Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:5 - ಕನ್ನಡ ಸತ್ಯವೇದವು C.L. Bible (BSI)

5 ಆದುದರಿಂದ ಗಣ್ಯವ್ಯಕ್ತಿಗಳ ಬಳಿಗೆ ಹೋಗಿ ಮಾತಾಡುವೆನು ಅವರು ಸರ್ವೇಶ್ವರನ ಮಾರ್ಗ ಹಾಗೂ ಅವರ ದೇವರ ನ್ಯಾಯವಿಧಿಗಳನ್ನು ಬಲ್ಲವರು,” ಎಂದುಕೊಂಡೆನು. ಆದರೆ ಆ ವ್ಯಕ್ತಿಗಳು ಕೂಡ ನೊಗವನ್ನು ಮುರಿದವರು, ಕಣ್ಣಿಗಳನ್ನು ಕಿತ್ತುಬಿಟ್ಟವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತಾಡುವೆನು; ಯೆಹೋವನ ಮಾರ್ಗವೂ ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಮ್ಮನವಾಗಿ [ತಮ್ಮ ಹೆಗಲ] ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನ್ನು ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಧಿಗಳನ್ನು ಅರಿತುಕೊಂಡಿರುತ್ತಾರೆ” ಅಂದುಕೊಂಡೆನು. ಆದರೆ ಈ ಜನನಾಯಕರುಗಳೆಲ್ಲಾ ದೇವರ ಸೇವೆಯನ್ನು ತೊರೆದುಬಿಟ್ಟಿದ್ದರು. ಅವರು ದೇವರಿಗೆ ವಿರೋಧಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ನಾಯಕರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡುವೆನು. ಏಕೆಂದರೆ, ಅವರು ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿದಿದ್ದಾರೆ,” ಆದರೆ ಇವರು ಕೂಡ ಒಮ್ಮತವಾಗಿ ನೊಗವನ್ನು ಮುರಿದು, ಬಂಧನಗಳನ್ನು ಹರಿದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:5
25 ತಿಳಿವುಗಳ ಹೋಲಿಕೆ  

“ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.


ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮಗೆ ರಾಜನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು.


ಅವನು ವ್ಯಥೆಗೀಡಾದುದನ್ನು ಕಂಡ ಯೇಸು, “ಸಿರಿವಂತರಿಗೆ ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟೊಂದು ಕಷ್ಟ!


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.


ಇಸ್ರಯೇಲರು ಅಂಕೆಮೀರಿ ಇಷ್ಟಬಂದಂತೆ ನಡೆದುಕೊಳ್ಳಲು ಆರೋನನು ಬಿಟ್ಟುಬಿಟ್ಟಿದ್ದನು. ಈ ಕಾರಣ ಅವರು ವಿರೋಧಿಗಳ ಅಪಹಾಸ್ಯಕ್ಕೆ ಗುರಿಯಾಗಿದ್ದರು.


ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”


ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ;


ಪ್ರಧಾನ ಯಾಜಕರೂ ಪ್ರಜೆಗಳೂ ಕೂಡ ಮಹಾದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ, ಸರ್ವೇಶ್ವರ ತಮಗೆ ಪ್ರತಿಷ್ಠಿಸಿಕೊಂಡಿದ್ದ ಜೆರುಸಲೇಮಿನ ದೇವಾಲಯವನ್ನು ಹೊಲೆಮಾಡಿದರು.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


ಆಕಾಶದಲ್ಲಿ ಹಾರುವ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿ, ಬಾನಕ್ಕಿ, ಕೊಕ್ಕರೆ ಇವು ತಮ್ಮ ಗಮನಾಗಮನದ ಸಮಯಗಳನ್ನು ತಿಳಿದಿರುತ್ತವೆ. ಆದರೆ ನನ್ನ ಜನರು ಸರ್ವೇಶ್ವರನಾದ ನನ್ನ ನಿಯಮಗಳನ್ನೆ ತಿಳಿಯರು.


ನಿನ್ನ ನಲ್ಲರೆಲ್ಲರು ಮರೆತುಬಿಟ್ಟರು, ನಿನ್ನನ್ನು ಹುಡುಕದಿರುವರು ಶತ್ರುವಿನಂತೆ ನಿನ್ನನ್ನು ಥಳಿಸಿದೆನು, ಕ್ರೂರವಾಗಿ ದಂಡಿಸಿದೆನು. ಏಕೆಂದರೆ, ನಿನ್ನ ಅಪರಾಧ ಹೆಚ್ಚಿದೆ ನಿನ್ನ ಪಾಪಗಳು ಲೆಕ್ಕವಿಲ್ಲದಿವೆ.


ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು