Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:25 - ಕನ್ನಡ ಸತ್ಯವೇದವು C.L. Bible (BSI)

25 ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಬಾಬಿಲೋನಿನ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದು ಉಂಟು. ಅದಕ್ಕಾಗಿ ಸರ್ವೇಶ್ವರನಾದ ನಾನು ನನ್ನ ಆಯುಧ ಶಾಲೆಯನ್ನು ತೆರೆದಿದ್ದೇನೆ. ನನ್ನ ಕೋಪದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೋವನು ತನ್ನ ಆಯುಧಶಾಲೆಯನ್ನು ತೆರೆದಿದ್ದಾನೆ. ಆತನು ತನ್ನ ಆಯುಧಶಾಲೆಯಿಂದ ತನ್ನ ರೋಷದ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾನೆ. ತಾನು ಮಾಡಬೇಕಾದ ಕಾರ್ಯಕ್ಕಾಗಿ ಸರ್ವಶಕ್ತನಾದ ಆತನು ಆ ಶಸ್ತ್ರಾಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ. ಕಸ್ದೀಯರ ದೇಶದಲ್ಲಿ ಆತನು ಮಾಡಬೇಕಾದ ಕಾರ್ಯವೊಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೆಹೋವ ದೇವರು ತನ್ನ ಆಯುಧ ಶಾಲೆಯನ್ನು ತೆರೆದು, ತನ್ನ ರೋಷದ ಆಯುಧಗಳನ್ನು ಹೊರಗೆ ತಂದಿದ್ದಾರೆ. ಏಕೆಂದರೆ ಬಾಬಿಲೋನಿನ ದೇಶದಲ್ಲಿ ಸಾರ್ವಭೌಮ ಸೇನಾಧೀಶ್ವರ ಯೆಹೋವ ದೇವರಿಗೆ ಕೆಲಸವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:25
17 ತಿಳಿವುಗಳ ಹೋಲಿಕೆ  

ಬಾಬಿಲೋನನ್ನು ನಾನು ಹಾಳುಮಾಡಿಬಿಡುತ್ತೇನೆ ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತೇನೆ. ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ಅಲೆ ಅಲೆಯಾಗಿ ಬಂದ ಶತ್ರುಗಳು ಘೋಷಿಸಿ ಆರ್ಭಟಿಸುತ್ತಿದ್ದಾರೆ.


“ಲೋಕವನ್ನೆಲ್ಲಾ ನಾಶಮಾಡುವ ಎಲೈ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ. ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಬಂಡೆಯ ಮೇಲಿಂದ ಕೆಳಕ್ಕೆ ಉರುಳಿಸುವೆನು. ಸುಟ್ಟ ಬೆಟ್ಟವನ್ನಾಗಿಸುವೆನು.


ಆದರ ಸುತ್ತಲು ರಣಘೋಷಮಾಡಿರಿ. ಇಗೋ, ಅದು ಶರಣಾಗತವಾಯಿತು! ಅದರ ಕೋಟೆಕೊತ್ತಲಗಳು ಬಿದ್ದವು. ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಸರ್ವೇಶ್ವರನಾದ ನಾನು ಅದಕ್ಕೆ ಮುಯ್ಯಿತೀರಿಸಿದ್ದೇನೆ. ನೀವೂ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ.


ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


“ಬಾಬಿಲೋನೇ, ನೀನು ನನಗೊಂದು ಯುದ್ಧಾಸ್ತ್ರ, ಒಂದು ಗದೆ. ಈ ಗದೆಯಿಂದ ರಾಷ್ಟ್ರಗಳನ್ನು ಬಡಿದುಬಿಡುವೆನು, ರಾಜ್ಯಗಳನ್ನು ಅಳಿಸಿಬಿಡುವೆನು.


ನಿನ್ನಂಬು ಬಾಣಗಳು ಹರಿತವಾದುವು I ರಾಜದ್ರೋಹಿಗಳನು ಅವು ಇರಿಯುವುವು I ಜನಾಂಗಗಳು ನಿನ್ನ ಪಾದಕ್ಕೆರಗುವುವು II


ಕಟ್ಟಿಕೋ ಶೂರನೇ, ಪಟ್ಟಗತ್ತಿಯನು ಸೊಂಟಕೆ I ಸಂಭ್ರಮ,‍ ಶೋಭೆ, ಸಡಗರ ಸಲ್ಲತಕ್ಕವು ನಿನಗೆ II


ಸಿಕ್ಕಿಸಿಕ್ಕಿದವರೆಲ್ಲರು ಇರಿತಕ್ಕೆ ಗುರಿಯಾಗುವರು. ಅಟ್ಟಿಹಿಡಿಯಲಾದವರೆಲ್ಲರು ಕತ್ತಿಗೆ ತುತ್ತಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು