ಯೆರೆಮೀಯ 50:34 - ಕನ್ನಡ ಸತ್ಯವೇದವು C.L. Bible (BSI)34 ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅವರ ರಕ್ಷಕನು ಬಲಿಷ್ಠ. ಸೇನಾಧೀಶ್ವರನಾದ ಯೆಹೋವನೆಂಬದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆದರೆ ದೇವರು ಅವರನ್ನು ಹಿಂದಕ್ಕೆ ಕರೆತರುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಆ ಜನರನ್ನು ನಿಶ್ಚಯವಾಗಿ ಕಾಪಾಡುವನು. ಭೂಮಿಗೆ ವಿಶ್ರಾಂತಿಯನ್ನು ಕೊಡುವ ಉದ್ದೇಶದಿಂದ ಆತನು ಅವರನ್ನು ಕಾಪಾಡುವನು. ಆದರೆ ಬಾಬಿಲೋನಿನಲ್ಲಿ ವಾಸಿಸುವ ಜನರಿಗೆ ಆತನು ವಿಶ್ರಾಂತಿಯನ್ನು ಕೊಡುವದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅವರ ವಿಮೋಚಕನು ಬಲಿಷ್ಠನೇ, ಸೇನಾಧೀಶ್ವರ ಯೆಹೋವ ದೇವರೆಂಬುದೇ ಅವರ ಹೆಸರು; ಅವರು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ, ಬಾಬಿಲೋನಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ, ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವರು. ಅಧ್ಯಾಯವನ್ನು ನೋಡಿ |