Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:7 - ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ಸ್ವಾಮಿ ಹೀಗೆಂದು ಪ್ರಶ್ನಿಸುತ್ತಾರೆ; “ಎಲೈ ಜೆರುಸಲೇಮ್, ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ತೊರೆದುಬಿಟ್ಟಿದ್ದಾರೆ; ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆತುಂಬ ಊಟಕೊಟ್ಟೆ; ಅವರೋ ವ್ಯಭಿಚಾರ ಮಾಡಿದ್ದಾರೆ, ವೇಶ್ಯೆಯರ ಮನೆಗಳಲ್ಲಿ ಗುಂಪು ಸೇರಿದ್ದಾರೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಹೀಗನ್ನುತ್ತಾನೆ - ನಾನು ನಿನ್ನನ್ನು ಹೇಗೆ ಕ್ಷವಿುಸಲಿ? ನಿನ್ನ ಜನರು ನನ್ನನ್ನು ವಿಸರ್ಜಿಸಿ ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ; ನಾನು ಅವರಿಗೆ ಹೊಟ್ಟೆತುಂಬಾ ಆಹಾರಕೊಟ್ಟ ಮೇಲೆ ಅವರು ಹಾದರ ಮಾಡಿದರು, ಸೂಳೆಯರ ಮನೆಗಳಲ್ಲಿ ಗುಂಪುಕೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಯೆಹೂದವೇ, ನಾನು ನಿನ್ನನ್ನು ಏಕೆ ಕ್ಷಮಿಸಬೇಕು? ಒಂದು ಕಾರಣವನ್ನಾದರೂ ಕೊಡು. ನಿನ್ನ ಮಕ್ಕಳು ನನ್ನನ್ನು ತೊರೆದಿದ್ದಾರೆ. ದೇವರುಗಳೇ ಅಲ್ಲದ ವಿಗ್ರಹಗಳಿಗೆ ಅವರು ಹರಕೆ ಹೊತ್ತಿದ್ದಾರೆ. ನಾನು ನಿನ್ನ ಮಕ್ಕಳಿಗೆ ಬೇಕಾದದ್ದನ್ನು ಕೊಟ್ಟೆ. ಆದರೂ ಅವರು ನನಗೆ ನಂಬಿಗಸ್ತರಾಗಿ ಉಳಿಯಲಿಲ್ಲ. ಅವರು ತಮ್ಮ ಹೆಚ್ಚಿನ ಸಮಯವನ್ನು ವೇಶ್ಯೆಯರ ಮನೆಗಳಲ್ಲಿ ಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ. ನಾನು ಅವರನ್ನು ತೃಪ್ತಿಪಡಿಸಿದ ಮೇಲೆ, ಅವರು ವ್ಯಭಿಚಾರ ಮಾಡಿದ್ದಾರೆ. ವೇಶ್ಯೆಯರ ಮನೆಗಳಲ್ಲಿ ಗುಂಪಾಗಿ ಸೇರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:7
39 ತಿಳಿವುಗಳ ಹೋಲಿಕೆ  

ಹಿಂದೆ ನೀವು ದೇವರನ್ನು ಅರಿಯದೆ ಇದ್ದಿರಿ. ದೇವರಲ್ಲದವುಗಳಿಗೆ ಅಧೀನರಾಗಿದ್ದೀರಿ.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರು ಬದಲಾಯಿಸಿಕೊಂಡಿತೋ? ಆದರೆ ನನ್ನ ಜನ, ತಮ್ಮ ಮಹಿಮೆಯಾದ ನನ್ನನ್ನು ತೊರೆದು ನಿರರ್ಥಕವಾದುವುಗಳನ್ನು ಆರಿಸಿಕೊಂಡಿದ್ದಾರೆ!


ಉಳಿದಿರುವ ಈ ಜನಾಂಗಗಳ ಜೊತೆ ಸೇರಿಕೊಳ್ಳಬೇಡಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಬಾರದು, ಪ್ರಮಾಣ ಮಾಡಬಾರದು, ಅವುಗಳನ್ನು ಪೂಜಿಸಬಾರದು. ಅವುಗಳಿಗೆ ಸೇವೆ ಮಾಡಬಾರದು.


‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.


ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು.


ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


ದೈವಶಾಪದ ನಿಮಿತ್ತ ದೇಶ ದುಃಖಿಸುತ್ತಿದೆ ವ್ಯಭಿಚಾರದಿಂದ ನಾಡು ತುಂಬಿತುಳುಕುತ್ತಿದೆ ಅಡವಿಯ ಹುಲ್ಲುಗಾವಲು ಬಾಡಿದೆ. ನಾಡಿನ ಜನರು ಹಿಡಿದೋಡುತ್ತಿರುವ ಮಾರ್ಗ ದುರ್ಮಾರ್ಗ ಅನ್ಯಾಯ ಸಾಧನೆಗಾಗಿಯೆ ಅವರ ಅಧಿಕಾರ ಪ್ರಯೋಗ.


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.


ನನ್ನ ಜನರಿಗೆ ಬಾಳ್‍ದೇವತೆಯ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ಮೊದಲು ಕಲಿಸಿಕೊಟ್ಟವರು ಇವರೇ. ಈಗ ನನ್ನ ಜನರ ಮಾರ್ಗವನ್ನು ಅವಲಂಬಿಸಿ ನನ್ನ ಹೆಸರೆತ್ತಿ, “ಸರ್ವೇಶ್ವರನ ಜೀವದಾಣೆ” ಎಂದು ಪ್ರಮಾಣ ಮಾಡುವುದನ್ನು ಕಲಿತರೆ ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.


ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ದಾನೇ, ನಿನ್ನ ದೇವರ ಜೀವದಾಣೆ’ ಎಂದೂ, ‘ಬೇರ್ಷೆಬಾ ಯಾತ್ರೆಯ ಜೀವದಾಣೆ’ ಎಂದೂ ಸಮಾ‍ರ್ಯದ ವಿಗ್ರಹಗಳ ಮೇಲೆ ಪ್ರಮಾಣ ಮಾಡುವವರು ಮತ್ತೆ ಏಳದಂತೆ ಬಿದ್ದುಹೋಗುವರು.”


ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಅವರೆಲ್ಲರು ವ್ಯಭಿಚಾರಿಗಳೇ; ಅವರು ಉರಿಯುವ ಒಲೆಗೆ ಸಮಾನರು. ರೊಟ್ಟಿಸುಡುವವನು ನಾದಿದ ಹಿಟ್ಟು ಹುಳಿಯಾಗುವವರೆಗೂ ಬಿಟ್ಟಿರುವ ಬೂದಿ ಮುಚ್ಚಿದ ಕೆಂಡಕ್ಕೆ ಸಮಾನರು.


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯೊಡನೆ ದುರಾಚಾರ ನಡೆಸಿದ್ದಾನೆ; ಇನ್ನೊಬ್ಬನು ಅತ್ಯಾಚಾರಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗ ಮಾಡಿದ್ದಾನೆ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ಕೀಳಾದ ನಿನ್ನ ಸೂಳೆಗಾರಿಕೆಯನ್ನು, ಗುಡ್ಡೆ, ಕಣಿವೆಗಳಲ್ಲಿ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?”


ಅಕಟಾ, ದಾರಿಗರು ತಂಗುವ ಗುಡಿಸಲೊಂದು ಕಾಡಿನಲ್ಲಿ ಸಿಗಬಾರದೆ ! ಆಗ ಜನರನ್ನು ತ್ಯಜಿಸಿಬಿಟ್ಟು ನಾನಲ್ಲಿಗೆ ತೆರಳುತ್ತಿದ್ದೆ ! ಅವರೆಲ್ಲರು ವ್ಯಭಿಚಾರಿಗಳು, ದ್ರೋಹಿಗಳ ಗುಂಪೇ ಅಲ್ಲವೆ?


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


ಕಂಡೊಡನೆ ಬೇಕು ನಿಮಗೆ ಚೋರರ ಕೂಟ I ಸಾಕಾಗಿಲ್ಲ ನಿಮಗೆ ಜಾರರ ಒಡನಾಟ II


“ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ನೀವು ಸರ್ವೇಶ್ವರನ ಯಾಜಕರಾದ ಆರೋನನ ಸಂತಾನದವರನ್ನೂ ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗಾಗಿ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ!


ಕಳವು, ಕೊಲೆ, ವ್ಯಭಿಚಾರಗಳನ್ನು ಮಾಡುತ್ತೀರಿ. ಸುಳ್ಳುಸಾಕ್ಷಿ ಹೇಳುತ್ತೀರಿ. ಬಾಳನಿಗೆ ಧೂಪಾರತಿ ಎತ್ತುತ್ತೀರಿ. ಕಂಡು ಕೇಳದ ಅನ್ಯದೇವತೆಗಳನ್ನು ಆರಾಧಿಸುತ್ತೀರಿ.


ಆಗ ನೀನು ಅವರಿಗೆ ಹೀಗೆಂದು ಹೇಳಬೇಕು : ಸರ್ವೇಶ್ವರನ ಈ ಮಾತಿಗೆ ಕಿವಿಗೊಡಿ : ‘ನಿಮ್ಮ ಪೂರ್ವಜರು ನನ್ನನ್ನು ತೊರೆದುಬಿಟ್ಟರು. ಅನ್ಯದೇವತೆಗಳನ್ನು ಹಿಂಬಾಲಿಸಿದರು. ಅವುಗಳಿಗೆ ಸೇವೆಸಲ್ಲಿಸಿ ಪೂಜಿಸಿದರು. ನನ್ನನ್ನು ಬಿಟ್ಟುದಲ್ಲದೆ ನನ್ನ ಧರ್ಮವಿಧಿಗಳನ್ನು ಮೀರಿದರು.


ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೆ? ಕಲ್ಪಿಸಿಕೊಂಡರೆ ಅವು ದೇವರುಗಳೇ ಅಲ್ಲ,’ ಎಂದು ನಿವೇದಿಸುವುವು.”


“ನಾವು ಅವಿಧೇಯರಾಗಿ ಪಾಪಮಾಡಿದೆವು ನೀನು ಕ್ಷಮಿಸಲಿಲ್ಲ ನಮ್ಮನ್ನು.


ನರಕ ಕೂಪದವರೆಗೆ ಬೆಂಕಿಯಾಗುತ್ತಿತ್ತು ನನ್ನ ಆದಾಯವನ್ನೆಲ್ಲ ನಿರ್ಮೂಲಮಾಡುತ್ತಿತ್ತು.


ಭ್ರಷ್ಟಳಾದ ಇಸ್ರಯೇಲ್ ನನಗೆ ವಿಮುಖಳಾಗಿ ವ್ಯಭಿಚಾರಿಣಿಯಂತೆ ವರ್ತಿಸಿದ ಕಾರಣದಿಂದಲೆ, ನಾನು ಅವಳನ್ನು ನಿರಾಕರಿಸಿ ವಿವಾಹ ವಿಚ್ಛೇದನ ಪತ್ರಕೊಟ್ಟದ್ದನ್ನು ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನೋಡಿಯೂ ಅಂಜದೆಹೋದಳು. ತಾನೂ ಹೋಗಿ ವೇಶ್ಯೆಯಂತೆ ವರ್ತಿಸಿದಳು.


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು