Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:2 - ಕನ್ನಡ ಸತ್ಯವೇದವು C.L. Bible (BSI)

2 “ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಬೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವನ್ನೆತ್ತಿ ಪ್ರಕಟಿಸಿರಿ; ಮರೆಮಾಡದೇ ಹೀಗೆ ಸಾರಿರಿ, ‘ಬಾಬಿಲೋನ್ ಶತ್ರುವಶವಾಯಿತು; ಬೇಲ್ ದೇವತೆಗೆ ನಾಚಿಕೆಯಾಯಿತು; ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:2
34 ತಿಳಿವುಗಳ ಹೋಲಿಕೆ  

ತಗ್ಗಿದೆ ಬೇಲ್ ದೇವತೆ ಕುಗ್ಗಿದೆ ನೆಬೋ ದೇವತೆ ಅವುಗಳ ಪ್ರತಿಮೆಗಳನು ಕತ್ತೆಗಳು ಹೊತ್ತಿವೆ. ನೀವು ಮೆರವಣಿಗೆಯಾಗಿ ಹೊರುತ್ತಿದ್ದ ಆ ಬೊಂಬೆಗಳೆ, ಭಾರವಾದ ಹೊರೆಯಾಗಿವೆ, ಬಳಲಿದಾ ಪಶುಗಳಿಗೆ


ಇಗೋ, ಸವಾರರು ಜೋಡಿಜೋಡಿಯಾಗಿ ಬರುತಿಹರು,” ಎಂದು ಕೂಗಿ ಹೇಳುತ್ತಿದ್ದಾನೆ. ಅನಂತರ ಅವನು, “ಬಾಬಿಲೋನ್ ಬಿದ್ದುಹೋಯಿತು. ಅದರ ಪೂಜಾ ವಿಗ್ರಹಗಳೆಲ್ಲ ಒಡೆದು ಬೀದಿಪಾಲಾಗಿವೆ,” ಎಂದನು.


ಇಗೋ ಬಾಬಿಲೋನಿಯದ ವಿಗ್ರಹಗಳನ್ನು ದಂಡಿಸುವ ದಿನಗಳು ಬರಲಿವೆ. ಆ ನಾಡೆಲ್ಲ ನಾಚಿಕೆಗೆ ಈಡಾಗುವುದು. ಅದರ ಪ್ರಜೆಗಳು ಅದರಲ್ಲೇ ಹತರಾಗಿ ಬೀಳುವರು.


“ಬಾಬಿಲೋನಿಯದ ಬೇಲ್‍ದೇವತೆಯನ್ನು ದಂಡಿಸುವೆನು. ಅದು ನುಂಗಿದ್ದನ್ನು ಅದರ ಬಾಯಿಂದಲೇ ಕಕ್ಕಿಸುವೆನು. ಪ್ರವಾಹವಾಗಿ ಅಲ್ಲಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಬಾರರು. ಆ ಬಾಬಿಲೋನಿನ ಪೌಳಿಗೋಡೆ ಇನ್ನು ಬಿದ್ದುಹೋಗುವುದು.


ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.


ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು.


ಎವೀಲ್ಮೆರೋದಕನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ, ಅಂದರೆ ಜುದೇಯದ ಅರಸ ಯೆಹೋಯಾಕೀಮನು ಸೆರೆಗೆ ಸಿಕ್ಕಿದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ, ಯೆಹೋಯಾಕೀಮನನ್ನು ಕ್ಷಮಿಸಿ ಸೆರೆಯಿಂದ ಬಿಡುಗಡೆಮಾಡಿದನು.


ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿ: “ಬರಲಿವೆ ಬಾಬಿಲೋನಿನ ವಿಗ್ರಹಗಳನ್ನು ದಂಡಿಸುವ ದಿನಗಳು. ಆಗ ಆ ದೇಶದೊಳೆಲ್ಲ ನರಳಾಡುವರು ಗಾಯಗೊಂಡವರು.


ಒಬ್ಬ ಸುದ್ದಿಗಾರ ಇನ್ನೊಬ್ಬ ಸುದ್ದಿಗಾರನತ್ತ ಓಡುತ್ತಾನೆ. ಒಬ್ಬ ದೂತ ಇನ್ನೊಬ್ಬ ದೂತನತ್ತ ದೌಡಾಯಿಸುತ್ತಾನೆ. ‘ರಾಜಧಾನಿಯನ್ನು ಎಲ್ಲಾ ಕಡೆಯಿಂದಲೂ ಆಕ್ರಮಿಸಿದ್ದಾರೆ.


ಬಾಬಿಲೋನ್ ತಟ್ಟನೆ ಬಿದ್ದು ಹಾಳಾಯಿತು. ಅದಕ್ಕಾಗಿ ಗೋಳಾಡಿ. ಅದರ ನೋವನ್ನು ನೀಗಿಸಲು ಔಷಧವನ್ನು ತನ್ನಿ. ಒಂದು ವೇಳೆ ಅದು ಗುಣವಾದೀತು!


ಬಾಬಿಲೋನ್ ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿ ಕಂಪಿಸುವುದು. ಅದರ ಮೊರೆ ರಾಷ್ಟ್ರಗಳಿಗೆ ಕೇಳಿಸುವುದು.


“ಪ್ರಕಟಿಸಿರಿ ಈಜಿಪ್ಟಿನಲ್ಲಿ, ಪ್ರಚುರಪಡಿಸಿರಿ ಮಿಗ್ದೋಲ್, ತಹಪನೇಸ್, ಹಾಗು ಸೋಫ್ ಎಂಬೀ ನಗರಗಳಲ್ಲಿ. ಸಾರಿರಿ ಇಂತೆಂದು: ‘ಈಜಿಪ್ಟೇ, ಸ್ಥಿರವಾಗಿ ನಿಲ್ಲು, ಯುದ್ಧ ಸನ್ನದ್ಧವಾಗು, ಖಡ್ಗ ಆವರಿಸುತ್ತಿದೆ ನಿನ್ನ ಸುತ್ತಮುತ್ತಲು’


ರಾಷ್ಟ್ರಗಳೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ: ದೂರದ ದ್ವೀಪಗಳಲ್ಲೂ ಅದನ್ನು ಸಾರಿರಿ: ಇಸ್ರಯೇಲರನ್ನು ಚದುರಿಸಿದಾತ ಕುರಿಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನೆಂದು ಪ್ರಕಟಿಸಿರಿ.


ಆದುದರಿಂದ ಸರ್ವೇಶ್ವರ : “ರಾಷ್ಟ್ರಗಳೇ ಆಲಿಸಿ. ನನ್ನ ಜನರಿಗೆ ಸಂಭವಿಸಲಿರುವುದನ್ನು ಗಮನಿಸಿ.


ಇಗೋ ಅವರು ರಾಷ್ಟ್ರಗಳಿಗೆ ಅರುಹಿಸುವ ಸಮಾಚಾರ : ಮುತ್ತಿಗೆ ಹಾಕುವವರು ದೂರದೇಶದಿಂದ ಜೆರುಸಲೇಮಿಗೆ ಬರುವರು. ಜುದೇಯದ ಪಟ್ಟಣಗಳಿಗೆ ವಿರುದ್ಧ ಘೋಷಣೆಗಳನ್ನು ಪ್ರಕಟಿಸುವರು.


ನೋಡು, ನೀ ಕೇಳಿದವೆಲ್ಲ ನಡೆದಿದೆಯೊ ಇಲ್ಲವೋ ಎಂಬುದನು. ಆದರೂ ಘೋಷಿಸುತ್ತಾರೆಯೇ ನಿನ್ನವರು ಅವುಗಳನ್ನು? ಅರುಹುವೆನು ನಿನಗಿಂದಿನಿಂದ ಹೊಸ ಸಂಗತಿಗಳನು ಈವರೆಗೂ ನೀನರಿಯದ ಗುಪ್ತ ವಿಷಯಗಳನು.


ಅದೇ ಕಾಲದಲ್ಲಿ ಬಲದಾನನ ಮಗನು ಹಾಗೂ ಬಾಬಿಲೋನಿಯದ ಅರಸನು ಆದ ಮೆರೋದಕಬಲದಾನ ಎಂಬವನು, ರಾಜ ಹಿಜ್ಕೀಯನು ರೋಗದಿಂದ ಗುಣಹೊಂದಿದನು ಎಂದು ಕೇಳಿ ಅವನಿಗೆ ಉಡುಗೊರೆಯೊಂದಿಗೆ ಒಂದು ಪತ್ರವನ್ನು ಕಳುಹಿಸಿದನು.


ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ, ಆದುದರಿಂದಲೇ ಅವು ಅವರಿಂದ ಹಾಳಾದವು.


ಬೋಳುಬೆಟ್ಟದ ಮೇಲೆ ಧ್ವಜವನ್ನು ಏರಿಸಿರಿ. ಪ್ರಭುಗಳ ನಗರದ್ವಾರಗಳನ್ನು ಮುತ್ತುವಂತೆ ಸೈನಿಕರಿಗೆ ಸನ್ನೆಮಾಡಿ ಕೂಗಿ ಹೇಳಿರಿ.


ಹೇಳುವಿರಿ ನೀವು ಆ ದಿನದಂದು ಈ ಪರಿ - “ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು ಸ್ಮರಿಸಿರಿ ಆತನ ಶ್ರೀನಾಮವನು ಸಾರಿರಿ ಜನತೆಗೆ ಆತನ ಕಾರ್ಯಗಳನು ಘೋಷಿಸಿರಿ ಆತನ ನಾಮಘನತೆಯನು.


ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II


ಜನರೆಲ್ಲರಾಗ ತಲ್ಲಣಗೊಳ್ಳುವರು I ದೇವಕಾರ್ಯವಿದು ಎಂದು ಧ್ಯಾನಿಪರು I ಆತನ ಸತ್ಕಾರ್ಯಗಳನು ಸಾರುವರು II


ನಾಚಲಿ ವ್ಯರ್ಥವಿಗ್ರಹಗಳನು ಪೂಜಿಸಿ ಹಿಗ್ಗುವವರು I ಪ್ರಭುವಿಗೆ ಅಡ್ಡಬೀಳಲಿ ಆ ದೇವರುಗಳೆಲ್ಲರು II


ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


ಸಿಯೋನಿನ ಕಡೆಗೆ ಧ್ವಜವನ್ನೆತ್ತಿರಿ. ತಡಮಾಡದೆ ವಲಸೆಹೋಗಿರಿ. ಸರ್ವೇಶ್ವರ ಉತ್ತರದಿಂದ ವಿಪತ್ತನ್ನೂ ಘೋರ ನಾಶವನ್ನೂ ಬರಮಾಡುವರು.


ಬಾಬಿಲೋನಿನ ಕೋಟೆಗೆ ಎದುರಾಗಿ ಧ್ವಜವೆತ್ತಿರಿ. ಪಹರೆಯನ್ನು ಬಲಪಡಿಸಿರಿ. ಕಾವಲುಗಾರರನ್ನು ನಿಲ್ಲಿಸಿರಿ. ಹೊಂಚುಗಾರರನ್ನು ಗೊತ್ತುಮಾಡಿರಿ!’ ಸರ್ವೇಶ್ವರ ಸ್ವಾಮಿ ಬಾಬಿಲೋನಿನವರ ವಿಷಯದಲ್ಲಿ ನುಡಿದಿದ್ದನ್ನು ನೆನಪಿಗೆ ತಂದುಕೊಂಡು ನೆರವೇರಿಸಿದ್ದಾರೆ.


“ನಾಡಿನಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲ ಕೊಂಬೂದಿರಿ, ರಾಷ್ಟ್ರಗಳನ್ನು ಸಜ್ಜುಮಾಡಿರಿ. ಬಾಬಿಲೋನಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿ. ಸೋಲಿಸಬಲ್ಲ ಸೇನಾಪತಿಯನ್ನು ನೇಮಿಸಿರಿ. ಬಿರುಸಾದ ಅಶ್ವಬಲವನ್ನು ಮಿಡತೆಗಳ ದಂಡಿನೋಪಾದಿ ಬರಮಾಡಿ.


ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.


ಅದರಂತೆಯೇ ಅವರನ್ನು ಹಿಡಿದುತರಲಾಯಿತು. ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಹಾಗು ಅಬೇದ್‍ನೆಗೋ ಎಂಬವರೇ, ನೀವು ಬೇಕುಬೇಕೆಂದು, ನನ್ನ ದೇವರಿಗೆ ಸೇವೆಮಾಡದೆ, ನಾನು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇರುವಿರೋ?


“ಭೂಮ್ಯಾಕಾಶಗಳನ್ನು ಸೃಷ್ಟಿಸದ ದೇವರುಗಳು ಭೂಮಿಯ ಮೇಲಿಂದಲೂ ಆಕಾಶದ ಕೆಳಗಿನಿಂದಲೂ ಅಳಿದುಹೋಗುವುವು” ಎಂದು ನೀವು ಆ ಜನಾಂಗಗಳಿಗೆ ತಿಳಿಸಿರಿ.


ಅವು ವ್ಯರ್ಥವಾದುವುಗಳು, ಹಾಸ್ಯಾಸ್ಪದವಾದುವುಗಳು ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು