Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:41 - ಕನ್ನಡ ಸತ್ಯವೇದವು C.L. Bible (BSI)

41 ಏನು, ಶೇಷಕ್ ಶತ್ರುವಶವಾಯಿತೆ? ಲೋಕಪ್ರಸಿದ್ಧ ನಗರ ಶರಣಾಗತವಾಯಿತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ, ಬಾಬೆಲ್ ಜನಾಂಗಗಳ ಬೆರಗಿಗೆ ಈಡಾಗಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 “ಶೇಷಕನು” ಶತ್ರುಗಳ ವಶವಾಗುವನು. ಲೋಕದಲ್ಲಿಯೇ ಅತ್ಯುತ್ತಮವಾದ ಮತ್ತು ಹೆಮ್ಮೆಪಡುವ ದೇಶವು ವೈರಿಗಳ ಕೈವಶವಾಗುವುದು. ಬೇರೆ ಜನಾಂಗದ ಜನರು ಬಾಬಿಲೋನಿನ ಕಡೆಗೆ ನೋಡಿದಾಗ ಅಲ್ಲಿನ ಸ್ಥಿತಿಗತಿಗಳನ್ನು ಕಂಡು ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 “ಶೇಷಕ್ ಹೇಗೆ ಶತ್ರುವಶವಾಗಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬಿಲೋನ್ ಜನಾಂಗಗಳೊಳಗೆ ಹೇಗೆ ಎಷ್ಟು ನಿರ್ಜನವಾಯಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:41
15 ತಿಳಿವುಗಳ ಹೋಲಿಕೆ  

ದೂರ - ಹತ್ತಿರವಿರುವ ಉತ್ತರ ನಾಡಿನ ಎಲ್ಲ ಅರಸರು, ಲೋಕದ ಸಕಲ ರಾಜ್ಯಗಳು, ಇವರೆಲ್ಲರು ಕುಡಿದ ಮೇಲೆ ಬಾಬಿಲೋನಿನ ಅರಸನು ಕುಡಿಯುವನು.


ಬಾಬಿಲೋನ್ ರಾಜ್ಯಗಳಿಗೆ ಶಿರೋಮಣಿ, ಕಸ್ದೀಯರ ಭವ್ಯಭೂಷಣ. ಆದರೆ ದೇವರಾದ ನಾನು ಸೊದೋಮ್ ಮತ್ತು ಗೊಮೋರಾ ನಾಡುಗಳನ್ನು ನಾಶಮಾಡಿದಂತೆ ಇದನ್ನೂ ಕೆಡಿಸಿ ನಾಶಮಾಡುವೆನು.


ಅಕಟಾ, ಹೆಸರುವಾಸಿಯಾದಂಥ ಆ ನನ್ನ ಮೆಚ್ಚುಗೆಯ ನಗರ ವಲಸೆಹೋಗಲಿಲ್ಲವೇಕೆ!


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


“ರಾಜರೇ, ನೀವು ಬೆಳೆದು ಬಲಗೊಂಡಿದ್ದೀರಿ. ನಿಮ್ಮ ಕೀರ್ತಿ ವೃದ್ಧಿಯಾಗಿ ಗಗನಕ್ಕೇರಿದೆ. ನಿಮ್ಮ ಆಳ್ವಿಕೆ ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


ನರಮಾನವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿಮ್ಮ ಕೈಗೆ ಒಪ್ಪಿಸಿದ್ದಾರೆ.


ನಿನ್ನೀ ಗತಿಗೆ ಬೆರಗಾಗಿಹರು ಕರಾವಳಿಯ ಸರ್ವನಿವಾಸಿಗಳು, ರೋಮಾಂಚಿತರಾಗಿಹರು ಮೊಗಗೆಟ್ಟು ರಾಜರಾಜರುಗಳು;


ಆಗ ಬಾಬಿಲೋನ್ ಹಾಳುದಿಬ್ಬ ಆಗುವುದು. ಗುಳ್ಳೆನರಿಗಳ ಬೀಡಾಗುವುದು. ಅದು ಭಯಭೀತಿಗೂ ಸೀಳು ಪರಿಹಾಸ್ಯಕ್ಕೂ ಆಸ್ಪದವಾಗುವುದು.


ಬಾಬಿಲೋನ್ ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿ ಕಂಪಿಸುವುದು. ಅದರ ಮೊರೆ ರಾಷ್ಟ್ರಗಳಿಗೆ ಕೇಳಿಸುವುದು.


ಲೋಕವನ್ನೆಲ್ಲ ಬಡಿದ ಕೊಡಲಿಯಂಥ ಬಾಬಿಲೋನ್ ಈಗ ಮುರಿದು ಚೂರುಚೂರಾಗಿದೆ! ಆ ರಾಜ್ಯವು ರಾಷ್ಟ್ರಗಳ ನಡುವೆ ಹಾಳಾಗಿ ಬಿದ್ದಿದೆ.


ಬಿದ್ದುಹೋದನಿದೊ ವಿಧ್ವಂಸಕ ಸದ್ದಿಲ್ಲದಾಗಿದೆ ಅವನ ಅಟ್ಟಹಾಸದ ಬಿಂಕ.


ಉನ್ನತವಾದ ಈ ಮಂದಿರದ ಮಾರ್ಗವಾಗಿ ಹೋಗುವವರು ಇದನ್ನು ನೋಡಿ ವಿಸ್ಮಿತರಾಗಿ, ‘ಸರ್ವೇಶ್ವರ ಈ ನಾಡನ್ನೂ ಈ ಆಲಯವನ್ನೂ ಹೀಗೇಕೆ ಮಾಡಿಬಿಟ್ಟರು?’ ಎಂದು ಕೇಳುವರು.


ಸರ್ವೇಶ್ವರ ನಿಮ್ಮನ್ನು ಒಯ್ಯಿಸುವ ಜನಾಂಗಗಳಲ್ಲಿ ನೀವು ಭೀಕರತೆಗೂ ನಿಂದೆಲಾವಣಿಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು