Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:10 - ಕನ್ನಡ ಸತ್ಯವೇದವು C.L. Bible (BSI)

10 ಬಾಬಿಲೋನಿಯದ ರಾಜ್ಯ ಸೂರೆಯಾಗುವುದು. ಅದನ್ನು ಕೊಳ್ಳೆಹೊಡೆಯುವವರೆಲ್ಲರು ಸಂತೃಪ್ತಿಗೊಳ್ಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕಸ್ದೀಯ ರಾಜ್ಯವು ಸೂರೆಯಾಗುವುದು; ಸೂರೆಗಾರರೆಲ್ಲರೂ ತೃಪ್ತಿಗೊಳ್ಳವರು, ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕಸ್ದೀಯ ರಾಜ್ಯವು ಸೂರೆಯಾಗುವದು; ಸೂರೆಗಾರರೆಲ್ಲರೂ ತೃಪ್ತಿಗೊಳ್ಳುವರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕಸ್ದೀಯ ಸಂಪತ್ತನ್ನೆಲ್ಲ ಶತ್ರು ಕೊಳ್ಳೆಹೊಡೆಯುವನು. ಶತ್ರು ಸೈನಿಕರು ತಮಗೆ ಬೇಕಾದದ್ದೆಲ್ಲವನ್ನು ತೆಗೆದುಕೊಳ್ಳುವರು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಾಬಿಲೋನಿನ ದೇಶವು ಸುಲಿಗೆಯಾಗುವುದು; ಅದನ್ನು ಸುಲಿದುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವುದು, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:10
12 ತಿಳಿವುಗಳ ಹೋಲಿಕೆ  

ಆ ಅವಧಿಯ ತರುವಾಯ ನಾನು ಬಾಬಿಲೋನನ್ನೂ ಅದರ ಅರಸನನ್ನೂ ದಂಡಿಸುವೆನು. ಅದರ ದ್ರೋಹದ ನಿಮಿತ್ತ ಆ ಬಾಬಿಲೋನಿನ ನಾಡನ್ನು ನಿತ್ಯ ವಿನಾಶಕ್ಕೆ ಗುರಿಪಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.


ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”


ಹೆಸರು ಹಿಡಿದು ನಿನ್ನ ಕರೆಯುವ ಸರ್ವೇಶ್ವರ ನಾನು ಕೊಡುವೆ ನಾ ನಿನಗೆ ಕತ್ತಲಲಿ ಬಚ್ಚಿಟ್ಟ ಭಂಡಾರಗಳನು ಗುಪ್ತಸ್ಥಳಗಳಲ್ಲಿ ಮರೆಮಾಡಿರುವ ನಿಧಿನಿಕ್ಷೇಪಗಳನು. ಈ ಪರಿ ಅರಿತುಕೊಳ್ಳುವೆ ನೀನು ನಾನೇ ಇಸ್ರಯೇಲರ ದೇವರೆಂಬುದನು.


ಶತ್ರು ಹಡಗುಗಳ ಹಗ್ಗಗಳು ಸಡಿಲ, ಅದರ ಕೂವೆಯ ಬುಡ ಸಡಿಲ; ಅದರ ಹಾಯಿಯನ್ನು ಮುದುರದಂತೆ ಹಿಡಿದುಕೊಳ್ಳಲು ಅಸಾಧ್ಯ. ಅವುಗಳನ್ನು ಸೂರೆಮಾಡಿ ಕೊಳ್ಳೆಹೊಡೆದು, ಸಮನಾಗಿ ಹಂಚಿಕೊಳ್ಳಲು ಎಲ್ಲರಿಗೂ ಆಸ್ಪದವುಂಟು. ಕುಂಟರು ಕೂಡ ತಮ್ಮ ಪಾಲನ್ನು ಪಡೆಯಬಲ್ಲರು.


ಅವರು ಕೊಳ್ಳೆಗೆ ಒಳಗಾಗುವರು; ಜನ ಮಿಡತೆಗಳಂತೆ ಆ ಕೊಳ್ಳೆಗೆ ಹಾರಿಬೀಳುವರು.


ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಆ ನಗರವನ್ನು ಹಾಳುದಿಬ್ಬವನ್ನಾಗಿ ಮಾಡಿ ಪೂರ್ತಿಯಾಗಿ ನಾಶಪಡಿಸಿರಿ. ಅದರಲ್ಲಿ ಏನೂ ಉಳಿಯದಿರಲಿ.


“ಆದರೆ ಬಾಬಿಲೋನಿನವರು ಹಾಗು ಅದರ ಕಸ್ದೀಯರು ಸಿಯೋನಿನಲ್ಲಿ ಮಾಡಿದ ಎಲ್ಲ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೆ ಆ ಸಿಯೋನಿನವರ ಕಣ್ಣೆದುರಿಗೇ ಮುಯ್ಯಿ ತೀರಿಸುವೆನು,” ಎನ್ನುತ್ತಾರೆ ಸರ್ವೇಶ್ವರ.


‘ನಮ್ಮ ಪ್ರಾಣವನ್ನು ಹಿಂಡಿದ ದೋಷ ಬಾಬಿಲೋನಿಗೆ ತಟ್ಟಲಿ’ ಎನ್ನುತ್ತದೆ ಸಿಯೋನ್. ‘ನಮ್ಮ ರಕ್ತವನ್ನು ಸುರಿಸಿದ ಅಪರಾಧ ಅದರ ಕಸ್ದೀಯರಿಗೆ ಬಡಿಯಲಿ!’ ಎನ್ನುತ್ತದೆ ಜೆರುಸಲೇಮ್.


ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ಹೊಡೆಯಲಿ ಅಶ್ವಗಳನ್ನೂ ರಥಗಳನ್ನೂ ಬಾಬಿಲೋನಿನಲ್ಲಿರುವ ನಾನಾ ವಿದೇಶಿಯರನ್ನೂ ಬೆದರಿಸಲಿ ಅವರ ಹೆಂಗಸರನ್ನು, ಕಬಳಿಸಲಿ, ಸೂರೆಮಾಡಲಿ ಆ ಖಡ್ಗ ಅವರ ಸಂಪತ್ತನ್ನು.


ನೀನು ಅನೇಕ ಜನಾಂಗಗಳನ್ನು ಕೊಳ್ಳೆಹೊಡೆದಿರುವೆ. ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಈ ಕಾರಣ, ಜನಾಂಗಗಳಲ್ಲಿ ಅಳಿದುಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು