Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:31 - ಕನ್ನಡ ಸತ್ಯವೇದವು C.L. Bible (BSI)

31 ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:31
37 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ; ಕೇಳಿಸಿದ ವಾಣಿ ಸುಳ್ಳು; ಸರ್ವೇಶ್ವರ ಅವರನ್ನು ಕಳುಹಿಸಲಿಲ್ಲ. ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡಿರುವೆಯಾ? ಕೈಗಳನ್ನು ಬಲಪಡಿಸಿಕೊಂಡಿರುವೆಯಾ? ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ. ಅಂತೆಯೇ ನಡೆಸುತ್ತೇನೆ.


ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?


ಜ್ಞಾನವಿದ್ದಿದ್ದರೆ ಗ್ರಹಿಸುತ್ತಿದ್ದರು ಈ ಸಂಗತಿಗಳನು ತಿಳಿಯುತ್ತಿದ್ದರು, ಅಂತ್ಯದೊಳು ತಮಗಾಗುವ ದುರವಸ್ಥೆಯನು.


ಆಗ ಆ ಕೆಡುಕರು, “ಪ್ರವಾದನೆ ಮಾಡಬೇಡ. ಇಂಥ ವಿಷಯಗಳಲ್ಲಿ ಪ್ರವಾದನೆಯ ಮಾತೆತ್ತಕೂಡದು. ಆ ವಿನಾಶ ನಮಗೆ ತಟ್ಟುವುದಿಲ್ಲ.


ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ಆ ದಿನದಂದು (ಫಿಲಿಷ್ಟಿಯದ) ಕರಾವಳಿಯಲ್ಲಿ ವಾಸಿಸುವರು. ‘ಅಯ್ಯೋ ಅಸ್ಸೀರಿಯರ ಅರಸನಿಂದ ನಾವು ಬಿಡುಗಡೆಯಾಗಬೇಕೆಂದು ಯಾರ ಆಶ್ರಯವನ್ನು ನಿರೀಕ್ಷಿಸಿಕೊಂಡಿದ್ದೇವೋ ಅವರಿಗೇ ಈ ಗತಿ ಬಂತಲ್ಲಾ; ಇನ್ನು ನಮ್ಮಂಥವರು ಉದ್ಧಾರವಾಗುವುದು ಹೇಗೆ?’ ಎಂದುಕೊಳ್ಳುವರು.”


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ಪಾಪಿಷ್ಟನಾಗಿದ್ದನು ನಿನ್ನ ಮೂಲಪಿತೃವು ನನಗೆ ದ್ರೋಹಿಗಳಾಗಿದ್ದರು ನಿನ್ನ ಪರವಾದಿಗಳು ನನ್ನ ಪವಿತ್ರಾಲಯವನ್ನು ಹೊಲೆಮಾಡಿದರು ನಿನ್ನ ಅಧಿಪತಿಗಳು.


ನನ್ನ ಜನರ ಹಿಂಸೆಬಾಧೆಗಳನ್ನು ಗಮನಿಸದೆ ಬರಲಿರುವ ಪರಿಣಾಮವನ್ನು ನೆನೆಸಿಕೊಳ್ಳದೆ ನೀನೇ ಶಾಶ್ವತ ರಾಣಿಯೆಂದು ಮೆರೆದೆ.


ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.


ಯೆರೆಮೀಯನು ಸರ್ವೇಶ್ವರನ ಆಲಯದಲ್ಲಿ ಹೀಗೆ ಸಾರುವುದನ್ನು ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಕೇಳಿದರು.


ನಗರದ ನಡುವೆಯೇ ಆದ ನೀತಿವಂತರ ರಕ್ತಪಾತದಿಂದ ಯಾಜಕರು, ಪ್ರವಾದಿಗಳು ಎಸಗಿದ ಈ ಪಾಪದೋಷಗಳಿಂದ ಬಂದೊದಗಿತು ಈ ಪರಿತಾಪವೆಲ್ಲ.


ಶತ್ರು ನಮ್ಮನ್ನು ಹೆಜ್ಜೆಹೆಜ್ಜೆಗೂ ಹುಡುಕುತ್ತಿದ್ದುದರಿಂದ ಹಾದಿಬೀದಿಗಳಲ್ಲಿ ಸಂಚಾರಮಾಡಲೂ ಆಗುತ್ತಿರಲಿಲ್ಲ. ನಮಗೆ ಕಾಲವು ತೀರಿತು, ಅಂತ್ಯವು ಸಮೀಪಿಸಿತು; ಹೌದು, ನಮ್ಮ ಅಂತ್ಯವು ಬಂದೇಬಿಟ್ಟಿತು!


ಪ್ರಜೆಗಳಂತೆಯೇ ಯಾಜಕ, ನಿಮ್ಮ ದುಷ್ಕೃತ್ಯಗಳಿಗೆ ತಕ್ಕ ದಂಡನೆಯನ್ನು ವಿಧಿಸುತ್ತೇನೆ. ಅವುಗಳ ಪ್ರತಿಫಲವನ್ನು ನೀವೇ ಅನುಭವಿಸುವಂತೆ ಮಾಡುತ್ತೇನೆ.


ಇಸ್ರಯೇಲ್ ಮನೆತನದಲ್ಲಿ ಘೋರಕೃತ್ಯಗಳು ಕಾಣಿಸಿಕೊಂಡಿವೆ. ಅಲ್ಲಿ ಎಫ್ರಯಿಮಿನೊಳಗೆ ವೇಶ್ಯಾಚಾರ ನಡೆಯುತ್ತಿದೆ. ಇಸ್ರಯೇಲ್ ಕಲುಷಿತವಾಗಿದೆ.


ಹಬ್ಬದ ದಿನಗಳಲ್ಲಿ ಅವರೇನು ಮಾಡುವರು? ಸರ್ವೇಶ್ವರಸ್ವಾಮಿಯ ಮಹೋತ್ಸವಗಳನ್ನು ಹೇಗೆ ಆಚರಿಸುವರು?


ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು.


ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು.


ಕೆಡುಕನು ಕೆಟ್ಟತುಟಿ ಆಡುವುದನ್ನು ಗಮನಿಸುತ್ತಾನೆ; ಸುಳ್ಳುಗಾರ ನಷ್ಟಮಾಡುವ ನಾಲಿಗೆಗೆ ಕಿವಿಗೊಡುತ್ತಾನೆ.


“ಅಶಾಂತಿಯಿರುವಾಗಲೂ ಅವರು ಶಾಂತಿಯಿದೆ ಎಂದು ಹೇಳಿ ನನ್ನ ಜನಗಳನ್ನು ವಂಚಿಸಿದ್ದಾರೆ. ಜನರು ದುರ್ಬಲ ಗೋಡೆಯನ್ನು ಕಟ್ಟಿದ್ದಾರೆ. ಅದಕ್ಕೆ ಆ ಪ್ರವಾದಿಗಳು ಸುಣ್ಣ ಬಳಿಯುತ್ತಾರೆ;


ಅದರ ಪ್ರವಾದಿಗಳು ಬಡಾಯಿಕೊಚ್ಚುವವರು, ವಿಶ್ವಾಸದ್ರೋಹಿಗಳು. ಅದರ ಯಾಜಕರು ಪವಿತ್ರವಾದುದನ್ನು ಹೊಲೆಗೆಡಿಸುವಂಥವರು, ಧರ್ಮವಿಧಿಗಳನ್ನು ಭಂಗಪಡಿಸುವಂಥವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು