ಯೆರೆಮೀಯ 50:11 - ಕನ್ನಡ ಸತ್ಯವೇದವು C.L. Bible (BSI)11 “ನನ್ನ ಸೊತ್ತಾದವರನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುತ್ತಿದ್ದೀರಿ! ಕಣ ತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿದ್ದೀರಿ. ಕೊಬ್ಬಿದ ಕುದುರೆಗಳಂತೆ ಕೆನೆಯುತ್ತಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ, ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನನ್ನ ಸ್ವಾಸ್ತ್ಯವನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಬಾಬಿಲೋನೇ, ನೀನು ಉಲ್ಲಾಸದಲ್ಲಿರುವೆ ಮತ್ತು ಸಂತೋಷದಲ್ಲಿರುವೆ. ನೀನು ನನ್ನ ಪ್ರದೇಶವನ್ನು ತೆಗೆದುಕೊಂಡೆ. ನೀನು ಕಣತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿರುವೆ. ನಿನ್ನ ನಗು ಕುದುರೆಗಳ ಸಂತೋಷಭರಿತ ಕೆನೆತದಂತೆ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಏಕೆಂದರೆ ನನ್ನ ಸೊತ್ತನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ, ನೀವು ಉಲ್ಲಾಸಿಸಿದ್ದರಿಂದಲೂ, ಕೊಬ್ಬಿದ ಕಡಸಿನ ಹಾಗೆ ಗರ್ವ ಪಟ್ಟದ್ದರಿಂದಲೂ, ಗಂಡು ಕುದುರೆಗಳ ಹಾಗೆ ಹೂಂಕರಿಸಿದ್ದರಿಂದಲೂ, ಅಧ್ಯಾಯವನ್ನು ನೋಡಿ |