ಯೆರೆಮೀಯ 51:35 - ಕನ್ನಡ ಸತ್ಯವೇದವು C.L. Bible (BSI)35 ‘ನಮ್ಮ ಪ್ರಾಣವನ್ನು ಹಿಂಡಿದ ದೋಷ ಬಾಬಿಲೋನಿಗೆ ತಟ್ಟಲಿ’ ಎನ್ನುತ್ತದೆ ಸಿಯೋನ್. ‘ನಮ್ಮ ರಕ್ತವನ್ನು ಸುರಿಸಿದ ಅಪರಾಧ ಅದರ ಕಸ್ದೀಯರಿಗೆ ಬಡಿಯಲಿ!’ ಎನ್ನುತ್ತದೆ ಜೆರುಸಲೇಮ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬಿಲೋನಿಗೆ ತಟ್ಟಲಿ’ ಎಂದು ಚೀಯೋನಿನವರು ಅನ್ನುತ್ತಾರೆ; ‘ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ’ ಎಂದು ಯೆರೂಸಲೇಮಿನವರು ಹೇಳುತ್ತಾರೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬೆಲಿಗೆ ತಟ್ಟಲಿ ಎಂದು ಚೀಯೋನಿನವರು ಅನ್ನುತ್ತಾರೆ; ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ ಎಂದು ಯೆರೂಸಲೇವಿುನವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ನಮ್ಮನ್ನು ನೋಯಿಸಲು ಬಾಬಿಲೋನ್ ಭಯಂಕರ ಕೆಲಸವನ್ನು ಮಾಡಿತು. ಈಗ ಬಾಬಿಲೋನಿಗೂ ಅಂಥಾ ಸ್ಥಿತಿ ಬರಲೆಂದು ನನ್ನ ಆಶೆ.” ಚೀಯೋನ್ ನಿವಾಸಿಗಳು ಹೀಗೆಂದರು: “ಬಾಬಿಲೋನಿನ ಜನರು ನಮ್ಮ ಜನರನ್ನು ಕೊಲ್ಲುವ ಪಾಪವನ್ನು ಮಾಡಿದ್ದಾರೆ. ಈಗ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಲಾಗುತ್ತಿದೆ” ಎಂದು ಜೆರುಸಲೇಮ್ ನಗರ ಹೇಳುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ನಮಗೂ, ನಮ್ಮ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬಿಲೋನಿನ ಮೇಲೆ ಇರಲಿ,” ಎಂದು ಚೀಯೋನ್ ನಿವಾಸಿಗಳು ಹೇಳುತ್ತಾರೆ; “ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ,” ಎಂದು ಯೆರೂಸಲೇಮು ಹೇಳುವುದು. ಅಧ್ಯಾಯವನ್ನು ನೋಡಿ |