Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:21 - ಕನ್ನಡ ಸತ್ಯವೇದವು C.L. Bible (BSI)

21 ಈ ಗದೆಯಿಂದ ಒಡೆದುಬಿಡುವೆನು ಕುದುರೆಯನ್ನೂ ಸವಾರನನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ; ನಿನ್ನಿಂದ ರಥವನ್ನೂ, ಸಾರಥಿಯನ್ನೂ ನಾಶಮಾಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಸವಾರನನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ರಥವನ್ನೂ ಸಾರಥಿಯನ್ನೂ ಒಡೆದುಬಿಡುತ್ತೇನೆ; ನಿನ್ನಿಂದ ಸ್ತ್ರೀಪುರುಷರನ್ನು ಒಡೆದುಬಿಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕುದುರೆಗಳನ್ನೂ ಅದರ ಸವಾರರನ್ನೂ ಜಜ್ಜಿಹಾಕಲು ನಾನು ನಿನ್ನನ್ನು ಬಳಸುತ್ತೇನೆ. ರಥಗಳನ್ನೂ ಸಾರಥಿಗಳನ್ನೂ ಪುಡಿಪುಡಿ ಮಾಡಲು ನಾನು ನಿನ್ನನ್ನು ಬಳಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿನ್ನಿಂದ ಕುದುರೆಯನ್ನೂ, ಅದರ ಮೇಲೆ ಹತ್ತಿದವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ರಥವನ್ನೂ, ಅದರಲ್ಲಿ ಸವಾರಿ ಮಾಡುವವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:21
14 ತಿಳಿವುಗಳ ಹೋಲಿಕೆ  

ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕುದುರೆಗಳನು ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು


ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”


ಆಗ ಅವರ ಕುದುರೆಗಳೆಲ್ಲ ತಬ್ಬಿಬ್ಬಾಗುವಂತೆ ಮಾಡುವೆನು. ರಾಹುತರನ್ನು ದಿಗ್ಭ್ರಮೆಗೊಳಿಸುವೆನು. ಜುದೇಯ ಮನೆತನವನ್ನು ಕಟಾಕ್ಷಿಸಿ, ಇತರ ರಾಷ್ಟ್ರಗಳ ಕುದುರೆಗಳನ್ನೆಲ್ಲಾ ಕುರುಡಾಗಿಸುವೆನು.


ರಾಜ್ಯಗಳ ಸಿಂಹಾಸನವನ್ನು ಕೆಡವಿಬಿಡುವೆನು. ರಾಷ್ಟ್ರಗಳ ಸಂಸ್ಥಾನಬಲವನ್ನು ಧ್ವಂಸಮಾಡುವೆನು. ರಥಗಳನ್ನೂ ರಥಾರೂಢರನ್ನೂ ದಬ್ಬಿಬಿಡುವೆನು. ಕುದುರೆಗಳೂ ರಾಹುತರೂ ಬಿದ್ದುಹೋಗುವರು; ಒಬ್ಬನು ಮತ್ತೊಬ್ಬನ ಕತ್ತಿಗೆ ತುತ್ತಾಗುವನು.”


ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನಗೆ ವಿರುದ್ಧವಾಗಿದ್ದೇನೆ ನಾನು; ಸುಟ್ಟು ಭಸ್ಮಮಾಡುವೆ ನಿನ್ನ ರಥಗಳನು; ಸಂಹರಿಸಿಬಿಡುವೆನು ನಿನ್ನ ಯುವಸಿಂಹಗಳನು; ನಿನಗೆ ಜಗದಲ್ಲೆಲ್ಲ ಬೇಟೆ ಸಿಗದಂತೆ ಮಾಡುವೆನು; ಯಾರೂ ಕೇಳರು ನಿನ್ನ ರಾಯಭಾರಿಗಳ ಮಾತನು.”


ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ಕುದುರೆಗಳನ್ನು ಕಡಿದುಬಿಡುವೆನು. ನಿಮ್ಮ ರಥಗಳನ್ನು ಧ್ವಂಸಮಾಡುವೆನು.


ರಾಜರುಗಳ ಮಾಂಸವನ್ನು, ಸೇನಾಧಿಪತಿಗಳ ಮಾಂಸವನ್ನು ಮತ್ತು ಪರಾಕ್ರಮಶಾಲಿಗಳ ಮಾಂಸವನ್ನು ತಿನ್ನ ಬನ್ನಿ; ಕುದುರೆಗಳ ಮಾಂಸವನ್ನೂ ರಾವುತರ ಮಾಂಸವನ್ನೂ ಉಣ ಬನ್ನಿ; ಯಜಮಾನರ, ಗುಲಾಮರ, ಚಿಕ್ಕವರ, ದೊಡ್ಡವರ ಈ ಎಲ್ಲಾ ನರಮಾನವರ ಮಾಂಸವನ್ನು ರುಚಿಸ ಬನ್ನಿ,” ಎಂದನು.


ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II


ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ ಶೂರ, ಸಕಲವಿಧವಾದ ಯುದ್ಧವೀರರನ್ನು ಯಥೇಚ್ಛವಾಗಿ ಭಕ್ಷಿಸುವಿರಿ; ಇದು ಸರ್ವೇಶ್ವರನಾದ ದೇವರ ನುಡಿ.”


ಹೊಡೆಯಲಿ ಅಶ್ವಗಳನ್ನೂ ರಥಗಳನ್ನೂ ಬಾಬಿಲೋನಿನಲ್ಲಿರುವ ನಾನಾ ವಿದೇಶಿಯರನ್ನೂ ಬೆದರಿಸಲಿ ಅವರ ಹೆಂಗಸರನ್ನು, ಕಬಳಿಸಲಿ, ಸೂರೆಮಾಡಲಿ ಆ ಖಡ್ಗ ಅವರ ಸಂಪತ್ತನ್ನು.


ನಿನ್ನ ಒಂದು ಗದರಿಕೆಗೆ, ಯಕೋಬನ ದೇವನೆ I ರಥಾಶ್ವಬಲಗಳೆಲ್ಲಾ ಬಿದ್ದಿವೆ ಬಿಮ್ಮನೆ II


ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು


ಫರೋಹನ ರಥಗಳನು, ಸೈನಿಕರನು ಕೆಡವಿಬಿಟ್ಟನಾತ ಕಡಲಲಿ ಫರೋಹನ ವೀರ ಶ್ರೇಷ್ಟರನು ಮುಳುಗಿಸಿಬಿಟ್ಟನಾತ ಕೆಂಪು ಸಮುದ್ರದಲಿ


ಅಶ್ವರಥಭಟಸೈನ್ಯಗಳನ್ನು ಹೊರಡಿಸಿದವನಾರೋ, ಅವು ಬಿದ್ದು ಏಳಲಾಗದೆ, ಬತ್ತಿಕರಗಿಹೋಗುವಂತೆ ಮಾಡಿದವನಾರೋ, ಆ ಸ್ವಾಮಿ ಸರ್ವೇಶ್ವರ ನುಡಿದ ಮಾತಿದೋ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು