ಯೆರೆಮೀಯ 50:30 - ಕನ್ನಡ ಸತ್ಯವೇದವು C.L. Bible (BSI)30 ಆದಕಾರಣ ಆ ದಿನದಂದು ಅಲ್ಲಿ ಯುವಕರು ಬೀದಿ ಚೌಕಗಳಲ್ಲಿ ಬಿದ್ದು ಸಾಯುವರು. ಯುದ್ಧವೀರರೆಲ್ಲರು ಸತ್ತು ಸ್ತಬ್ದರಾಗುವರು. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದಕಾರಣ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು; ಇದು ಯೆಹೋವನ ನುಡಿ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದಕಾರಣ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಬಾಬಿಲೋನಿನ ತರುಣರನ್ನು ಬೀದಿಗಳಲ್ಲಿ ಕೊಲ್ಲಲಾಗುವುದು. ಅದರ ಎಲ್ಲಾ ಸೈನಿಕರು ಅಂದು ಸಾಯುವರು.” ಯೆಹೋವನು ಹೀಗೆನ್ನುತ್ತಾನೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆದ್ದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಸೈನಿಕರೆಲ್ಲಾ ಆ ದಿವಸದಲ್ಲಿ ಸುಮ್ಮನಾಗುವರು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |