Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:15 - ಕನ್ನಡ ಸತ್ಯವೇದವು C.L. Bible (BSI)

15 ಆತ ಭೂಮಿಯನ್ನು ನಿರ್ಮಿಸಿದ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ ವಿವೇಕದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ವಿಸ್ತರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನು ತನ್ನ ಅಪಾರ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದನು. ತನ್ನ ಜ್ಞಾನದಿಂದ ಈ ಲೋಕವನ್ನು ನಿರ್ಮಿಸಿದನು. ತನ್ನ ವಿವೇಕದಿಂದ ಆಕಾಶವನ್ನು ಹರಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಅವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:15
28 ತಿಳಿವುಗಳ ಹೋಲಿಕೆ  

ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ದೇವರು ಲೋಕವನ್ನು ಸೃಷ್ಟಿಸಿದಂದಿನಿಂದ ಅವರ ಅಗೋಚರ ಗುಣಲಕ್ಷಣಗಳು, ಅವರ ಅನಂತ ಶಕ್ತಿ ಮತ್ತು ದೈವಸ್ವಭಾವ ಮನುಷ್ಯರಿಗೆ ಸೃಷ್ಟಿಗಳ ಮೂಲಕವೇ ವೇದ್ಯವಾಗುತ್ತಿವೆ. ಆದುದರಿಂದ ಮಾನವರು ತಮ್ಮ ಅಜ್ಞಾನಕ್ಕೆ ಯಾವ ನೆಪವನ್ನು ಒಡ್ಡಲೂ ಸಾಧ್ಯವಿಲ್ಲ.


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ಸರ್ವೇಶ್ವರಸ್ವಾಮಿ ಜ್ಞಾನದ ಮೂಲಕ ಜಗವನ್ನು ಸ್ಥಾಪಿಸಿದ ವಿವೇಕದ ಮುಖಾಂತರ ಗಗನವನ್ನು ಸ್ಥಿರಗೊಳಿಸಿದ.


ಆಕಾಶಮಂಡಲವನ್ನು ಹರಡಿದವನು ದೇವರೇ ಕಡಲಿನ ತರಂಗಗಳನ್ನು ಮೆಟ್ಟಿದವನು ಆತನೊಬ್ಬನೇ.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಜಗವನು, ಅದರಲ್ಲಿನ ಮನುಜರನು ಸೃಜಿಸಿದವನು ನಾನೇ, ಆಕಾಶಮಂಡಲವನು ವಿಶಾಲವಾಗಿ ಹರಡಿದ್ದು ನನ್ನ ಕೈಗಳೇ, ಸೂರ್ಯ, ಚಂದ್ರ, ನಕ್ಷತ್ರಗಳನು ನಿಯಂತ್ರಿಸುವವನು ನಾನೆ.


ತಾಯ ಗರ್ಭದಿಂದ ರೂಪಿಸಿ ನಿನ್ನನು ಹೊರತಂದ ಸರ್ವೇಶ್ವರ ಹೇಳಿಹನು ಇದನ್ನು : “ಸರ್ವವನು ಸೃಷ್ಟಿಸಿದ ಸರ್ವೇಶ್ವರನು ನಾನೆ ಗಗನಮಂಡಲವನು ವಿಸ್ತರಿಸಿದವನು ನಾನೆ ಭೂಮಂಡಲವನು ಹರಡಿದವನು ನಾನೆ ನನಗಾಗ ನೆರವಾಗಲು ಯಾರಾದರೂ ಇದ್ದರೆ?


ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು :


ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ


ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.


ಜ್ಞಾನದಿಂದ ಜಗವನು ನಿರ್ಮಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I ಹರಡಿಸಿರುವೆ ಆಗಸವನು ಗುಡಾರದಂತೆ II


ಜಗತ್ತನ್ನು ಹಾಗೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಗಳಿಗೆ ಒಡೆಯರು; ಮಾನವನು ನಿರ್ಮಿಸಿದ ಗುಡಿಗಳಲ್ಲಿ ಅವರು ಮನೆಮಾಡುವಂಥವರಲ್ಲ.


ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?


ಭೂಮಿಗೆ ಅಸ್ತಿವಾರ ಹಾಕಿದ್ದು ನನ್ನ ಕೈಯೇ, ಆಕಾಶವನ್ನು ಹರಡಿದ್ದು ನನ್ನ ಬಲಗೈಯೇ ಇವೆರಡೂ ಬರುತ್ತವೆ ನಾ ಕರೆದ ಮಾತ್ರಕ್ಕೇ.


ಬಿರುಗಾಳಿಯೆದ್ದಿತು ಆತನಾಜ್ಞೆಯೊಂದಕ್ಕೆ I ತರಂಗಗಳು ಭೊರ್ಗರೆದವು ಅದರೊಂದಿಗೆ II


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ.


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು