Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:45 - ಕನ್ನಡ ಸತ್ಯವೇದವು C.L. Bible (BSI)

45 ನನ್ನ ಜನರೇ, ಬಾಬಿಲೋನನ್ನು ಬಿಟ್ಟು ಹೊರಡಿ. ನನ್ನ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ನನ್ನ ಜನರೇ, ಬಾಬಿಲೋನ್ ನಗರದಿಂದ ಹೊರಗೆ ಬನ್ನಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಲು ಓಡಿಹೋಗಿರಿ. ಯೆಹೋವನ ಭಯಂಕರ ಕೋಪದಿಂದ ತಪ್ಪಿಸಿಕೊಳ್ಳಲು ಓಡಿಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 “ನನ್ನ ಜನರೇ, ಅದರೊಳಗಿಂದ ಹೊರಡಿರಿ. ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ಯೆಹೋವ ದೇವರ ಕೋಪಕ್ಕೆ ತಪ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:45
13 ತಿಳಿವುಗಳ ಹೋಲಿಕೆ  

ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


ನೀವು ಬಾಬಿಲೋನಿನಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿ, ಅದಕ್ಕೆ ಉಂಟಾಗುವ ದಂಡನೆಗೆ ನೀವು ಒಳಗಾಗಬೇಡಿ. ಸರ್ವೇಶ್ವರನಾದ ನಾನು ಮುಯ್ಯಿತೀರಿಸುವ ಕಾಲಬಂದಿದೆ. ಬಾಬಿಲೋನಿಗೆ ತಕ್ಕ ಪ್ರತೀಕಾರ ಮಾಡುವೆನು.


ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು.


“ಬಾಬಿಲೋನ್ ದೇಶದಿಂದ ಓಡಿಹೋಗಿ, ಬಾಬಿಲೋನಿಯರ ಆ ಸೀಮೆಯಿಂದ ಹೊರಡಿ. ಹಿಂಡುಗಳ ಮುಂದೆ ನಡೆಯುವ ಹೋತಗಳಂತೆ ಮುಂತೆರಳಿರಿ.


ಇಸ್ರಯೇಲ್ ಸಮಾಜದವರಿಗೆ ಅವನು, “ಈ ದುಷ್ಟರ ಡೇರೆಗಳ ಬಳಿಯಿರದೆ ದೂರಹೋಗಿ. ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬೇಡಿ. ಇವರ ದೋಷಗಳಿಗೆ ಬರಲಿರುವ ಶಿಕ್ಷೆ ನಿಮ್ಮನ್ನು ಕೊಚ್ಚಿಕೊಂಡು ಹೋದೀತು,” ಎಂದು ಎಚ್ಚರಿಸಿದನು.


“ಕತ್ತಿಯಿಂದ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ. ದೂರವಿರುವಾಗಲು ಸರ್ವೇಶ್ವರನನ್ನು ಸ್ಮರಿಸಿರಿ. ಜೆರುಸಲೇಮನ್ನು ಕುರಿತು ಮನಸ್ಸಾರೆ ಹಂಬಲಿಸಿರಿ.


ಅಲ್ಲಿರುವ ಹೊರನಾಡಿಗರು, ‘ಬಾಬಿಲೋನನ್ನು ಸ್ವಸ್ಥಮಾಡಲು ನಾವು ಪ್ರಯತ್ನಿಸಿದೆವು. ಆದರೆ ಅದು ಸ್ವಸ್ಥವಾಗಲಿಲ್ಲ. ಬಾಬಿಲೋನನ್ನು ಬಿಟ್ಟು ನಾವೆಲ್ಲರು ನಮ್ಮ ನಮ್ಮ ನಾಡುಗಳಿಗೆ ಹೋಗೋಣ. ಅದು ಪಡೆಯಬೇಕಾದ ದಂಡನೆ ಆಕಾಶ ಮುಟ್ಟುವಷ್ಟು ದೊಡ್ಡದು, ಹೌದು, ಅದು ಗಗನದವರೆಗೂ ಬೆಳೆದಿದೆ,” ಎನ್ನುವರು.


“ಇಗೋ, ಬಾಬಿಲೋನಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಸರ್ವೇಶ್ವರನು ತನ್ನ ಆಲಯವನ್ನುನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾರೆ ಎಂಬ ಸಮಾಚಾರವನ್ನು ಸಿಯೋನಿನಲ್ಲಿ ಸಾರಲು ಧಾವಿಸುತ್ತಿದ್ದಾರೆ ಆ ಜನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು