Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:32 - ಕನ್ನಡ ಸತ್ಯವೇದವು C.L. Bible (BSI)

32 ರೇವುಗಳನ್ನು ಹಿಡಿದಿದ್ದಾರೆ. ಹುಲ್ಲಿಗೆ ಬೆಂಕಿ ಹಚ್ಚಿದ್ದಾರೆ. ರಣವೀರರು ಭಯಭ್ರಾಂತರಾಗಿದ್ದಾರೆ’ ಎಂದು ಬಾಬಿಲೋನಿನ ಅರಸನಿಗೆ ತಿಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ’ ಎಂದು ತಿಳಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡುಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ ಎಂದು ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಹಾಯ್ಗಡಗಳನ್ನು ವಶಪಡಿಸಿಕೊಂಡಿದ್ದಾರೆ; ಜವುಗು ನೆಲವು ಉರಿಯುತ್ತಿದೆ. ಬಾಬಿಲೋನಿನ ಎಲ್ಲಾ ಸೈನಿಕರು ಅಂಜಿಕೊಂಡಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:32
7 ತಿಳಿವುಗಳ ಹೋಲಿಕೆ  

ಬಾಬಿಲೋನಿಯದ ಶೂರರು ಯುದ್ಧಕ್ಕೆ ಹಿಂಜರಿದು ಹೆಂಗಸರಂತೆ, ಹೇಡಿಗಳಂತೆ ತಮ್ಮ ಕೋಟೆಗಳಲ್ಲೆ ನಿಂತಿದ್ದಾರೆ. ಅದರ ಹೆಬ್ಬಾಗಿಲುಗಳು ಮುರಿದುಬಿದ್ದಿವೆ. ಅದರ ಮನೆಗೆ ಬೆಂಕಿಯಿಕ್ಕಲಾಗಿದೆ.


‘ಬತ್ತಿಹೋಗು’ ಎಂದು ಜಲರಾಶಿಗಳಿಗೆ ‘ಒಣಗಿಹೋಗು’ ಎಂದು ನಿನ್ನ ಸೇರುವ ನದಿಗಳಿಗೆ ಅಪ್ಪಣೆ ಕೊಡುವಾತನು ನಾನೆ.


ಇರುವರವರೆಲ್ಲರು ಒಣಹುಲ್ಲಿನ ಕೂಳೆಯಂತೆ ಸುಟ್ಟುಬಿಡುವುದವರನು ಉರಿಯುವ ಚಿತೆ ತುತ್ತಾಗುವರವರು ಆ ಜ್ವಾಲಾಗ್ನಿಗೆ ತಪ್ಪದೆ. ಅದು ಚಳಿಗೆ ಮೈಕಾಯಿಸಿಕೊಳ್ಳುವ ಬೆಂಕಿಯಂತಲ್ಲ ಮೈಬೆಚ್ಚಗಾಗಿಸಿಕೊಳ್ಳುವ ಉರಿಯಂತಲ್ಲ.


ಒಬ್ಬ ಸುದ್ದಿಗಾರ ಇನ್ನೊಬ್ಬ ಸುದ್ದಿಗಾರನತ್ತ ಓಡುತ್ತಾನೆ. ಒಬ್ಬ ದೂತ ಇನ್ನೊಬ್ಬ ದೂತನತ್ತ ದೌಡಾಯಿಸುತ್ತಾನೆ. ‘ರಾಜಧಾನಿಯನ್ನು ಎಲ್ಲಾ ಕಡೆಯಿಂದಲೂ ಆಕ್ರಮಿಸಿದ್ದಾರೆ.


ಬಾಬಿಲೋನ್ ನಗರವು ತುಳಿದು ತುಳಿದು ಸರಿಮಾಡಿದ ಕಣದಂತಿದೆ. ಇಷ್ಟರಲ್ಲೆ ಕೊಯ್ಲುಕಾಲ ಅದಕ್ಕೆ ಸಂಭವಿಸಲಿದೆ; ಇದು ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರನ ನುಡಿ.”


ಒಳಗಿದ್ದ ಎಲ್ಲ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು