Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:41 - ಕನ್ನಡ ಸತ್ಯವೇದವು C.L. Bible (BSI)

41 ಇಗೋ ರಾಷ್ಟ್ರವೊಂದು ಬರುವುದು ಉತ್ತರದಿಂದ: ಎಚ್ಚರಗೊಳ್ವರು ಮಹಾಜನ ಹಾಗೂ ಅರಸರು ಬಹುಮಂದಿ ಬರುವರವರು ಲೋಕದ ಕಟ್ಟಕಡೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆಹಾ, ಉತ್ತರ ದಿಕ್ಕಿನಿಂದ ಒಂದು ಜನಾಂಗವು ಬರುತ್ತೆ, ಮಹಾ ಜನವೂ, ಬಹು ಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆಹಾ, ಬಡಗಲಿಂದ ಒಂದು ಜನಾಂಗವು ಬರುತ್ತದೆ, ಮಹಾ ಜನವೂ ಬಹುಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 “ಇಗೋ, ಉತ್ತರದಿಂದ ಜನರು ಬರುತ್ತಿದ್ದಾರೆ. ಅವರು ಒಂದು ಪ್ರಬಲ ರಾಷ್ಟ್ರದಿಂದ ಬರುತ್ತಿದ್ದಾರೆ. ಇಡೀ ಜಗತ್ತಿನ ಹಲವಾರು ರಾಜರುಗಳು ಒಟ್ಟುಗೂಡಿ ಬರುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 “ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು ಅನೇಕ ಅರಸರು ಎಚ್ಚರಗೊಳ್ಳುವರು. ಅವರು ಲೋಕದ ಕಟ್ಟಕಡೆಯಿಂದ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:41
11 ತಿಳಿವುಗಳ ಹೋಲಿಕೆ  

ಇಗೋ, ದೊಡ್ಡ ರಾಷ್ಟ್ರಗಳ ಸಮೂಹವನ್ನು ಎಬ್ಬಿಸಿ ಉತ್ತರದಿಂದ ಬಾಬಿಲೋನಿಯದ ಮೇಲೆ ಬೀಳಮಾಡುವೆನು. ಅವು ಬಾಬಿಲೋನಿಗೆ ವಿರುದ್ಧ, ವ್ಯೂಹಕಟ್ಟಿ ಅದನ್ನು ಬುಡಮೇಲು ಮಾಡುವುವು. ಅವುಗಳು ಪ್ರಯೋಗಿಸುವ ಬಾಣಗಳು ಯುದ್ಧ ಪ್ರವೀಣ ಶೂರನಂತಿರುವುವು; ಅವು ಸುಮ್ಮನೆ ಹಿಂದಿರುಗವು.


ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.


ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ;


ಅನೇಕ ರಾಷ್ಟ್ರಗಳೂ ಮಹಾರಾಜರೂ ಅವರನ್ನು ಗುಲಾಮರನ್ನಾಗಿಸಿಕೊಳ್ಳುವರು. ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿ ತೀರಿಸುವೆನು.”


ಇದರ ಅರ್ಥ ಹೀಗಿದೆ : “ಮೆನೇ” ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು