬಿನಂತೆ ಆ ಜನರ ಹೃದಯ ಮಂದ I ನಿನ್ನ ಧರ್ಮಶಾಸ್ತ್ರವೇ ನನಗಾನಂದ II


ದೀನದಲಿತರನಾತ ಉದ್ಧರಿಸಲಿ I ಬಡಬಗ್ಗರಿಗೆ ನ್ಯಾಯ ದೊರಕಿಸಲಿ I ಪ್ರಜಾಹಿಂಸಕರನು ಸದೆಬಡಿಯಲಿ II


ಸಮೃದ್ಧಿಯಾಗಿವೆ ಕಳ್ಳಕಾಕರ ಗುಡಾರಗಳು ಸುರಕ್ಷಿತವಾಗಿರುವರು ದೇವರನ್ನೆ ಕೆರಳಿಸುವವರು ಅಂಗೈಯಲ್ಲಿರುವುದೇ ಅವರಿಗೆ ದೇವರು!


ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.


ಆ ಜನರಿಗೆ ನೋವುಕಾವೆಂಬುದಿಲ್ಲ I ಅವರ ದೇಹ ಸಬಲವಾಗಿದೆಯಲ್ಲ! II


ಗರ್ವಿಷ್ಠನ ಮನೆಯನ್ನು ಸರ್ವೇಶ್ವರ ಕೆಡವಿಬಿಡುವನು; ವಿಧವೆಯ ಎಲ್ಲೆ ಮೇರೆಯನ್ನು ಸುಭದ್ರಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು