Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:42 - ಕನ್ನಡ ಸತ್ಯವೇದವು C.L. Bible (BSI)

42 ಆ ಕ್ರೂರಿಗಳು, ಆ ನಿಷ್ಕರುಣಿಗಳು ಹಿಡಿದುಕೊಂಡಿರುವರು ಬಿಲ್ಲನ್ನೂ ಈಟಿಯನ್ನೂ. ಅವರ ಧ್ವನಿ ಮೊರೆಯುತ್ತದೆ ಸಮುದ್ರದಂತೆ ಕುದುರೆ ಸವಾರಿ ತೊಡಗಲಿದೆ. ಬಾಬಿಲೋನ್ ನಗರಿಯೇ, ಕೇಳು, ಆ ಸೈನ್ಯ ಶೂರವೀರರಿಂದ ಕೂಡಿದೆ. ಅದು ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ. ಸರ್ವೇಶ್ವರನಾದ ನನ್ನ ನುಡಿ ಇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಬಿಲ್ಲನ್ನೂ ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ. ಅವರು ಕ್ರೂರರು, ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಬಾಬಿಲೋನಿನ ಮಗಳೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:42
23 ತಿಳಿವುಗಳ ಹೋಲಿಕೆ  

ಗುರುಗುಟ್ಟುತಿಹರು ಯೆಹೂದ್ಯರ ಮೇಲೆ ಭೋರ್ಗರೆಯುವ ಸಮುದ್ರದಂತೆ; ನಾಡಿನೆಲ್ಲೆಡೆ ಕವಿದಿಹುದು ಗಾಡಾಂಧಕಾರ; ತಾಂಡವವಾಡುತಿಹುದು ನೋಡಿದೆಡೆ ದುಃಖದುಗುಡ; ಮೋಡ ಕವಿದು ಇರುಳಾಗಿಹುದು ಹಗಲೊಳು ಕೂಡ !


ಯುದ್ಧ ಕುದುರೆಗಳೋಟದ ಶಬ್ದಕ್ಕೂ ರಥಗಳ ರಭಸಕ್ಕೂ ಚಕ್ರಗಳ ಚಟಪಟಕ್ಕೂ ಹೆದರಿ ಜೋಲುಬೀಳುವುವು ಹೆತ್ತವರ ಕೈಗಳು. ತಮ್ಮ ಮಕ್ಕಳನ್ನೂ ಹಿಂದಿರುಗಿ ನೋಡದೆ ಹೋಗುವರು.


ವೈರಿ ಕುದುರೆಗಳ ಬುಸುಗುಟ್ಟುವಿಕೆ ಏಕೆ ಕೇಳಿಬರುತ್ತಿದೆ ದಾನಿನಿಂದ? ನಾಡನ್ನೆ ಕಂಪಿಸುತ್ತಿದೆ ಅವುಗಳ ಕೆನೆತದ ನಾದ. ಶತ್ರುಗಳು ಬಂದೇಬಿಟ್ಟರು ! ನಾಡನ್ನೂ ಅದರಲ್ಲಿ ಇರುವುದೆಲ್ಲವನ್ನೂ, ನಗರವನ್ನೂ ಅದರ ನಿವಾಸಿಗಳನ್ನೂ ನುಂಗಿಯೇ ಬಿಟ್ಟರು !”


“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


“ಬಿಲ್ಲುಗಾರರೇ, ನೀವೆಲ್ಲರು ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆಹಾಕಿರಿ. ಬಾಣಗಳನ್ನು ಮಿಗಿಸದೆ ಎಸೆಯಿರಿ. ಅದು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದೆ.


ಏಕೆನೆ, ಎಡೆಬಿಡದೆ ದಂಡಿಸಿದರು ಪ್ರಜೆಗಳನು ಕೋಪೋದ್ರೇಕದಿಂದ ತಡೆಯಿಲ್ಲದೆ ದಬ್ಬಾಳಿಕೆ ನಡೆಸಿದರು ರಾಷ್ಟ್ರಗಳ ಮೇಲೆ ಸಿಟ್ಟಿನಿಂದ.


ಚೂಪಾಗಿವೆ ಅವರ ಬಾಣಗಳು; ಬಿಗಿದಿವೆ ಬಿಲ್ಲುಗಳು, ಬೆಣಚುಕಲ್ಲಿನಂತಿವೆ ಕುದುರೆಗಳ ಗೊರಸುಗಳು, ಸುತ್ತುತ್ತಿವೆ ಸುಂಟರಗಾಳಿಯಂತವರ ಚಕ್ರಗಳು.


ನಿನ್ನೊಡಂಬಡಿಕೆಯನು ಗಮನವಿಟ್ಟು ಮಾನ್ಯಮಾಡು I ಕಗ್ಗತ್ತಲಿಗು, ಬಾಧಕರಿಗು ಬೀಡಾಗಿದೆ ನಾಡು II


ನಡುಗಿದವು ರಾಷ್ಟ್ರಗಳು, ಉಡುಗಿದವು ರಾಜ್ಯಗಳು I ದೇವರ ಗರ್ಜನೆಗೆ ಕರಗಿತು ಧರೆಯೆಲ್ಲವು II


“ಕೆಳಕ್ಕಿಳಿದು ಬಾ, ಯುವತಿಯೇ ಧೂಳಲ್ಲಿ ಕುಳಿತುಕೋ, ಬಾಬೆಲೆ ! ಕುವರಿಯೇ, ಕುಕ್ಕರಿಸು ನೆಲದಲಿ ಸಿಂಹಾಸನವಿಲ್ಲ ಇಲ್ಲಿ. ಎಲೈ, ಕಸ್ದೀಯರ ನಗರಿಯೇ, ನೀನಲ್ಲ ಇನ್ನು ಕೋಮಲೆ,, ಸುಕುಮಾರಿ ಎಂದು ಎನಿಸಿಕೊಳ್ಳೆ.


ನಿನ್ನ ನಲ್ಲರೆಲ್ಲರು ಮರೆತುಬಿಟ್ಟರು, ನಿನ್ನನ್ನು ಹುಡುಕದಿರುವರು ಶತ್ರುವಿನಂತೆ ನಿನ್ನನ್ನು ಥಳಿಸಿದೆನು, ಕ್ರೂರವಾಗಿ ದಂಡಿಸಿದೆನು. ಏಕೆಂದರೆ, ನಿನ್ನ ಅಪರಾಧ ಹೆಚ್ಚಿದೆ ನಿನ್ನ ಪಾಪಗಳು ಲೆಕ್ಕವಿಲ್ಲದಿವೆ.


ಇಗೋ, ದೊಡ್ಡ ರಾಷ್ಟ್ರಗಳ ಸಮೂಹವನ್ನು ಎಬ್ಬಿಸಿ ಉತ್ತರದಿಂದ ಬಾಬಿಲೋನಿಯದ ಮೇಲೆ ಬೀಳಮಾಡುವೆನು. ಅವು ಬಾಬಿಲೋನಿಗೆ ವಿರುದ್ಧ, ವ್ಯೂಹಕಟ್ಟಿ ಅದನ್ನು ಬುಡಮೇಲು ಮಾಡುವುವು. ಅವುಗಳು ಪ್ರಯೋಗಿಸುವ ಬಾಣಗಳು ಯುದ್ಧ ಪ್ರವೀಣ ಶೂರನಂತಿರುವುವು; ಅವು ಸುಮ್ಮನೆ ಹಿಂದಿರುಗವು.


“ನಾಡಿನಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲ ಕೊಂಬೂದಿರಿ, ರಾಷ್ಟ್ರಗಳನ್ನು ಸಜ್ಜುಮಾಡಿರಿ. ಬಾಬಿಲೋನಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿ. ಸೋಲಿಸಬಲ್ಲ ಸೇನಾಪತಿಯನ್ನು ನೇಮಿಸಿರಿ. ಬಿರುಸಾದ ಅಶ್ವಬಲವನ್ನು ಮಿಡತೆಗಳ ದಂಡಿನೋಪಾದಿ ಬರಮಾಡಿ.


ಆದುದರಿಂದ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಟೈರೇ, ಇಗೋ ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತೆರೆಗಳನ್ನು ಎಬ್ಬಿಸುವಂತೆ ನಾನು ಬಹುಜನಾಂಗಗಳನ್ನು ನಿನ್ನ ವಿರುದ್ಧ ಎಬ್ಬಿಸುವೆನು.


ಬೆಟ್ಟಗಳ ತುತ್ತತುದಿಯಲ್ಲಿ ಹಾರಾಡುತ್ತವೆ; ರಥಗಳಂತೆ ಚೀತ್ಕಾರಮಾಡುತ್ತವೆ; ಕೂಳೆಸುಡುವ ಬೆಂಕಿಯಂತೆ ಚಟಪಟ ಮಾಡುತ್ತವೆ; ಸಮರಕ್ಕೆ ಸಿದ್ಧವಾದ ಶೂರರ ಸೈನ್ಯದಂತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು