Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:12 - ಕನ್ನಡ ಸತ್ಯವೇದವು C.L. Bible (BSI)

12 ಆದರೆ ನಿಮ್ಮ ಮಾತೃಭೂಮಿ ಮಾನಭಂಗಕ್ಕೆ ಈಡಾಗುವುದು. ನಿಮ್ಮನ್ನು ಹೆತ್ತ ರಾಜ್ಯ ನಾಚಿಕೊಳ್ಳುವುದು. ಹೌದು, ಅದು ಕಾಡಾಗುವುದು. ಕಗ್ಗಾಡು, ಬೆಂಗಾಡು ಆಗುವುದು. ರಾಷ್ಟ್ರಗಳಲ್ಲಿ ಅದು ಕನಿಷ್ಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿಮ್ಮ ಮಾತೃಭೂಮಿಯು ಮಾನಭಂಗಕ್ಕೆ ಈಡಾಗುವುದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವುದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಮ್ಮ ಮಾತೃಭೂವಿುಯು ಮಾನಭಂಗಕ್ಕೆ ಈಡಾಗುವದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈಗ ನಿನ್ನ ತಾಯಿಯು ಬಹಳ ನಾಚಿಕೆಪಡುವಳು. ನಿನಗೆ ಜನ್ಮಕೊಟ್ಟ ಆ ಸ್ತ್ರೀಯು ಅಪಮಾನ ಹೊಂದುವಳು. ಎಲ್ಲಾ ಜನಾಂಗಗಳಲ್ಲಿ ಬಾಬಿಲೋನ್ ಕನಿಷ್ಟವೆನಿಸುವುದು. ಅದು ಬರಿದಾದ ಮರುಭೂಮಿಯಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗಗಳಲ್ಲಿ ಅಂತ್ಯವಾದದ್ದು ಕಾಡೂ, ಒಣ ಭೂಮಿಯೂ, ಮರುಭೂಮಿಯೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:12
17 ತಿಳಿವುಗಳ ಹೋಲಿಕೆ  

ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ನರಪ್ರಾಣಿಯೂ ಹಾದುಹೋಗದು.


ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.


ಆದರೆ ಸ್ವರ್ಗೀಯ ಜೆರುಸಲೇಮ್ ದಾಸಿ ಅಲ್ಲ, ಸ್ವತಂತ್ರಳು, ಈಕೆಯೇ ನಮ್ಮ ತಾಯಿ.


ಆದುದರಿಂದ ಇಗೋ ಕೇಳಿ: ನನ್ನ ಅಪ್ಪಣೆಯ ಮೇರೆಗೆ ಶತ್ರುಗಳು ರಬ್ಬಾ ಎಂಬ ಅಮ್ಮೋನ್ಯರ ನಗರದ ಮೇಲೆ ಬಿದ್ದು ಯುದ್ಧ ಘೋಷಣೆ ಮಾಡುವ ದಿನಗಳು ಬರುವುವು. ಆ ನಗರ ಹಾಳುದಿಬ್ಬವಾಗುವುದು. ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಯೇಲ್ ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಸರ್ವೇಶ್ವರನಾದ ನನ್ನ ನುಡಿ.


ದೂರ - ಹತ್ತಿರವಿರುವ ಉತ್ತರ ನಾಡಿನ ಎಲ್ಲ ಅರಸರು, ಲೋಕದ ಸಕಲ ರಾಜ್ಯಗಳು, ಇವರೆಲ್ಲರು ಕುಡಿದ ಮೇಲೆ ಬಾಬಿಲೋನಿನ ಅರಸನು ಕುಡಿಯುವನು.


ಆ ಅವಧಿಯ ತರುವಾಯ ನಾನು ಬಾಬಿಲೋನನ್ನೂ ಅದರ ಅರಸನನ್ನೂ ದಂಡಿಸುವೆನು. ಅದರ ದ್ರೋಹದ ನಿಮಿತ್ತ ಆ ಬಾಬಿಲೋನಿನ ನಾಡನ್ನು ನಿತ್ಯ ವಿನಾಶಕ್ಕೆ ಗುರಿಪಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಬಾಬಿಲೋನಿನ ನಾಡನ್ನು ನೋಡು. ಅದರ ಜನಾಂಗ ನಿರ್ನಾಮವಾಯಿತು. ಅಸ್ಸೀರಿಯದವರು ಆ ನಾಡನ್ನು ಕಾಡುಮೃಗಗಳಿಗೆ ಈಡುಮಾಡಿದರು. ಅಲ್ಲಿ ಬುರುಜುಗಳನ್ನು ಕಟ್ಟಿಕೊಂಡರು. ಇದರ ಕೋಟೆಗಳನ್ನಾದರೋ ಕೆಡವಿ ನಾಶಮಾಡಿದರು.


ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯ ನುಡಿಗಳು : “ನಾನವರಿಗೆ ವಿರುದ್ಧವಾಗಿ ಎದ್ದು ನಿರ್ನಾಮಮಾಡುವೆನು, ಬಾಬಿಲೋನಿನ ಹೆಸರನು, ಜನಶೇಷವನು, ಪುತ್ರಪೌತ್ರರನು.


ಸರ್ವೇಶ್ವರ ಸ್ವಜನರಾದ ಇಸ್ರಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ : “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. (ಅವರ ಮಧ್ಯೆಯಿಂದ ಕಿತ್ತುಬಿಡುವೆನು ಯೆಹೂದ ವಂಶವನ್ನು).


ಏಳು ಮಕ್ಕಳನ್ನು ಕಳೆದುಕೊಂಡ ತಾಯಿ ಪ್ರಾಣಬಿಟ್ಟಂತಿದ್ದಾಳೆ ದುಃಖದಿಂದ ಬಳಲಿ ಅವಳ ಪಾಲಿಗೆ ಸೂರ್ಯ ಮುಳುಗಿದ್ದಾನೆ ಹಾಡುಹಗಲಲ್ಲೆ. ಆಶಾಭಂಗಪಟ್ಟಿದ್ದಾಳೆ, ಅವಮಾನಕ್ಕೆ ಈಡಾಗಿದ್ದಾಳೆ. ಖಡ್ಗಕ್ಕೆ ಗುರಿಮಾಡುವೆ ಅವಳ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿಗೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಹೌದು, ಜುದೇಯದ ಅರಸನ ಮನೆತನವನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ : “ನನ್ನ ದೃಷ್ಟಿಗೆ ನೀನಿರುವೆ ಗಿಲ್ಯಾದಿನಂತೆ, ಲೆಬನೋನಿನ ಶಿಖರದಂತೆ ಆದರೆ ನಿನ್ನನ್ನು ಮರುಭೂಮಿಯಂತೆ , ನಿರ್ಜನಪ್ರದೇಶದಂತೆ ಮಾಡುವೆನೆಂಬುದು ನಿಶ್ಚಯ.


ಇಗೋ ಬಾಬಿಲೋನಿಯದ ವಿಗ್ರಹಗಳನ್ನು ದಂಡಿಸುವ ದಿನಗಳು ಬರಲಿವೆ. ಆ ನಾಡೆಲ್ಲ ನಾಚಿಕೆಗೆ ಈಡಾಗುವುದು. ಅದರ ಪ್ರಜೆಗಳು ಅದರಲ್ಲೇ ಹತರಾಗಿ ಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು