Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಇಗೋ, ನಾನು ಬಾಬಿಲೋನಿನ ಮೇಲೂ ಅದರ ಲೇಬ್‍ಕಾಮೈ ಪ್ರಜೆಗಳ ಮೇಲೂ ವಿನಾಶಕಾರಿಯಾದ ಗಾಳಿಬೀಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಮೇಲೂ, ಲೇಬ್ ಕಾಮೈ ದೇಶದವರ ಮೇಲೂ ನಾಶನದ ಗಾಳಿಯನ್ನು ಬೀಸಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಮೇಲೂ ಲೇಬ್‍ಕಾಮೈ ದೇಶದವರ ಮೇಲೂ ನಾಶನದ ಗಾಳಿಯನ್ನು ಬೀಸಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೀಗೆನ್ನುತ್ತಾನೆ: “ನಾನು ಭಯಂಕರವಾದ ಬಿರುಗಾಳಿ ಬೀಸುವಂತೆ ಮಾಡುವೆನು. ಅದು ಬಾಬಿಲೋನಿನ ಮೇಲೂ ಬಾಬಿಲೋನಿನ ಜನರ ಮೇಲೂ ಬೀಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಗೋ, ನಾನು ಬಾಬಿಲೋನಿಗೆ ವಿರೋಧವಾಗಿಯೂ, ನನಗೆದುರಾಗಿ ಎದ್ದಿರುವ ಲೇಬ್ ಕಾಮೈ ಪ್ರಜೆಗಳ ವಿರೋಧವಾಗಿಯೂ ನಾಶಕಾರಿಯಾದ ಗಾಳಿಬೀಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:1
23 ತಿಳಿವುಗಳ ಹೋಲಿಕೆ  

ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.


ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.


ಸೇನಾಧೀಶ್ವರರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ: “ಇಸ್ರಯೇಲಿನ ಹಾಗು ಜುದೇಯದ ಜನರಿಬ್ಬರೂ ಹಿಂಸೆಗೆ ಗುರಿಯಾಗಿದ್ದಾರೆ. ಅವರನ್ನು ಸೆರೆಗೆ ಒಯ್ದವರೆಲ್ಲರು ಅವರನ್ನು ಬಿಡುವುದಿಲ್ಲವೆಂದು ಪಟ್ಟುಹಿಡಿದಿದ್ದಾರೆ.


“ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.


ಬಾಬಿಲೋನೇ, ನಿನಗೆ ನಾನು ಉರುಲೊಡ್ಡಿದ್ದೆ. ನೀನು ತಿಳಿಯದೆ ಅದರಲ್ಲಿ ಸಿಕ್ಕಿಕೊಂಡೆ. ನೀನು ಸರ್ವೇಶ್ವರನೊಂದಿಗೆ ಹೋರಾಡಿದ್ದರಿಂದ ಬೋನಿನ ವಶವಾದೆ.


ಸರ್ವೇಶ್ವರ ಹೀಗೆನ್ನುತ್ತಾರೆ: “ಮೆರಾಥಯಿಮ್ ನಾಡಿಗೂ ಪಕೋದಿನ ನಿವಾಸಿಗಳಿಗೂ ವಿರುದ್ಧ ದಂಡೆತ್ತಿಹೋಗಿ ಅವರನ್ನು ಸಂಹರಿಸು. ಆ ನಾಡನ್ನು ಪೂರ್ತಿಯಾಗಿ ಹಾಳುಮಾಡು. ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.


ಇಗೋ, ದೊಡ್ಡ ರಾಷ್ಟ್ರಗಳ ಸಮೂಹವನ್ನು ಎಬ್ಬಿಸಿ ಉತ್ತರದಿಂದ ಬಾಬಿಲೋನಿಯದ ಮೇಲೆ ಬೀಳಮಾಡುವೆನು. ಅವು ಬಾಬಿಲೋನಿಗೆ ವಿರುದ್ಧ, ವ್ಯೂಹಕಟ್ಟಿ ಅದನ್ನು ಬುಡಮೇಲು ಮಾಡುವುವು. ಅವುಗಳು ಪ್ರಯೋಗಿಸುವ ಬಾಣಗಳು ಯುದ್ಧ ಪ್ರವೀಣ ಶೂರನಂತಿರುವುವು; ಅವು ಸುಮ್ಮನೆ ಹಿಂದಿರುಗವು.


ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ ಅವರನ್ನು ಆಯಾ ಗಾಳಿಗೆ ತೂರಿಬಿಡುವೆನು. ಏಲಾಮಿನಿಂದ ದೇಶಭ್ರಷ್ಟರಾದವರು ಆಶ್ರಯ ಹುಡುಕದ ರಾಜ್ಯವೇ ಇರದು.


ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೇ ಕತ್ತಿಗೆ ತುತ್ತಾಗುವಂತೆ ಮಾಡುವೆನು, ಇದು ಸರ್ವೇಶ್ವರನ ನುಡಿ, ಎಂದು ತಿಳಿಸಿರಿ,” ಎಂದು ಉತ್ತರಕೊಟ್ಟನು.


ಬಾಬಿಲೋನ್ ನಗರವೇ ಕೇಳು : ಅಳಿವು ಕಾದಿದೆ ನಿನಗೆ I ಭಲೆ, ನೀನೆಮಗೆ ಮಾಡಿದ್ದಕ್ಕೆ ಮುಯ್ ತೀರಿಸುವವಗೆ I ನಿನ್ನ ಮಕ್ಕಳನೆತ್ತಿ ಬಂಡೆಗಪ್ಪಳಿಸುವವನಿಗೆ II


ಇಗೋ ಕೇಳಿ: ಸರ್ವೇಶ್ವರನ ಕೋಪವೆಂಬ ಬಿರುಗಾಳಿ ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಸುಂಟರಗಾಳಿಯಂತೆ ಬಡಿಯುವುದು.


ಸೇನಾಧೀಶ್ವರ ಸರ್ವೇಶ್ವರನು ಕೋಪೋದ್ರೇಕದಿಂದ ರೋಷಾವೇಶದಿಂದ ಕೆರಳುವ ದಿನದಂದು ಆಕಾಶಮಂಡಲ ನಡುಗುವುದು, ಭೂಮಂಡಲ ಸ್ಥಳಪಲ್ಲಟಗೊಳ್ಳುವುದು.


‘ಏರುವೆ ಉನ್ನತ ಮೇಘಮಂಡಲದ ಮೇಲಕೆ, ಸರಿಸಮಾನನಾಗುವೆ ಉನ್ನತೋನ್ನತನಿಗೆ’.


ಕಡಲಡವಿಯ ಕುರಿತು ದೈವೋಕ್ತಿ : ದಕ್ಷಿಣ ಸೀಮೆಯ ನಾಡನ್ನು ಕಸದಂತೆ ಗುಡಿಸುವ ಸುಂಟರಗಾಳಿಯ ಹಾಗೆ, ಅರಣ್ಯದ ಕಡೆಯ ಭಯಂಕರ ನಾಡಿನಿಂದ ಗಂಡಾಂತರ ಬರಲಿದೆ.


“ಕೆಳಕ್ಕಿಳಿದು ಬಾ, ಯುವತಿಯೇ ಧೂಳಲ್ಲಿ ಕುಳಿತುಕೋ, ಬಾಬೆಲೆ ! ಕುವರಿಯೇ, ಕುಕ್ಕರಿಸು ನೆಲದಲಿ ಸಿಂಹಾಸನವಿಲ್ಲ ಇಲ್ಲಿ. ಎಲೈ, ಕಸ್ದೀಯರ ನಗರಿಯೇ, ನೀನಲ್ಲ ಇನ್ನು ಕೋಮಲೆ,, ಸುಕುಮಾರಿ ಎಂದು ಎನಿಸಿಕೊಳ್ಳೆ.


ಬಾಬಿಲೋನ್ ಆಕಾಶದ ತನಕ ಬೆಳೆದರೂ ಎತ್ತರವಾದ, ಬಲವಾದ ಕೋಟೆಕಟ್ಟಿ ಭದ್ರಪಡಿಸಿಕೊಂಡರೂ ನನ್ನ ಅಪ್ಪಣೆಯ ಮೇರೆಗೆ ಜನರು ಹಾಳುಮಾಡುವರು; ಅದರ ಮೇಲೆ ಬೀಳುವರು. ಸರ್ವೇಶ್ವರನಾದ ನನ್ನ ನುಡಿ ಇದು.”


ಸೆರಾಯನು ಸರಬರಾಯಿನ ಕಾರಬಾರಿ. ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲ ಕೇಡಿನ ವಿಷಯವನ್ನು, ಅಂದರೆ ಬಾಬಿಲೋನಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲ ಸಂಗತಿಗಳನ್ನು, ಒಂದು ಗ್ರಂಥವಾಗಿ ಬರೆದು ಸೆರಾಯನಿಗೆ ಹೀಗೆಂದು ಹೇಳಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು