Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:44 - ಕನ್ನಡ ಸತ್ಯವೇದವು C.L. Bible (BSI)

44 ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೋರ್ದನಿನ ದಟ್ಟಡವಿಯಿಂದ [ಕಸ್ದೀಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು; ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:44
18 ತಿಳಿವುಗಳ ಹೋಲಿಕೆ  

ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.


ನೆನಪಿಗೆ ತಂದುಕೊಳ್ಳಿ ಪ್ರಾಚೀನ ಘಟನೆಗಳನ್ನು ಅರಿತುಕೊಳ್ಳಿ ನಾನೇ ದೇವರು, ಇನ್ನಾರೂ ಇಲ್ಲ ಎಂಬುದನ್ನು ನಾನೇ ಪರಮದೇವರು, ನನಗೆ ಸರಿಸಮಾನವಿಲ್ಲ ಎಂಬುದನ್ನು.


ಇಂತೆನ್ನುತ್ತಾರೆ ಸರ್ವೇಶ್ವರ : “ನೀವೇ ನನಗೆ ಸಾಕ್ಷಿಗಳು; ನನ್ನಿಂದ ಆಯ್ಕೆಯಾದ ನನ್ನ ದಾಸರು; ಏಕೆನೆ ನಾನೇ ಪರಮಾತ್ಮನೆಂದು ಅರಿತು, ವಿಶ್ವಾಸವಿಟ್ಟು, ಗ್ರಹಿಸಬೇಕಾದವರು; ದೇವರಾರೂ ನನಗಿಂತ ಮುಂದೆ ಇರಲಿಲ್ಲ ನನ್ನಾನಂತರವೂ ಇರುವುದಿಲ್ಲ.


ಹುರಿದುಂಬಿಸಿ ಕರೆತಂದಿರುವೆನು ಒಬ್ಬನನ್ನು ಉತ್ತರದಿಂದ ನನ್ನ ನಾಮವನ್ನು ಪ್ರಚುರಪಡಿಸಲು ಬಂದಿಹನಾತ ಪೂರ್ವದಿಂದ ಕುಂಬಾರನು ಜೇಡಿಮಣ್ಣನ್ನು ತುಳಿಯುವಂತೆ ತುಳಿಯುವನಾತ ರಾಜರನ್ನು ಮಣ್ಣಂತೆ.


“ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನ ಸ್ವಾಮಿ.


ಮೇಘಮಂಡಲದಲಿ ಸಮಾನನಾರು ಪ್ರಭುವಿಗೆ I ದೇವದೂತರೊಳು ಹೋಲಿಕೆ ಯಾವುದು ಆತನಿಗೆ II


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಗುಹೆಬಿಟ್ಟು ಬಂದ ಸಿಂಹದಂತೆ ಬಂದಿರುವನಾತ. ಆತನ ಕೋಪಾಗ್ನಿಯ ನಿಮಿತ್ತ ತುಂಡರಿಸುವಾ ಖಡ್ಗದ ಪ್ರಯುಕ್ತ ಅವರ ನಾಡಾಗಿದೆ ಬೆಂಗಾಡು.


ಇಂತಿರಲು ಯಾರಿಗೆ ಹೋಲಿಸಬಲ್ಲಿರಿ ದೇವರನು? ಕೊಡಬಲ್ಲಿರಾ ಆತನಿಗೆ ಯಾವುದಾದರೊಂದು ಉಪಮಾನವನು?


ಪ್ರಭೂ, ಶಕ್ತಿಸ್ವರೂಪ, ನಿನ್ನ ಸುತ್ತುವರೆದಿದೆ ಸತ್ಯತೆ I ಸ್ವಾಮಿದೇವಾ, ಸರ್ವೇಶ್ವರಾ, ನಿನಗೆಲ್ಲಿಯದು ಸಮಾನತೆ? II


ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು.


(ಆಗ ಸರ್ವೇಶ್ವರ ನನಗೆ) : “ಕಾಲಾಳುಗಳ ಸಂಗಡ ಓಡಲು ಆಯಾಸಗೊಂಡೆಯಾದರೆ ಕುದುರೆಗಳೊಂದಿಗೆ ಓಡಿ ಹೇಗೆ ಹೋರಾಡುವೆ? ಪ್ರಶಾಂತ ಪ್ರದೇಶದಲ್ಲಿ ನಿರ್ಭಯನಾಗಿ ನಿಲ್ಲಲಾರೆಯಾದರೆ ಜೋರ್ಡಾನಿನ ದಟ್ಟ ಅಡವಿಯಲ್ಲಿ ಏನು ಮಾಡಬಲ್ಲೆ?


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ.


ಆದರ ಸುತ್ತಲು ರಣಘೋಷಮಾಡಿರಿ. ಇಗೋ, ಅದು ಶರಣಾಗತವಾಯಿತು! ಅದರ ಕೋಟೆಕೊತ್ತಲಗಳು ಬಿದ್ದವು. ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಸರ್ವೇಶ್ವರನಾದ ನಾನು ಅದಕ್ಕೆ ಮುಯ್ಯಿತೀರಿಸಿದ್ದೇನೆ. ನೀವೂ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ.


ಆಹಾ! ಕೇಳಿಬರುತ್ತಿದೆ ಕುರುಬರ ಗೋಳಾಟ ಬರಡಾಗಿದೆ ಅವರ ಹುಲ್ಲುಗಾವಲ ನೋಟ ಕೇಳಿರಿ, ಇಗೋ, ಯುವಸಿಂಹಗಳ ಆಕ್ರಂದನ ಏಕೆನೆ ಪಾಳುಬಿದ್ದಿದೆ ಜೋರ್ಡನಿನ ದಟ್ಟವನ!


ಒಟ್ಟುಗೂಡಿ ಕೇಳಿ ನೀವೆಲ್ಲರು ಇದನ್ನು : ಆ ದೇವರುಗಳಲ್ಲಿ ಮುಂತಿಳಿಸಿದವನಾರು ಈ ಸಂಗತಿಯನು? ನನ್ನ ಪ್ರೀತಿಗೆ ಪಾತ್ರನಾದ ವ್ಯಕ್ತಿ ಸೈರಸನು ಕಸ್ದೀಯರ ಮೇಲೆ ಕೈಯೆತ್ತುವನು, ಈಡೇರಿಸುವನು ಬಾಬೆಲಿನಲ್ಲಿ ನನ್ನ ಇಷ್ಟಾರ್ಥವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು