Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:18 - ಕನ್ನಡ ಸತ್ಯವೇದವು C.L. Bible (BSI)

18 ಅವು ವ್ಯರ್ಥವಾದವುಗಳು, ಹಾಸ್ಯಾಸ್ಪದ ಕೃತಿಗಳು, ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ವಿಗ್ರಹಗಳು ನಿಷ್ಪ್ರಯೋಜಕವಾದವುಗಳೇ. ಆ ವಿಗ್ರಹಗಳನ್ನು ಮಾಡಿದವರು ಜನರೇ. ಅವುಗಳು ಕೇವಲ ಹಾಸ್ಯಾಸ್ಪದ ವಸ್ತುಗಳಲ್ಲದೆ ಮತ್ತೇನೂ ಅಲ್ಲ. ಅವುಗಳ ಬಗ್ಗೆ ತೀರ್ಪುಕೊಡುವ ಕಾಲ ಬರುವದು; ಆ ವಿಗ್ರಹಗಳನ್ನು ನಾಶಮಾಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ; ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:18
18 ತಿಳಿವುಗಳ ಹೋಲಿಕೆ  

“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು.


ನಿರರ್ಥಕ ವಿಗ್ರಹಗಳನಾರಾಧಿಪ ಜನರು ತೊರೆದಿಹರು ಹಾರ್ದಿಕ ಭಕ್ತಿಯನು


“ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.


“ಮೋವಾಬೇ, ನಿನ್ನ ಸಾಧನೆಗಳಲ್ಲೇ, ಧನರಾಶಿಗಳಲ್ಲೇ ಭರವಸೆಯಿಟ್ಟೆ. ಆದುದರಿಂದ ನೀನು ಇದೀಗಲೆ ಶತ್ರುಗಳ ಕೈವಶವಾಗುವೆ. ಕೆಮೋಷ್ ಎಂಬ ನಿನ್ನ ದೇವತೆಯೂ ಅದರ ಭಕ್ತ ಯಾಜಕರೂ ಹಾಗೂ ರಾಜ್ಯಾಧಿಕಾರಿಗಳು ಸೆರೆಗೆ ಹೋಗುವರು ಒಟ್ಟಿಗೆ.


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನೋ ಎಂಬ ನಗರದಲ್ಲಿನ ಅಮೋನ್ ದೇವತೆಯನ್ನು, ಫರೋಹನನ್ನು, ಈಜಿಪ್ಟನ್ನು, ಈಜಿಪ್ಟಿನ ದೇವತೆಗಳನ್ನೂ ಅಲ್ಲಿನ ಅರಸರನ್ನೂ ದಂಡಿಸುವೆನು. ಹೌದು, ಫರೋಹನನ್ನೂ ಅವನಲ್ಲಿ ನಂಬಿಕೆ ಇಟ್ಟವರನ್ನೂ ದಂಡಿಸುವೆನು.


ನನ್ನ ಜನರಾದರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಾರತಿ ಎತ್ತಿದ್ದುಂಟು. ಸನಾತನ ಸನ್ಮಾರ್ಗಗಳಲ್ಲಿ ಮುಗ್ಗರಿಸಿ ಸರಿಯಲ್ಲದ ಸೀಳುದಾರಿಯಲ್ಲಿ ಅಲೆದದ್ದುಂಟು.


ಅವು ವ್ಯರ್ಥವಾದುವುಗಳು, ಹಾಸ್ಯಾಸ್ಪದವಾದುವುಗಳು ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ತಗ್ಗಿದೆ ಬೇಲ್ ದೇವತೆ ಕುಗ್ಗಿದೆ ನೆಬೋ ದೇವತೆ ಅವುಗಳ ಪ್ರತಿಮೆಗಳನು ಕತ್ತೆಗಳು ಹೊತ್ತಿವೆ. ನೀವು ಮೆರವಣಿಗೆಯಾಗಿ ಹೊರುತ್ತಿದ್ದ ಆ ಬೊಂಬೆಗಳೆ, ಭಾರವಾದ ಹೊರೆಯಾಗಿವೆ, ಬಳಲಿದಾ ಪಶುಗಳಿಗೆ


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದುಹೋಗುವೆನು; ಮನುಷ್ಯರಾಗಲಿ, ಪ್ರಾಣಿಗಳಾಗಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ!


ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು.


ವಿಗ್ರಹಗಳು ಸಂಪೂರ್ಣವಾಗಿ ಮಾಯವಾಗುವುವು.


ನಿನ್ನ ನಡತೆಯನ್ನು ಬಯಲಿಗೆ ತರುವೆನು. ಆಗ ನಿನ್ನ ಕೃತ್ಯಗಳು ನಿನಗೆ ನೆರವಾಗವು.


“ಭೂಮ್ಯಾಕಾಶಗಳನ್ನು ಸೃಷ್ಟಿಸದ ದೇವರುಗಳು ಭೂಮಿಯ ಮೇಲಿಂದಲೂ ಆಕಾಶದ ಕೆಳಗಿನಿಂದಲೂ ಅಳಿದುಹೋಗುವುವು” ಎಂದು ನೀವು ಆ ಜನಾಂಗಗಳಿಗೆ ತಿಳಿಸಿರಿ.


ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುವು; ಪೂಜಾಸ್ಥಳಗಳು ಪಾಳುಬೀಳುವುವು; ಇದರಿಂದ ನಿಮ್ಮ ಯಜ್ಞವೇದಿಕೆಗಳು ಹಾಳುಪಾಳಾಗುವುವು; ನಿಮ್ಮ ಬೊಂಬೆಗಳು ಪುಡಿಪುಡಿಯಾಗುವುವು; ನಿಮ್ಮ ಸೂರ್ಯಸ್ತಂಭಗಳು ಚೂರುಚೂರಾಗುವುವು; ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು