Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:37 - ಕನ್ನಡ ಸತ್ಯವೇದವು C.L. Bible (BSI)

37 ಆಗ ಬಾಬಿಲೋನ್ ಹಾಳುದಿಬ್ಬ ಆಗುವುದು. ಗುಳ್ಳೆನರಿಗಳ ಬೀಡಾಗುವುದು. ಅದು ಭಯಭೀತಿಗೂ ಸೀಳು ಪರಿಹಾಸ್ಯಕ್ಕೂ ಆಸ್ಪದವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆಗ ಬಾಬೆಲು ಹಾಳುದಿಬ್ಬಗಳೂ ನರಿಗಳ ಹಕ್ಕೆಯೂ ಆಗಿರುವದು; ಅದು ನಿರ್ಜನವಾಗಿ ಬೆರಗಿನ ಸಿಳ್ಳಿಗೆ ಗುರಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಬಾಬಿಲೋನು ನಾಶವಾದ ಕಟ್ಟಡಗಳ ಗುಡ್ಡೆಯಾಗುವುದು. ಬಾಬಿಲೋನು ಕಾಡುನಾಯಿಗಳ ನಿವಾಸವಾಗುವುದು. ಜನರು ಕಲ್ಲುಬಂಡೆಗಳ ಗುಡ್ಡೆಯನ್ನು ನೋಡಿ ಆಶ್ಚರ್ಯಪಡುವರು. ಬಾಬಿಲೋನಿನ ಬಗ್ಗೆ ಜನರು ತಲೆಯಾಡಿಸುವರು. ಬಾಬಿಲೋನು ನಿರ್ಜನ ಪ್ರದೇಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಬಾಬಿಲೋನ್ ದಿಬ್ಬಗಳಾಗುವುದು. ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವಾಗಿ ಆಶ್ಚರ್ಯಕ್ಕೂ, ನಾಶಕ್ಕೂ, ಸಿಳ್ಳಿಡುವಿಕೆಗೂ ಒಳಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:37
24 ತಿಳಿವುಗಳ ಹೋಲಿಕೆ  

ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.


“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!


ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.


ಜೆರುಸಲೇಮಿಗೂ ಜುದೇಯದ ನಗರಗಳಿಗೂ, ಅರಸರುಗಳಿಗೂ ಕುಡಿಸಿದೆ. ಇದರಿಂದ ಅವರು ಹಾಳಾಗಿ ಇಂದು ಪರಿಹಾಸ್ಯಕ್ಕೂ ಶಾಪಕ್ಕೂ ಗುರಿಯಾಗುವಂತಾಯಿತು.


ಆ ಅವಧಿಯ ತರುವಾಯ ನಾನು ಬಾಬಿಲೋನನ್ನೂ ಅದರ ಅರಸನನ್ನೂ ದಂಡಿಸುವೆನು. ಅದರ ದ್ರೋಹದ ನಿಮಿತ್ತ ಆ ಬಾಬಿಲೋನಿನ ನಾಡನ್ನು ನಿತ್ಯ ವಿನಾಶಕ್ಕೆ ಗುರಿಪಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಈ ನಗರವನ್ನು ಭಯಾನಕ ಹಾಗೂ ಹಾಸ್ಯಾಸ್ಪದ ಸ್ಥಳವನ್ನಾಗಿಸುವೆನು. ಹಾದುಹೋಗುವವರೆಲ್ಲರು ಅದಕ್ಕೆ ಒದಗಿದ ವಿಪತ್ತನ್ನು ಕಂಡು ನಿಬ್ಬೆರಗಾಗಿ ಹೀಗಳೆಯುವರು.


ಪರಿವರ್ತಿಸುವೆನಾ ನಾಡನು ಜವುಗು ನೆಲವನ್ನಾಗಿ, ಅಹುದು, ಮುಳ್ಳುಹಂದಿಗಳ ರೊಪ್ಪವನ್ನಾಗಿ, ಗುಡಿಸಿಬಿಡುವೆನು ನಾಶವೆಂಬ ಪೊರಕೆಯಿಂದ ಪೂರ್ತಿಯಾಗಿ".


ಆದುದರಿಂದ ಸರ್ವೇಶ್ವರ, ಜುದೇಯ ನಾಡಿನ ಮೇಲೂ ಜೆರುಸಲೇಮಿನ ಮೇಲೂ ಕೋಪಗೊಂಡು ಅವುಗಳನ್ನು ಭಯಭೀತಿಗೂ ಹಾಸ್ಯಪರಿಹಾಸ್ಯಗಳಿಗೂ ಆಸ್ಪದವಾಗಿಸಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ಪೊಡವಿ ನೊಂದು ನಡುಗುತ್ತಿದೆ! ಏಕೆಂದರೆ ಬಾಬಿಲೋನ್ ದೇಶ ಹಾಳುಬಿದ್ದು ನಿರ್ಜನವಾಗಲಿ ಎಂದು ಸರ್ವೇಶ್ವರ ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪ ಅಚಲವಾಗಿದೆ.


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


“ಎದೋಮಿಗೆ ವಿಪತ್ತುಗಳು ಬಂದೊದಗುವುವು. ಅದನ್ನು ನೋಡುವವರು ಬೆರಗುಗೊಳ್ಳುವರು. ಹಾದುಹೋಗುವವರೆಲ್ಲರು ಸಿಳ್ಳುಹಾಕಿ ಪರಿಹಾಸ್ಯ ಮಾಡುವರು.


ಆಗ ಹಾಜೋರು ಸದಾ ಹಾಳುಬಿದ್ದು ಮರಿಗಳಿಗೆ ಬೀಡಾಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ತಂಗದು. ಇದು ಸರ್ವೇಶ್ವರನಾದ ನನ್ನ ನುಡಿ.”


ಎಸೆಯುವೆನು ನಿನ್ನ ಮೇಲೆ ಹೊಲಸನು ಕಳೆಯುವೆನು ನಿನ್ನ ಮಾನವನು ಪರಿಹಾಸ್ಯಕ್ಕೀಡುಮಾಡುವೆನು ನಿನ್ನನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು