ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”
ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?
“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.
ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ.
ಆದರೆ ಸರ್ವೇಶ್ವರಸ್ವಾಮಿಯ ಆಲೋಚನೆಗಳನ್ನು ಅವರು ಅರಿತುಕೊಂಡಿಲ್ಲ. ಆ ಸ್ವಾಮಿಯ ಉದ್ದೇಶವನ್ನು ಅವರು ಗ್ರಹಿಸಿಕೊಂಡಿಲ್ಲ; ಕಣಕ್ಕೆ ಹಾಕಿದ ಕಂತೆಗಳಂತೆ ಅವರನ್ನು ಸ್ವಾಮಿ ಸೇರಿಸಿದ್ದಾರೆ ಎಂಬುದನ್ನು ಅವರು ಅರ್ಥೈಸಿಕೊಂಡಿಲ್ಲ.”