ಯೆರೆಮೀಯ 51:17 - ಕನ್ನಡ ಸತ್ಯವೇದವು C.L. Bible (BSI)17 ಇದರ ಮುಂದೆ ಜನರು ತಿಳುವಳಿಕೆಯಿಲ್ಲದ ಪಶುಪ್ರಾಯರು ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಪೊಳ್ಳು, ಶ್ವಾಸವಿಲ್ಲದವುಗಳು, ಅವನು ಎರಕಹೊಯ್ದ ಪುತ್ತಳಿಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಜನರು ಬುದ್ಧಿಹೀನರಾಗಿ ದೇವರ ಕಾರ್ಯವನ್ನು ತಿಳಿಯದವರಾಗಿದ್ದಾರೆ. ಕುಶಲಕೆಲಸಗಾರರು ಸುಳ್ಳುದೇವರುಗಳ ಪ್ರತಿಮೆಗಳನ್ನು ಮಾಡುತ್ತಾರೆ. ಆ ಪ್ರತಿಮೆಗಳು ಕೇವಲ ಸುಳ್ಳುದೇವರುಗಳೇ. ಆ ಕೆಲಸಗಾರರು ಎಷ್ಟು ಮೂರ್ಖರೆಂಬುದನ್ನು ಅವು ತೋರಿಸುತ್ತವೆ. ಆ ಪ್ರತಿಮೆಗಳು ಜೀವಂತವಾಗಿರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ; ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ; ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ; ಅವುಗಳಲ್ಲಿ ಉಸಿರೇ ಇಲ್ಲ. ಅಧ್ಯಾಯವನ್ನು ನೋಡಿ |