ಯೆರೆಮೀಯ 50:40 - ಕನ್ನಡ ಸತ್ಯವೇದವು C.L. Bible (BSI)40 ಯಾರೂ ನೆಲಸಲಾಗಲಿಲ್ಲ ನಾನು ಕೆಡವಿದಾ ಸೊದೋಮ್ ಗೊಮೋರ ನಗರಗಳಲ್ಲಿ ಅದರ ಸುತ್ತಮುತ್ತಣ ಊರುಗಳಲ್ಲಿ ಯಾರೂ ವಾಸಿಸರು ಯಾವ ನರಪ್ರಾಣಿಯೂ ನೆಲಸದು, ಬಾಬಿಲೋನಿನಲ್ಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ದೇವರು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ಇಳಕೊಳ್ಳನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ದೇವರು ಸೊದೋಮ್ ಗೊಮೋರ ನಗರಗಳನ್ನೂ ಅವುಗಳ ಸುತ್ತಮುತ್ತಲಿನ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದನು. ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಅದೇ ರೀತಿ ಬಾಬಿಲೋನಿನಲ್ಲಿ ಯಾರೂ ವಾಸಮಾಡುವದಿಲ್ಲ. ವಾಸಮಾಡಲು ಅಲ್ಲಿಗೆ ಯಾರೂ ಹೋಗುವದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ” ಎಂದು ಯೆಹೋವ ದೇವರು ಅನ್ನುತ್ತಾರೆ. ಅಧ್ಯಾಯವನ್ನು ನೋಡಿ |
ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”