Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:29 - ಕನ್ನಡ ಸತ್ಯವೇದವು C.L. Bible (BSI)

29 “ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಬಿಲ್ಲನ್ನು ಬೊಗ್ಗಿಸಿ ಬಾಣಬಿಡುವವರನ್ನೆಲ್ಲಾ ಬಾಬೆಲಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲ್ಯರ ಸದಮಲಸ್ವಾವಿುಯಾದ ಯೆಹೋವನನ್ನು ಅಸಡ್ಡೆಮಾಡಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಬಾಬಿಲೋನಿಗೆ ವಿರೋಧವಾಗಿ ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಅದು ಅಹಂಕಾರದಿಂದ ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:29
28 ತಿಳಿವುಗಳ ಹೋಲಿಕೆ  

ವಿನಾಶಕಾರನು ಬಂದೆರಗಿದ್ದಾನೆ ಬಾಬಿಲೋನಿನ ಮೇಲೆ ಅದರ ಶೂರರೋ ಸೆರೆಯಾಗಿಬಿಟ್ಟಿದ್ದಾರೆ ಅವರ ಬಿಲ್ಲುಗಳೋ ಮುರಿದುಹೋಗಿವೆ. ಸರ್ವೇಶ್ವರನು ಮುಯ್ಯಿತೀರಿಸುವ ದೇವರು ಆತ ಪ್ರತಿಕ್ರಿಯೆ ವ್ಯಕ್ತಪಡಿಸದೆ ಇರನು.


ಕೇಡನು ನೀ ಮಾಡಿದೆ ಭಯಪಡದೆ ನೋಡರಾರೂ ಎಂದುಕೊಂಡಿದ್ದೆ, ನೀನು ಜ್ಞಾನಿ ವಿವೇಕಿಯೆಂದು ತಿಳಿದುಕೊಂಡೇ ಮರುಳಾದೆ; ‘ಏಕೈಕಳು ನಾನೇ, ಇನ್ನಾರೂ ಇಲ್ಲ’ ಎಂದುಕೊಂಡೆ.


ಅವಳು ಅಳೆದ ಅಳತೆಯಲ್ಲೇ ನೀವು ಅವಳಿಗೆ ಅಳೆಯಿರಿ; ಅವಳ ಕೃತ್ಯಗಳಿಗೆ ಇಮ್ಮಡಿಯಾಗಿ ಹಿಂದಿರುಗಿಸಿರಿ ಬೆರೆಸಿಕೊಡಿ ದ್ವಿಗುಣದಿ ಅವಳೇ ಬೆರೆಸಿದ ಮದ್ಯದ ಬಟ್ಟಲಲಿ.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.


ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು. ಅದನ್ನು ಯಾರೂ ಎತ್ತರು. ಅದರ ನಗರಗಳಿಗೆ ಬೆಂಕಿಹೊತ್ತಿಸುವೆನು. ಅದು ಸುತ್ತಮುತ್ತಣದನ್ನೆಲ್ಲ ನುಂಗಿಬಿಡುವುದು.”


ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಆ ನಗರವನ್ನು ಹಾಳುದಿಬ್ಬವನ್ನಾಗಿ ಮಾಡಿ ಪೂರ್ತಿಯಾಗಿ ನಾಶಪಡಿಸಿರಿ. ಅದರಲ್ಲಿ ಏನೂ ಉಳಿಯದಿರಲಿ.


ಬಾಬಿಲೋನೇ, ನಿನಗೆ ನಾನು ಉರುಲೊಡ್ಡಿದ್ದೆ. ನೀನು ತಿಳಿಯದೆ ಅದರಲ್ಲಿ ಸಿಕ್ಕಿಕೊಂಡೆ. ನೀನು ಸರ್ವೇಶ್ವರನೊಂದಿಗೆ ಹೋರಾಡಿದ್ದರಿಂದ ಬೋನಿನ ವಶವಾದೆ.


ಇಗೋ, ದೊಡ್ಡ ರಾಷ್ಟ್ರಗಳ ಸಮೂಹವನ್ನು ಎಬ್ಬಿಸಿ ಉತ್ತರದಿಂದ ಬಾಬಿಲೋನಿಯದ ಮೇಲೆ ಬೀಳಮಾಡುವೆನು. ಅವು ಬಾಬಿಲೋನಿಗೆ ವಿರುದ್ಧ, ವ್ಯೂಹಕಟ್ಟಿ ಅದನ್ನು ಬುಡಮೇಲು ಮಾಡುವುವು. ಅವುಗಳು ಪ್ರಯೋಗಿಸುವ ಬಾಣಗಳು ಯುದ್ಧ ಪ್ರವೀಣ ಶೂರನಂತಿರುವುವು; ಅವು ಸುಮ್ಮನೆ ಹಿಂದಿರುಗವು.


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ನ್ಯಾಯವಾದುದ್ದನ್ನೇ ಮಾಡುವ ದೇವರು ನಿಮ್ಮನ್ನು ಹಿಂಸಿಸುವವರಿಗೆ ಪ್ರತಿಹಿಂಸೆಯನ್ನೂ ಮತ್ತು ಹಿಂಸೆಯನ್ನು ಸಹಿಸುತ್ತಿರುವ ನಿಮಗೆ, ನಮ್ಮೊಡನೆ ಉಪಶಮನವನ್ನೂ ದಯಪಾಲಿಸುವರು.


ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


ಅದರ ಧನುರ್ಧಾರಿಗಳಿಗೂ ಕವಚ ಸನ್ನದ್ಧರಿಗೂ ಬಿಲ್ಲುಬಾಣಗಳನ್ನೆಸೆಯಲು ಅವಕಾಶವಿಲ್ಲದಿರಲಿ. ಬಾಬಿಲೋನಿಯದ ಯುವಕರನ್ನು ಉಳಿಸದಿರಿ. ಅದರ ಸೈನಿಕರನ್ನೆಲ್ಲ ನಿಶ್ಶೇಷಮಾಡಿರಿ.


“ಆದರೆ ಬಾಬಿಲೋನಿನವರು ಹಾಗು ಅದರ ಕಸ್ದೀಯರು ಸಿಯೋನಿನಲ್ಲಿ ಮಾಡಿದ ಎಲ್ಲ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೆ ಆ ಸಿಯೋನಿನವರ ಕಣ್ಣೆದುರಿಗೇ ಮುಯ್ಯಿ ತೀರಿಸುವೆನು,” ಎನ್ನುತ್ತಾರೆ ಸರ್ವೇಶ್ವರ.


ಹತರಾದ ಇಸ್ರಯೇಲರೇ, ಬಾಬಿಲೋನಿಯದ ಹಿತಕ್ಕಾಗಿ ಬಹುಜನ ಹತರಾದರು. ಅಂತೆಯೇ ಬಾಬಿಲೋನ್ ಹತವಾಗುವುದು. ಸರ್ವೇಶ್ವರನಾದ ನನ್ನ ನುಡಿ ಇದು.”


“ಸಮಸ್ತ ರಾಷ್ಟ್ರಗಳಿಗೂ ಸರ್ವೇಶ್ವರನ ದಿನ ಸಮೀಪಿಸಿದೆ. ನೀನು ಮಾಡಿದ್ದನ್ನೆ ನಿನಗೂ ಮಾಡಲಾಗುವುದು. ನಿನ್ನ ದುಷ್ಕೃತ್ಯವು ನಿನ್ನ ತಲೆಗೇ ಬರುವುದು.


ಅನೇಕ ರಾಷ್ಟ್ರಗಳೂ ಮಹಾರಾಜರೂ ಅವರನ್ನು ಗುಲಾಮರನ್ನಾಗಿಸಿಕೊಳ್ಳುವರು. ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿ ತೀರಿಸುವೆನು.”


“ಮೋವಾಬಿಗೆ ಅಮಲೇರುವಷ್ಟು ಕುಡಿಸಿರಿ. ಅದು ಸರ್ವೇಶ್ವರನನ್ನೆ ತಿರಸ್ಕರಿಸಿ ಉಬ್ಬಿಹೋಗಿದೆ. ತನ್ನ ವಾಂತಿಯಲ್ಲೆ ಬಿದ್ದು ಗೇಲಿ ಪರಿಹಾಸ್ಯಕ್ಕೆ ಗುರಿಯಾಗಲಿದೆ.


ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.


“ಹೇ, ಸರ್ವೇಶ್ವರಾ, ಅವರ ದುಷ್ಕೃತ್ಯಗಳಿಗೆ ತಕ್ಕ ಪ್ರತೀಕಾರ ನೀಡು ಅವರಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು