ಯೆರೆಮೀಯ 51:34 - ಕನ್ನಡ ಸತ್ಯವೇದವು C.L. Bible (BSI)34 ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ನನ್ನನ್ನು ಮುರಿದು ತಿಂದುಬಿಟ್ಟ ನನ್ನನ್ನು ಕುಡಿದು ಬಿಸಾಡಿದ ಪಾತ್ರೆಯನ್ನಾಗಿಸಿಬಿಟ್ಟ. ಘಟಸರ್ಪದ ಹಾಗೆ ನನ್ನನ್ನು ನುಂಗಿದ ನನ್ನ ರುಚಿಪದಾರ್ಥಗಳಿಂದ ಹೊಟ್ಟೆ ತುಂಬಿಸಿಕೊಂಡ ಮಿಕ್ಕಿದುದನ್ನೆಲ್ಲ ತೊಳೆದು ಎಸೆದುಬಿಟ್ಟ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 [ಯೆಹೂದವು ಹೀಗೆ ಪ್ರಲಾಪಿಸುತ್ತದೆ] - ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದು ಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರೀಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು [ಗಂಗಾಳದಂತೆ] ತೊಳೆದು ಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 “ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 “ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ಜಜ್ಜಿದ್ದಾನೆ. ನಮ್ಮನ್ನು ಬರೀ ಪಾತ್ರೆಯಾಗಿ ಮಾಡಿದ್ದಾನೆ. ಘಟಸರ್ಪದ ಹಾಗೆ ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ. ನಮ್ಮನ್ನು ಉಗುಳಿಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿ |