Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:24 - ಕನ್ನಡ ಸತ್ಯವೇದವು C.L. Bible (BSI)

24 “ಆದರೆ ಬಾಬಿಲೋನಿನವರು ಹಾಗು ಅದರ ಕಸ್ದೀಯರು ಸಿಯೋನಿನಲ್ಲಿ ಮಾಡಿದ ಎಲ್ಲ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೆ ಆ ಸಿಯೋನಿನವರ ಕಣ್ಣೆದುರಿಗೇ ಮುಯ್ಯಿ ತೀರಿಸುವೆನು,” ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ, ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬಿಲೋನಿಗೆ ಮುಯ್ಯಿತೀರಿಸುವೆನು’” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ಬಾಬೆಲಿನವರೂ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ನಾನು ಬಾಬಿಲೋನಿಗೆ ಮುಯ್ಯಿತೀರಿಸುವೆನು. ನಾನು ಬಾಬಿಲೋನಿನ ಎಲ್ಲಾ ಜನರಿಗೆ ಮುಯ್ಯಿತೀರಿಸುವೆನು. ಅವರು ಚೀಯೋನಿಗೆ ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಮುಯ್ಯಿತೀರಿಸುವೆನು. ಯೆಹೂದವೇ, ನಿನ್ನ ಎದುರಿನಲ್ಲಿಯೇ ಅವರಿಗೆ ಮುಯ್ಯಿತೀರಿಸುವೆನು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಬಾಬಿಲೋನಿನವರು ಮತ್ತು ಕಸ್ದೀಯರು ಚೀಯೋನಿನಲ್ಲಿ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:24
25 ತಿಳಿವುಗಳ ಹೋಲಿಕೆ  

ಆದರ ಸುತ್ತಲು ರಣಘೋಷಮಾಡಿರಿ. ಇಗೋ, ಅದು ಶರಣಾಗತವಾಯಿತು! ಅದರ ಕೋಟೆಕೊತ್ತಲಗಳು ಬಿದ್ದವು. ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಸರ್ವೇಶ್ವರನಾದ ನಾನು ಅದಕ್ಕೆ ಮುಯ್ಯಿತೀರಿಸಿದ್ದೇನೆ. ನೀವೂ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ.


ಹರಿಯಿತಾ ನಗರದಲಿ ಪ್ರವಾದಿಗಳ ರಕ್ತ ದೇವಜನರ, ಭೂಮಿಯಲ್ಲಿ ಬಲಿಯಾದೆಲ್ಲರ ರಕ್ತ.”


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


ಹತರಾದ ಇಸ್ರಯೇಲರೇ, ಬಾಬಿಲೋನಿಯದ ಹಿತಕ್ಕಾಗಿ ಬಹುಜನ ಹತರಾದರು. ಅಂತೆಯೇ ಬಾಬಿಲೋನ್ ಹತವಾಗುವುದು. ಸರ್ವೇಶ್ವರನಾದ ನನ್ನ ನುಡಿ ಇದು.”


‘ನಮ್ಮ ಪ್ರಾಣವನ್ನು ಹಿಂಡಿದ ದೋಷ ಬಾಬಿಲೋನಿಗೆ ತಟ್ಟಲಿ’ ಎನ್ನುತ್ತದೆ ಸಿಯೋನ್. ‘ನಮ್ಮ ರಕ್ತವನ್ನು ಸುರಿಸಿದ ಅಪರಾಧ ಅದರ ಕಸ್ದೀಯರಿಗೆ ಬಡಿಯಲಿ!’ ಎನ್ನುತ್ತದೆ ಜೆರುಸಲೇಮ್.


ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ;


ಇಗೋ ಕೇಳಿ, ನಗರದ ಕಡೆಯಿಂದ ಕೋಲಾಹಲದ ಶಬ್ದ, ದೇವಾಲಯದಲ್ಲಿ ಶಬ್ದ, ಸರ್ವೇಶ್ವರ ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ !


ಸರ್ವೇಶ್ವರ ಸ್ವಾಮಿಯ ಅನುಗ್ರಹದ ವರುಷವನು, ನಮ್ಮ ದೇವರು ಮುಯ್ಯಿತೀರಿಸುವಾ ದಿನವನು ಘೋಷಿಸಲೆಂದೆ.


ಒಟ್ಟುಗೂಡಿ ಕೇಳಿ ನೀವೆಲ್ಲರು ಇದನ್ನು : ಆ ದೇವರುಗಳಲ್ಲಿ ಮುಂತಿಳಿಸಿದವನಾರು ಈ ಸಂಗತಿಯನು? ನನ್ನ ಪ್ರೀತಿಗೆ ಪಾತ್ರನಾದ ವ್ಯಕ್ತಿ ಸೈರಸನು ಕಸ್ದೀಯರ ಮೇಲೆ ಕೈಯೆತ್ತುವನು, ಈಡೇರಿಸುವನು ಬಾಬೆಲಿನಲ್ಲಿ ನನ್ನ ಇಷ್ಟಾರ್ಥವನು.


ಅನೇಕ ರಾಷ್ಟ್ರಗಳೂ ಮಹಾರಾಜರೂ ಅವರನ್ನು ಗುಲಾಮರನ್ನಾಗಿಸಿಕೊಳ್ಳುವರು. ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿ ತೀರಿಸುವೆನು.”


ಬಾಬಿಲೋನಿಯದ ರಾಜ್ಯ ಸೂರೆಯಾಗುವುದು. ಅದನ್ನು ಕೊಳ್ಳೆಹೊಡೆಯುವವರೆಲ್ಲರು ಸಂತೃಪ್ತಿಗೊಳ್ಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ಈ ಗದೆಯಿಂದ ಒಡೆದುಬಿಡುವೆನು ಕುರುಬನನ್ನೂ ಮಂದೆಯನ್ನೂ ರೈತನನ್ನೂ ನೊಗದೆತ್ತುಗಳನ್ನೂ ದೇಶಾಧಿಪತಿಗಳನ್ನೂ ನಾಡಿನೊಡೆಯರನ್ನೂ.”


ವಿನಾಶಕಾರನು ಬಂದೆರಗಿದ್ದಾನೆ ಬಾಬಿಲೋನಿನ ಮೇಲೆ ಅದರ ಶೂರರೋ ಸೆರೆಯಾಗಿಬಿಟ್ಟಿದ್ದಾರೆ ಅವರ ಬಿಲ್ಲುಗಳೋ ಮುರಿದುಹೋಗಿವೆ. ಸರ್ವೇಶ್ವರನು ಮುಯ್ಯಿತೀರಿಸುವ ದೇವರು ಆತ ಪ್ರತಿಕ್ರಿಯೆ ವ್ಯಕ್ತಪಡಿಸದೆ ಇರನು.


“ಹೇ, ಸರ್ವೇಶ್ವರಾ, ಅವರ ದುಷ್ಕೃತ್ಯಗಳಿಗೆ ತಕ್ಕ ಪ್ರತೀಕಾರ ನೀಡು ಅವರಿಗೆ.


“ಅವರ ದೇವರೆಲ್ಲಿ?” ಎಂದು ಮ್ಲೇಚ್ಛರು ಆಡಿಕೊಳ್ಳುವುದೇಕೆ? I ಆಗಲಿ ಪ್ರತೀಕಾರ ನಿನ್ನ ಸೇವಕರ ರಕ್ತ ಸುರಿಸಿದವರಿಗೆ I ಆಗರ್ಥವಾಗುವುದವರಿಗೆ; ಕಾಣಲಿ ಅದು ನಮ್ಮ ಕಣ್ಗಳಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು