ಯೆರೆಮೀಯ 51:16 - ಕನ್ನಡ ಸತ್ಯವೇದವು C.L. Bible (BSI)16 ಆತನ ಘರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ ಭುವಿಯ ಕಟ್ಟಕಡೆಯಿಂದ ಮೋಡ ಮೇಲೇರುತ್ತದೆ ಮಳೆಗೋಸ್ಕರ ಮಿಂಚು ಹೊಳೆಯುತ್ತದೆ ಆತನ ಭಂಡಾರದಿಂದ ಗಾಳಿ ಬೀಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆತನ ಗರ್ಜನೆಗೆ ಆಕಾಶದಲ್ಲಿ ನೀರು ಮೊರೋ ಎನ್ನುತ್ತದೆ; ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆತನು ಗರ್ಜಿಸಿದಾಗ ಸಮುದ್ರದ ನೀರು ಭೋರ್ಗರೆಯುತ್ತದೆ. ಆತನು ಇಡೀ ಭೂಮಂಡಲದಿಂದ ಮೋಡಗಳು ಮೇಲೆ ಹೋಗುವಂತೆ ಮಾಡುತ್ತಾನೆ. ಆತನು ಮಳೆಯ ಜೊತೆ ಮಿಂಚನ್ನು ಕಳುಹಿಸುತ್ತಾನೆ. ತನ್ನ ಭಂಡಾರದಿಂದ ಗಾಳಿಯನ್ನು ಹೊರಗೆ ಬಿಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ; ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ. ಅಧ್ಯಾಯವನ್ನು ನೋಡಿ |