Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:38 - ಕನ್ನಡ ಸತ್ಯವೇದವು C.L. Bible (BSI)

38 ಅವರ ನೀರನ್ನೆಲ್ಲ ಹೀರಲಿ ಬೇಗನೆ ಬತ್ತಿಹೋಗಲಿ ಅವರ ತೊರೆ. ಅಕಟಾ! ತುಂಬಿದೆ ಆ ದೇಶ ಬೊಂಬೆಗಳಿಂದ ಮದವೇರಿದೆ ಅದರ ಜನತೆಗೆ ವಿಗ್ರಹಾರಾಧನೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಬೇಗೆಯು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ಅಕಟವಿಕಟ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಬಾಬಿಲೋನಿನ ನೀರಿನ ಮೇಲೆ ಒಂದು ಖಡ್ಗ ಬೀಳಲಿ. ಆ ನೀರು ಬತ್ತಿಹೋಗುವದು. ಬಾಬಿಲೋನ್ ದೇಶದಲ್ಲಿ ಅನೇಕಾನೇಕ ವಿಗ್ರಹಗಳಿವೆ. ಬಾಬಿಲೋನಿನ ಜನರು ಮೂರ್ಖರೆಂಬುದನ್ನು ಆ ವಿಗ್ರಹಗಳು ತೋರಿಸುತ್ತವೆ. ಆ ಜನರಿಗೆ ದುರ್ಗತಿ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿಹೋಗುವುದು; ಏಕೆಂದರೆ ಅದು ವಿಗ್ರಹಗಳ ದೇಶವೇ, ಅವರು ಭಯಂಕರವಾದ ವಿಗ್ರಹಗಳಿಂದ ಹುಚ್ಚರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:38
19 ತಿಳಿವುಗಳ ಹೋಲಿಕೆ  

ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.


“ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.


‘ಬತ್ತಿಹೋಗು’ ಎಂದು ಜಲರಾಶಿಗಳಿಗೆ ‘ಒಣಗಿಹೋಗು’ ಎಂದು ನಿನ್ನ ಸೇರುವ ನದಿಗಳಿಗೆ ಅಪ್ಪಣೆ ಕೊಡುವಾತನು ನಾನೆ.


ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿ: “ಬರಲಿವೆ ಬಾಬಿಲೋನಿನ ವಿಗ್ರಹಗಳನ್ನು ದಂಡಿಸುವ ದಿನಗಳು. ಆಗ ಆ ದೇಶದೊಳೆಲ್ಲ ನರಳಾಡುವರು ಗಾಯಗೊಂಡವರು.


ಇಗೋ ಬಾಬಿಲೋನಿಯದ ವಿಗ್ರಹಗಳನ್ನು ದಂಡಿಸುವ ದಿನಗಳು ಬರಲಿವೆ. ಆ ನಾಡೆಲ್ಲ ನಾಚಿಕೆಗೆ ಈಡಾಗುವುದು. ಅದರ ಪ್ರಜೆಗಳು ಅದರಲ್ಲೇ ಹತರಾಗಿ ಬೀಳುವರು.


ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.


ಅಥೆನ್ಸಿನಲ್ಲಿ ಪೌಲನು, ಸೀಲ ಮತ್ತು ತಿಮೊಥೇಯರನ್ನು ಎದುರುನೋಡುತ್ತಿದ್ದನು. ಆ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ವಿಗ್ರಹಗಳಿರುವುದನ್ನು ಕಂಡು, ಅವನ ಮನಸ್ಸು ಕುದಿಯಿತು.


ಕುಡಿದುಕೊಂಡೇ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ತಮ್ಮ ದೇವರುಗಳನ್ನು ಆರಾಧಿಸಿದರು.


“ಬಾಬಿಲೋನಿಯದ ಬೇಲ್‍ದೇವತೆಯನ್ನು ದಂಡಿಸುವೆನು. ಅದು ನುಂಗಿದ್ದನ್ನು ಅದರ ಬಾಯಿಂದಲೇ ಕಕ್ಕಿಸುವೆನು. ಪ್ರವಾಹವಾಗಿ ಅಲ್ಲಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಬಾರರು. ಆ ಬಾಬಿಲೋನಿನ ಪೌಳಿಗೋಡೆ ಇನ್ನು ಬಿದ್ದುಹೋಗುವುದು.


ಬಾಬಿಲೋನ್ ನನ್ನ ಕೈಯಲ್ಲಿರುವ ಹೊನ್ನಿನ ಪಾನಪಾತ್ರೆ. ಲೋಕದವರೆಲ್ಲರು ಅದರಿಂದ ಕುಡಿದು ಮತ್ತರಾದರು. ರಾಷ್ಟ್ರಗಳು ಅದರಿಂದ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಆದರೆ ನಿಮ್ಮ ಮಾತೃಭೂಮಿ ಮಾನಭಂಗಕ್ಕೆ ಈಡಾಗುವುದು. ನಿಮ್ಮನ್ನು ಹೆತ್ತ ರಾಜ್ಯ ನಾಚಿಕೊಳ್ಳುವುದು. ಹೌದು, ಅದು ಕಾಡಾಗುವುದು. ಕಗ್ಗಾಡು, ಬೆಂಗಾಡು ಆಗುವುದು. ರಾಷ್ಟ್ರಗಳಲ್ಲಿ ಅದು ಕನಿಷ್ಟವಾಗುವುದು.


ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ.


ದೇವರಿಗೆ ನೋಹನ ಮತ್ತು ಅವನ ಸಂಗಡ ನಾವೆಯಲ್ಲಿದ್ದ ಎಲ್ಲ ಪ್ರಾಣಿಪಕ್ಷಿಗಳ ನೆನಪಿತ್ತು. ಅವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲು ನೀರು ತಗ್ಗಿತು.


ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ; ಅವನು ಸಾಯಬೇಕು; ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು