Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:31 - ಕನ್ನಡ ಸತ್ಯವೇದವು C.L. Bible (BSI)

31 ಸೇನಾಧೀಶ್ವರ ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: “ಎಲೈ ಅಹಂಕಾರಿಯೇ, ನಾನು ನಿನಗೆ ವಿರುದ್ಧನು. ನಿನಗೆ ಹೊತ್ತು ಬಂದಿದೆ. ನಿನ್ನನ್ನು ದಂಡಿಸತಕ್ಕ ಕಾಲ ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ - ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನಗೆ ವಿರುದ್ಧನು; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಬಾಬಿಲೋನೇ, ನೀನು ತುಂಬಾ ದುರಹಂಕಾರಿ. ನಾನು ನಿನಗೆ ವಿರುದ್ಧವಾಗಿದ್ದೇನೆ.” ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ. “ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನನ್ನು ದಂಡಿಸುವ ಸಮಯ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಸೈನ್ಯಗಳ ದೇವರಾದ ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ದಿವಸವೂ, ನಿನ್ನ ಶಿಕ್ಷೆಯ ಕಾಲವೂ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:31
20 ತಿಳಿವುಗಳ ಹೋಲಿಕೆ  

“ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.


ಕಣಿವೆಯಲ್ಲಿನ ನಗರಿಯೇ, ಬಯಲಿನ ಬಂಡೆಯಲ್ಲಿರುವ ಪುರಿಯೇ, ‘ನಮ್ಮ ಮೇಲೆ ಯಾರಿಳಿದು ಬಂದಾರು? ನಮ್ಮ ನಿವಾಸಗಳಿಗೆ ಯಾರು ನುಗ್ಗಿಯಾರು?’ ಎನ್ನುವವರೇ, ಇಗೋ ನಾನೆ ನಿಮಗೆ ವಿರುದ್ಧವಾಗಿದ್ದೇನೆ.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನಗೆ ವಿರುದ್ಧವಾಗಿದ್ದೇನೆ ನಾನು; ಸುಟ್ಟು ಭಸ್ಮಮಾಡುವೆ ನಿನ್ನ ರಥಗಳನು; ಸಂಹರಿಸಿಬಿಡುವೆನು ನಿನ್ನ ಯುವಸಿಂಹಗಳನು; ನಿನಗೆ ಜಗದಲ್ಲೆಲ್ಲ ಬೇಟೆ ಸಿಗದಂತೆ ಮಾಡುವೆನು; ಯಾರೂ ಕೇಳರು ನಿನ್ನ ರಾಯಭಾರಿಗಳ ಮಾತನು.”


“ನರಪುತ್ರನೇ, ನೀನು ಗೋಗನಿಗೆ ವಿರುದ್ಧ ಈ ದೈವೋಕ್ತಿಯನ್ನು ನುಡಿ: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಒಡೆಯನಾದ ಗೋಗನೇ,


ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನೆವೆ, ನಿನಗೆ ನಾ ವಿರೋಧಿಯಾಗಿರುವೆನು ಬಿಚ್ಚಿ ಮುಖದ ಮೇಲೆತ್ತುವೆನು ನಿನ್ನ ನೆರಿಗೆಗಳನು ಜನಾಂಗಗಳಿಗೆ ತೋರಿಸುವೆನು ನಿನ್ನ ಬೆತ್ತಲೆತನವನು ರಾಜ್ಯಗಳಿಗೆ ಕಾಣಿಸುವೆನು ನಿನ್ನ ಅವಮಾನವನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ರಾಜನಾದ ಗೋಗನೇ,


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಆದುದರಿಂದ ಜೆರುಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಸರ್ವೇಶ್ವರನಾದ ನನ್ನ ನುಡಿ.


“ಲೋಕವನ್ನೆಲ್ಲಾ ನಾಶಮಾಡುವ ಎಲೈ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ. ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಬಂಡೆಯ ಮೇಲಿಂದ ಕೆಳಕ್ಕೆ ಉರುಳಿಸುವೆನು. ಸುಟ್ಟ ಬೆಟ್ಟವನ್ನಾಗಿಸುವೆನು.


ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು. ಅದನ್ನು ಯಾರೂ ಎತ್ತರು. ಅದರ ನಗರಗಳಿಗೆ ಬೆಂಕಿಹೊತ್ತಿಸುವೆನು. ಅದು ಸುತ್ತಮುತ್ತಣದನ್ನೆಲ್ಲ ನುಂಗಿಬಿಡುವುದು.”


ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


ಮೋವಾಬ್ಯರಿಗೆ ಬಹಳ ಸೊಕ್ಕೇರಿದೆ! ಅವರ ಹೆಮ್ಮೆಯ ಸುದ್ದಿ, ಡಂಭಾಚಾರ, ಅಹಂಕಾರ, ಗರ್ವ, ಸ್ವಪ್ರತಿಷ್ಠೆ ಇವುಗಳ ಸಮಾಚಾರ ನಮ್ಮ ಕಿವಿಗೆ ಬಿದ್ದಿದೆ. -


ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”


ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು