ಯೆರೆಮೀಯ 51:14 - ಕನ್ನಡ ಸತ್ಯವೇದವು C.L. Bible (BSI)14 ಸೇನಾಧೀಶ್ವರ ಸರ್ವೇಶ್ವರ ತಮ್ಮ ಮೇಲೆ ಆಣೆಯಿಟ್ಟು ಹೇಳುವುದು ಇದು: “ಖಂಡಿತವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುವೆನು. ಅವರು ನಿನ್ನ ಮೇಲೆ ಜಯಘೋಷಮಾಡುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು, ‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು - ಖಂಡಿತವಾಗಿ ನಾನು ನಿನ್ನನ್ನು ವಿುಡಿತೆಗಳಷ್ಟು ಅಸಂಖ್ಯಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಆರ್ಭಟಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸರ್ವಶಕ್ತನಾದ ಯೆಹೋವನು ತನ್ನ ಮೇಲೆ ಆಣೆ ಇಟ್ಟುಕೊಂಡು ಹೀಗೆ ಹೇಳಿದ್ದಾನೆ: “ಬಾಬಿಲೋನೇ, ನಾನು ಖಂಡಿತವಾಗಿ ನಿನ್ನನ್ನು ವೈರಿ ಸೈನಿಕರಿಂದ ತುಂಬಿಸಿಬಿಡುವೆನು. ಅವರು ಮಿಡತೆಗಳ ಸಮೂಹದಂತೆ ವ್ಯಾಪಿಸುವರು. ಆ ಸೈನಿಕರು ನಿನ್ನ ವಿರುದ್ಧ ಯುದ್ಧದಲ್ಲಿ ಜಯಗಳಿಸುವರು. ಅವರು ನಿನ್ನ ಮೇಲೆ ನಿಂತುಕೊಂಡು ಜಯಘೋಷ ಮಾಡುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸೇನಾಧೀಶ್ವರ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟು: ನಿಶ್ಚಯವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧವಾಗಿ ಆರ್ಭಟವನ್ನು ಎತ್ತುವರು. ಅಧ್ಯಾಯವನ್ನು ನೋಡಿ |