Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:19 - ಕನ್ನಡ ಸತ್ಯವೇದವು C.L. Bible (BSI)

19 ಯಕೋಬ್ಯರಿಗೆ ಸ್ವಂತವಾದ ದೇವರು ಅವುಗಳ ಹಾಗಲ್ಲ ಆತ ಸಮಸ್ತವನ್ನು ಸೃಷ್ಟಿಸಿದಾತ ಆತನ ಸೊತ್ತು ಇಸ್ರಯೇಲ್ ವಂಶ ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ಆತನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬದು ಆತನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಯಾಕೋಬ್ಯರ ಸ್ವಾಸ್ತ್ಯವಾದಾತನು ಆ ನಿಷ್ಪ್ರಯೋಜಕ ವಿಗ್ರಹಗಳಂತಲ್ಲ. ಜನರು ದೇವರನ್ನು ಸೃಷ್ಟಿಸಲಿಲ್ಲ. ದೇವರು ತನ್ನ ಜನರನ್ನು ಸೃಷ್ಟಿಸಿದನು. ದೇವರು ಎಲ್ಲವನ್ನು ಸೃಷ್ಟಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ; ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:19
19 ತಿಳಿವುಗಳ ಹೋಲಿಕೆ  

ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ನನ್ನ ತನುಮನಗಳೆಲ್ಲವೂ ಸೊರಗಿಹೋದರೂ I ನನ್ನಾತ್ಮದ ಶಕ್ತಿ, ಶಾಶ್ವತ ಸೊತ್ತು ದೇವರು II


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ I ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ II


ನಮ್ಮ ಉದ್ಧಾರಕನ ನಾಮಧೇಯ ಸೇನಾಧೀಶ್ವರ ಸರ್ವೇಶ್ವರ ಆತನೇ ಇಸ್ರಯೇಲರಿಗೆ ಪರಮಪವಿತ್ರ.


“ನನ್ನ ಪಾಲಿನ ಸೊತ್ತು ಸರ್ವೇಶ್ವರನೇ, ನಿರೀಕ್ಷಿಸುತ್ತಿರುವೆನು ನಾನು ಆತನನ್ನೇ” ಇಂತೆಂದುಕೊಳ್ಳುತ್ತದೆ ನನ್ನ ಅಂತರಾತ್ಮ.


“ನನ್ನ ಸೊತ್ತಾದವರನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುತ್ತಿದ್ದೀರಿ! ಕಣ ತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿದ್ದೀರಿ. ಕೊಬ್ಬಿದ ಕುದುರೆಗಳಂತೆ ಕೆನೆಯುತ್ತಿದ್ದೀರಿ.


ಆಯ್ದುಕೊಂಡನಾತ ಯಕೋಬ್ಯ ವಂಶವನು I ಸ್ವಕೀಯ ಜನರನ್ನಾಗಿ ಇಸ್ರಯೇಲರನು II


ಪರದಲ್ಲಿಹನು ನಮ್ಮ ದೇವನು I ಗೈವನು ತನಗಿಷ್ಟ ಬಂದುದನು II


ನೆನಸಿಕೊ ಆದಿಯಲೆ ನೀ ಸಂಪಾದಿಸಿಕೊಂಡ ಸಭೆಯನು I ಸ್ಮರಿಸಿಕೊ ಸೊತ್ತಾಗಿ ನೀ ರಕ್ಷಿಸಿಕೊಂಡ ಗೋತ್ರವನು I ಜ್ಞಾಪಿಸಿಕೊ ನಿನ್ನ ಸದನವಾಗಿದ್ದ ಸಿಯೋನ್ ಶಿಖರವನು II


ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ II


ಇಸ್ರಯೇಲರು ಮಾತ್ರ ಸ್ವಜನರಾದರು ಸರ್ವೇಶ್ವರನಿಗೆ, ಸ್ವಕೀಯ ಪ್ರಜೆಯಾದರು ಆ ಯಕೋಬ ವಂಶಜರು ಆತನಿಗೆ.


ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.


ಲೋಕವನ್ನು ಸೃಷ್ಟಿಸಿ, ರೂಪಿಸಿ, ಸ್ಥಾಪಿಸಿದವರು ಹಾಗೂ ‘ಸರ್ವೇಶ್ವರ’ ಎಂದು ನಾಮಾಂಕಿತಗೊಂಡ ಅವರು ನನಗೆ ಹೀಗೆಂದರು:


ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.”


ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?


ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು