Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:32 - ಕನ್ನಡ ಸತ್ಯವೇದವು C.L. Bible (BSI)

32 ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು. ಅದನ್ನು ಯಾರೂ ಎತ್ತರು. ಅದರ ನಗರಗಳಿಗೆ ಬೆಂಕಿಹೊತ್ತಿಸುವೆನು. ಅದು ಸುತ್ತಮುತ್ತಣದನ್ನೆಲ್ಲ ನುಂಗಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸೊಕ್ಕಿನ ರಾಜ್ಯವು ಎಡವಿ ಬೀಳುವುದು, ಅದನ್ನು ಯಾರೂ ಎತ್ತರು; ಅದರ ಪಟ್ಟಣಗಳಿಗೆ ಬೆಂಕಿಹೊತ್ತಿಸುವೆನು, ಅದು ಸುತ್ತಲಿರುವುದನ್ನು ನುಂಗಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಸೊಕ್ಕಿನ ರಾಜ್ಯವು ಎಡವಿಬೀಳುವದು, ಅದನ್ನು ಯಾರೂ ಎತ್ತರು; ಅದರ ಪಟ್ಟಣಗಳಿಗೆ ಬೆಂಕಿಹೊತ್ತಿಸುವೆನು, ಅದು ಸುತ್ತುಮುತ್ತಣದನ್ನೆಲ್ಲಾ ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ದುರಹಂಕಾರಿಯಾದ ಬಾಬಿಲೋನ್ ಎಡವಿಬೀಳುವುದು. ಅದನ್ನು ಎಬ್ಬಿಸಲು ಯಾರೂ ಸಹಾಯ ಮಾಡುವದಿಲ್ಲ. ಅದರ ಪಟ್ಟಣಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಆ ಬೆಂಕಿಯು ಅದರ ಸುತ್ತಮುತ್ತಲಿನ ಎಲ್ಲರನ್ನೂ ಸುಟ್ಟುಬಿಡುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು. ಅದನ್ನು ಯಾರೂ ಎತ್ತರು. ಅದರ ನಗರಗಳಿಗೆ ಬೆಂಕಿ ಹೊತ್ತಿಸುವೆನು. ಅದು ಸುತ್ತಮುತ್ತಣದನ್ನೆಲ್ಲ ನುಂಗಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:32
22 ತಿಳಿವುಗಳ ಹೋಲಿಕೆ  

ಆಗ ದಮಸ್ಕದ ಕೋಟೆಯಲ್ಲಿ ಬೆಂಕಿ ಹೊತ್ತಿಸುವೆನು. ಅದು ಬೆನ್‍ಹದದನ ಅರಮನೆಗಳನ್ನು ದಹಿಸಿಬಿಡುವುದು. ಇದು ಸರ್ವಶಕ್ತ ಸರ್ವೇಶ್ವರನಾದ ನನ್ನ ನುಡಿ.”


ನಿಮ್ಮ ದುಷ್ಕೃತ್ಯಗಳಿಗೆ ವಿಧಿಸುವೆನು ತಕ್ಕ ದಂಡನೆ, ಬೆಂಕಿ ಹಚ್ಚುವೆನು ನಿಮ್ಮ ಪುರಿಯೆಂಬ ವನಕ್ಕೆ, ಅದು ಕಬಳಿಸಿಬಿಡುವುದು ಸುತ್ತಮುತ್ತಣ ವಸ್ತುಗಳನ್ನು.”


ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”


ಆದಕಾರಣ ನಾನು ಜುದೇಯದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಜೆರುಸಲೇಮಿನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.”


ಆದಕಾರಣ ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಕೆರಿಯೋತಿನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಸೈನಿಕರ ಆರ್ಭಟ, ರಣಕಹಳೆಗಳ ಗರ್ಜನೆ, ಯುದ್ಧದ ಕೋಲಾಹಲ - ಇವುಗಳ ಮಧ್ಯೆ ಮೋವಾಬಿನ ಜನರು ಮಡಿಯುವರು.


ಆದಕಾರಣ ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಆಗ ಯುದ್ಧಾರ್ಭಟವೂ ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.


ಆದುದರಿಂದ ನಾನು ತೇಮಾನ್ ಪಟ್ಟಣದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೊಚ್ರದ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.


ಆದಕಾರಣ ನಾನು ಟೈರಿನ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.”


ಆದಕಾರಣ ನಾನು ಗಾಜದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.


ನಾನು ಹಜಾಯೇಲನ ಅರಮನೆಯ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್‍ಹದದನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.


ಹಾಗೆ ಅವರ ಎದೆ ಗರ್ವದಿಂದ ಉಬ್ಬಿಹೋಯಿತು. ಮನಸ್ಸಿಗೆ ಸೊಕ್ಕೇರಿಹೋಯಿತು. ಅವರನ್ನೂ ರಾಜಾಸ್ಥಾನದಿಂದ ತಳ್ಳಲಾಯಿತು. ಮಾನ ಕಳೆದುಹೋಯಿತು.


ಆಮೇಲೆ, ‘ಸರ್ವೇಶ್ವರ ಸ್ವಾಮಿ ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಈ ನಗರ ಹೀಗೆಯೇ ಮುಳುಗುವುದು, ಮತ್ತೆ ಏಳದು,’ ಎಂದು ಹೇಳು.” ಇಲ್ಲಿಗೆ ಯೆರೆಮೀಯನ ಪ್ರವಾದನೆ ಮುಗಿಯಿತು.


ಮೂಲೆಗಲ್ಲಿಗಾಗಲಿ, ಅಸ್ತಿವಾರದ ಕಲ್ಲಿಗಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು. ನೀನು ನಿತ್ಯನಾಶಕ್ಕೆ ಗುರಿಯಾಗುವೆ,” ಎನ್ನುತ್ತಾರೆ ಸರ್ವೇಶ್ವರ.


ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


ನನಗೆ ಕೇಡು ಬಗೆದ ಗರ್ವಿಗಳಿಗಾಗಲಿ ಮಾನಭಂಗ I ನಾನಾದರೋ ಗೈವೆ ನಿನ್ನ ನೇಮಗಳ ಧ್ಯಾನಯೋಗ II


“ಕನ್ಯೆ ಇಸ್ರಯೇಲಳು ಬಿದ್ದಿಹಳು ಕೆಳಗೆ ಅಶಕ್ತಳು ಆಕೆ ಮರಳಿ ಏಳಲು ಮೇಲಕೆ ದಿಕ್ಕಿಲ್ಲದೆ ಒರಗಿಹಳು ಧರೆಯ ಮೇಲೆ ಮೇಲೆತ್ತಲು ಯಾರೂ ಗತಿಯಿಲ್ಲದ ಅಬಲೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು