ಯೆರೆಮೀಯ 50:19 - ಕನ್ನಡ ಸತ್ಯವೇದವು C.L. Bible (BSI)19 ಇಸ್ರಯೇಲೆಂಬ ಮಂದೆಯನ್ನು ಮರಳಿ ಅದರ ಹುಲ್ಲುಗಾವಲಿಗೆ ಸೇರಿಸುವೆನು. ಅದು ಕರ್ಮೆಲಿನಲ್ಲೂ ಭಾಷಾನಿನಲ್ಲೂ ಮೇಯುವುದು. ಎಫ್ರಯಿಮಿನ ಮತ್ತು ಗಿಲ್ಯಾದಿನ ಗುಡ್ಡಗಳಲ್ಲಿ ಹೊಟ್ಟೆತುಂಬ ತಿನ್ನುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು; ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ ಬಾಷಾನಿನಲ್ಲಿಯೂ ಮೇಯುವದು; ಎಫ್ರಾಯೀವಿುನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “‘ಆದರೆ ಇಸ್ರೇಲನ್ನು ಪುನಃ ಅದರ ಹುಲ್ಲುಗಾವಲಿಗೆ ತರುವೆನು. ಅದು ಕರ್ಮೆಲ್ ಬೆಟ್ಟದ ಮೇಲೆ ಮತ್ತು ಬಾಷಾನಿನ ಪ್ರದೇಶದಲ್ಲಿ ಮೇಯುವದು. ಅದು ತಿಂದು ತೇಗುವದು. ಅದು ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತಿಂದು ತೃಪ್ತಿಪಡುವದು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರುಗಿ ಬರಮಾಡುತ್ತೇನೆ; ಅವನು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯೀಮ್ ಬೆಟ್ಟದಲ್ಲಿಯೂ, ಗಿಲ್ಯಾದಿನಲ್ಲಿಯೂ ತೃಪ್ತಿ ಹೊಂದುವುದು.” ಅಧ್ಯಾಯವನ್ನು ನೋಡಿ |