Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:8 - ಕನ್ನಡ ಸತ್ಯವೇದವು C.L. Bible (BSI)

8 “ಬಾಬಿಲೋನ್ ದೇಶದಿಂದ ಓಡಿಹೋಗಿ, ಬಾಬಿಲೋನಿಯರ ಆ ಸೀಮೆಯಿಂದ ಹೊರಡಿ. ಹಿಂಡುಗಳ ಮುಂದೆ ನಡೆಯುವ ಹೋತಗಳಂತೆ ಮುಂತೆರಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಾಬೆಲ್ ದೇಶದೊಳಗಿಂದ ಓಡಿಹೋಗಿರಿ, ಕಸ್ದೀಯರ ಸೀಮೆಯಿಂದ ಹೊರಡಿರಿ; ಹಿಂಡುಗಳ ಮುಂದೆ ಹೋಗುವ ಹೋತಗಳಂತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಾಬೆಲ್ ದೇಶದೊಳಗಿಂದ ಓಡಿಹೋಗಿರಿ. ಕಸ್ದೀಯರ ಸೀಮೆಯಿಂದ ಹೊರಡಿರಿ; ಹಿಂಡುಗಳ ಮುಂದಣ ಹಿರಿಮಣಿ ಹೋತಗಳಂತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಬಾಬಿಲೋನಿನಿಂದ ಓಡಿಹೋಗಿರಿ. ಬಾಬಿಲೋನಿನ ಪ್ರದೇಶವನ್ನು ಬಿಟ್ಟುಬಿಡಿ. ಕುರಿಮಂದೆಯ ಮುಂದೆ ಹೋಗುವ ಹೋತದಂತೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಬಾಬಿಲೋನಿನೊಳಗಿಂದ ಓಡಿಹೋಗಿರಿ; ಬಾಬಿಲೋನಿನ ಸೀಮೆಯಿಂದ ಹೊರಡಿರಿ; ಮಂದೆಯ ಮುಂದೆ ಹೋತಗಳ ಹಾಗೆ ಇರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:8
11 ತಿಳಿವುಗಳ ಹೋಲಿಕೆ  

ನೀವು ಬಾಬಿಲೋನಿನಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿ, ಅದಕ್ಕೆ ಉಂಟಾಗುವ ದಂಡನೆಗೆ ನೀವು ಒಳಗಾಗಬೇಡಿ. ಸರ್ವೇಶ್ವರನಾದ ನಾನು ಮುಯ್ಯಿತೀರಿಸುವ ಕಾಲಬಂದಿದೆ. ಬಾಬಿಲೋನಿಗೆ ತಕ್ಕ ಪ್ರತೀಕಾರ ಮಾಡುವೆನು.


ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


ನನ್ನ ಜನರೇ, ಬಾಬಿಲೋನನ್ನು ಬಿಟ್ಟು ಹೊರಡಿ. ನನ್ನ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಿ.


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಕತ್ತೆತ್ತಿ ನಡೆಯುವ ಹುಂಜ, ಮಂದೆಗೆ ಮುಂದೆ ಹೋಗುವ ಹೋತ, ಸೈನ್ಯಸಮೇತನಾದ ರಾಜ.


ಇಸ್ರಯೇಲ್ ಸಮಾಜದವರಿಗೆ ಅವನು, “ಈ ದುಷ್ಟರ ಡೇರೆಗಳ ಬಳಿಯಿರದೆ ದೂರಹೋಗಿ. ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬೇಡಿ. ಇವರ ದೋಷಗಳಿಗೆ ಬರಲಿರುವ ಶಿಕ್ಷೆ ನಿಮ್ಮನ್ನು ಕೊಚ್ಚಿಕೊಂಡು ಹೋದೀತು,” ಎಂದು ಎಚ್ಚರಿಸಿದನು.


ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.


ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು