Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:5 - ಕನ್ನಡ ಸತ್ಯವೇದವು C.L. Bible (BSI)

5 ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ - ಬನ್ನಿರಿ, ಯೆಹೋವನನ್ನು ಆಶ್ರಯಿಸಿ ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಬಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:5
26 ತಿಳಿವುಗಳ ಹೋಲಿಕೆ  

ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ಇದನ್ನು, ನಾವು ನಿರೀಕ್ಷಿಸಲೇ ಇಲ್ಲ! ಮೊಟ್ಟಮೊದಲು ಅವರು ತಮ್ಮನ್ನೇ ಪ್ರಭುವಿಗೆ ಸಮರ್ಪಿಸಿದರು. ಅನಂತರ ದೈವಚಿತ್ತಕ್ಕೆ ಅನುಗುಣವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ಸಾಗುಸಾಗುತ್ತಾ ಬೆಳೆವುದಾ ಯಾತ್ರಿಕರ ಚೇತನ I ಪಡೆವರು ಸಿಯೋನ್ ಗಿರಿಯೊಳು ದೇವಾಧಿದೇವನ ದರ್ಶನ II


ಅದಕ್ಕೆ ಅವನು, “ಸೇನಾಧೀಶ್ವರರಾದ ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟನು.


ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.


ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


ಆ ಕಾಲದಲ್ಲಿ ಜುದೇಯ ವಂಶವು ಇಸ್ರಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತ್ಯವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”


“ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೊ ನೀನು ಯಾವ ಮಾರ್ಗವಾಗಿ ಹೋದೆಯೋ ಆ ಮಾರ್ಗವನ್ನು ನೆನಸಿಕೊ. ಇಸ್ರಯೇಲೆಂಬ ಯುವತಿಯೇ ಹಿಂದಿರುಗು ಈ ನಿನ್ನ ನಗರಕ್ಕೆ ಹಿಂದಿರುಗು.


ಇದಕ್ಕನುಸಾರ ನಾನು ಕುವರಿಯನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವರು. ಆಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವೆ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.


ಅಲ್ಲಿ ಇಸ್ರಯೇಲಿನ ಪರ್ವತಗಳ ಮೇಲೆ, ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿರರು; ಭಿನ್ನರಾಜ್ಯದವರಾಗಿ ಇರರು.


ಯೆಹೂದ್ಯಜನರೂ ಇಸ್ರಯೇಲಿನ ಜನರೂ ಪುನಃ ಒಂದುಗೂಡುವರು. ಒಬ್ಬನೇ ಅಧಿಪತಿಯನ್ನು ಆರಿಸಿಕೊಳ್ಳುವರು. ಅವರೆಲ್ಲರೂ ನಾನಾ ದೇಶಗಳಿಂದ ಹೊರಟುಬರುವರು. ಜೆಸ್ರೀಲಿನ ಆ ದಿನವು ಮಹತ್ತಾದುದು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು