Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:20 - ಕನ್ನಡ ಸತ್ಯವೇದವು C.L. Bible (BSI)

20 ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಸಿಗದು. ಜುದೇಯದ ಪಾಪವನ್ನು ತಡಕಿದರೂ ಸಿಗದು. ಏಕೆಂದರೆ ನಾನು ಉಳಿಸಿದ ಜನಶೇಷವನ್ನು ಕ್ಷಮಿಸಿಬಿಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇದು ಯೆಹೋವನ ನುಡಿ. “ಆ ಸಮಯದಲ್ಲಿ ಜನರು ಇಸ್ರೇಲಿನ ದೋಷವನ್ನು ಕಂಡುಹಿಡಿಯಲು ಪ್ರಯತ್ನಿಸುವರು. ಆದರೆ ಯಾವ ದೋಷಗಳೂ ಇರುವದಿಲ್ಲ. ಜನರು ಯೆಹೂದದ ಪಾಪಗಳನ್ನು ಹುಡುಕುವ ಪ್ರಯತ್ನ ಮಾಡುವರು. ಆದರೆ ಯಾವ ಪಾಪಗಳೂ ಸಿಕ್ಕುವದಿಲ್ಲ. ಏಕೆಂದರೆ ಇಸ್ರೇಲಿನ ಮತ್ತು ಯೆಹೂದದ ಜನರಲ್ಲಿ ಅಳಿದುಳಿದ ಕೆಲವು ಜನರನ್ನು ನಾನು ರಕ್ಷಿಸುತ್ತೇನೆ. ಅವರ ಪಾಪಗಳನ್ನೆಲ್ಲ ಕ್ಷಮಿಸಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರು ಹೇಳುತ್ತಾರೆ, “ಆ ದಿವಸಗಳಲ್ಲಿಯೂ, ಆ ಕಾಲದಲ್ಲಿಯೂ ಇಸ್ರಾಯೇಲಿನ ಅಕ್ರಮವನ್ನು ಹುಡುಕಿದರೂ, ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವುದಿಲ್ಲ. ಏಕೆಂದರೆ ನಾನು ಉಳಿಸುವವರನ್ನು ಮನ್ನಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:20
30 ತಿಳಿವುಗಳ ಹೋಲಿಕೆ  

ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ.


ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಪಡುವಣದಿಂದ ಮೂಡಣವೆಷ್ಟೋ ದೂರ I ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ II


ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ.


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ಈ ಯಕೋಬ್ಯರಲ್ಲಿಲ್ಲ ಆಪತ್ತಿನ ಸೂಚನೆ ಈ ಇಸ್ರಯೇಲರಲ್ಲಿಲ್ಲ ವಿಪತ್ತಿನ ಸಾಧ್ಯತೆ ಸರ್ವೇಶ್ವರನೇ ಇಹನು ಅವರ ಸಂಗಡ ದೇವರಾಗಿ ಜಯಘೋಷ ಕೇಳಿಸುತ್ತಿದೆ ಅವರ ಅರಸನಿಗಾಗಿ!


ನಿಮ್ಮ ದೇಹದ ಯಾವುದೇ ಅಂಗವು ದುಷ್ಕೃತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನಗಳನ್ನಾಗಿ ದೇವರಿಗೆ ಒಪ್ಪಿಸಿಕೊಡಿರಿ.


ಆ ಕಾಲದಲ್ಲಿ, ಆ ದಿನಗಳಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಅವರು ಆಯ್ಕೆಯಾದುದು ತಮ್ಮ ಸತ್ಕಾರ್ಯಗಳ ಆಧಾರದಿಂದಲ್ಲ, ದೈವಾನುಗ್ರಹದಿಂದಲೇ. ಇಲ್ಲದಿದ್ದರೆ, ದೈವಾನುಗ್ರಹ ನಿಜವಾಗಿ ದೈವಾನುಗ್ರಹ ಎನಿಸಿಕೊಳ್ಳುತ್ತಿರಲಿಲ್ಲ.


ದೇವರ ಉಚಿತಾರ್ಥವರಕ್ಕೂ ಒಬ್ಬ ಮನುಷ್ಯನ ಪಾಪದ ಪರಿಣಾಮಕ್ಕೂ ಎಷ್ಟೋ ವ್ಯತ್ಯಾಸವಿದೆ. ಆ ಒಂದು ಪಾಪದ ಪರಿಣಾಮವಾಗಿ ಮನುಷ್ಯನು ಅಪರಾಧಿಯೆಂದು ನಿರ್ಣಯಿಸಲ್ಪಟ್ಟನು. ಆದರೆ ಅನೇಕರು ಅಪರಾಧಿಗಳಾದ ಮೇಲೂ ಕೊಡಲಾಗುವ ಉಚಿತಾರ್ಥ ವರವು ದೇವರೊಡನೆ ಸತ್ಸಂಬಂಧವನ್ನು ಉಂಟುಮಾಡುತ್ತದೆ.


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಸರ್ವೇಶ್ವರ ಹೀಗೆನ್ನುತ್ತಾರೆ: “ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ಬರುವರು. ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಸರ್ವೇಶ್ವರನನ್ನು ಮರೆಹೋಗುವರು.


ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಆ ಜುದೇಯದ ಅಳಿದುಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಅಲ್ಲಿಂದ ತಪ್ಪಿಸಿಕೊಂಡು ಜುದೇಯಕ್ಕೆ ಹಿಂದಿರುಗಿದರು. ಕೆಲವು ನಿರಾಶ್ರಿತರನ್ನು ಬಿಟ್ಟರೆ ಯಾವನೂ ಹಿಂತಿರುಗುವುದಿಲ್ಲ’.”


ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II


ಸಿಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನು” ಎಂದು ಹೇಳನು, ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.


ಅವರು ನನಗೆ ವಿರುದ್ಧವಾಗಿ ಮಾಡಿದ ಅಧರ್ಮವನ್ನೆಲ್ಲ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ನನಗೆ ವಿರುದ್ಧ ಮಾಡಿರುವ ಪಾಪದ್ರೋಹಗಳನ್ನೆಸಗಿ ಕಟ್ಟಿಕೊಂಡಿರುವ ಅಪರಾಧಗಳನ್ನೆಲ್ಲ ಕ್ಷಮಿಸುವೆನು.


ಅವನು ಮಾಡಿದ ಯಾವ ಅಪರಾಧವೂ ಅವನ ಲೆಕ್ಕಕ್ಕೆ ಸೇರದು. ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿ. ಆ ಒಂದೇ ಕಲ್ಲಿನಲ್ಲಿ ಏಳು ಮುಖಗಳು ಇರುವ ಒಂದು ಕೆತ್ತನೆಯನ್ನು ಕೆತ್ತುವೆನು. ಒಂದೇ ದಿನದಲ್ಲಿ ಈ ನಾಡಿನ ಪಾಪವನ್ನು ತೊಡೆದುಹಾಕುವೆನು.


ತೊರೆದುಬಿಟ್ಟೆ ಸ್ವಾಮೀ, ನಿನ್ನ ರೋಷವನು I ಆರಿಸಿಬಿಟ್ಟೆ ನಿನ್ನ ಕೋಪಾಗ್ನಿಯನು II


ಯಕೋಬ ಮನೆತನದವರಲ್ಲಿ ಅಳಿದುಳಿದ ಕೆಲವರು ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.


‘ಸಿಯೋನ್’ ನಾರಿಮಣಿಯೇ, ನಿನ್ನ ದೋಷದ ಫಲವನ್ನು ಅನುಭವಿಸಿ ಆಗಿದೆ. ಸರ್ವೇಶ್ವರನು ಮತ್ತೆ ಒಯ್ಯನು ನಿನ್ನನ್ನು ಸೆರೆಗೆ. ‘ಎದೋಮ್’ ನಾರಿಮಣಿಯೇ, ನಿನ್ನ ದೋಷದ ನಿಮಿತ್ತ ಸರ್ವೇಶ್ವರನು ನಿನ್ನನ್ನು ದಂಡಿಸುವನು ನಿನ್ನ ಪಾಪಾಕ್ರಮಗಳನ್ನು ಬಯಲಿಗೆ ಎಳೆಯುವನು.


ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು