Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:48 - ಕನ್ನಡ ಸತ್ಯವೇದವು C.L. Bible (BSI)

48 ಆಗ ಭೂಮಿ ಆಕಾಶಗಳೂ ಅಲ್ಲಿನ ಸಮಸ್ತವೂ ಬಾಬಿಲೋನಿನ ನಾಶ ನೋಡಿ ಜಯಘೋಷಮಾಡುವುವು. ಹಾಳುಮಾಡುವರು, ಉತ್ತರದಿಂದ ಬಂದು ಹಾಳುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು; ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶನವನ್ನು ನೋಡಿ ಹರ್ಷಧ್ವನಿಗೈಯುವವು; ಏಕಂದರೆ ಹಾಳುಮಾಡುವವರು ಬಡಗಲಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಆಗ ಭೂಮ್ಯಾಕಾಶಗಳು ಮತ್ತು ಅವುಗಳಲ್ಲಿರುವ ಸಮಸ್ತ ವಸ್ತುಗಳು ಬಾಬಿಲೋನಿನ ಬಗ್ಗೆ ಹರ್ಷಧ್ವನಿ ಮಾಡುವವು. ಏಕೆಂದರೆ ಸೈನ್ಯವು ಉತ್ತರದಿಂದ ಬಂದಿತು, ಬಾಬಿಲೋನಿನ ವಿರುದ್ಧ ಯುದ್ಧಮಾಡಿತು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆಗ ಭೂಮಿ ಆಕಾಶಗಳೂ, ಅಲ್ಲಿನ ಸಮಸ್ತವೂ ಬಾಬಿಲೋನಿನ ನಾಶವನ್ನು ನೋಡಿ ಜಯಘೋಷ ಮಾಡುವುವು. ಹಾಳುಮಾಡುವರು, ಉತ್ತರದಿಂದ ಬಂದು ಹಾಳುಮಾಡುವರು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:48
15 ತಿಳಿವುಗಳ ಹೋಲಿಕೆ  

“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


“ಉತ್ತರದಿಂದ ಒಂದು ರಾಷ್ಟ್ರ ಬಾಬಿಲೋನಿನ ವಿರುದ್ಧ ಬರುತ್ತಿದೆ ಅದು ಬಾಬಿಲೋನ್ ದೇಶವನ್ನು ಹಾಳುಮಾಡುವುದು. ಅಲ್ಲಿ ಯಾರೂ ವಾಸಿಸರು. ಜಾನುವಾರುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.”


ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


ಇಗೋ ರಾಷ್ಟ್ರವೊಂದು ಬರುವುದು ಉತ್ತರದಿಂದ: ಎಚ್ಚರಗೊಳ್ವರು ಮಹಾಜನ ಹಾಗೂ ಅರಸರು ಬಹುಮಂದಿ ಬರುವರವರು ಲೋಕದ ಕಟ್ಟಕಡೆಯಿಂದ.


ಇಗೋ, ದೊಡ್ಡ ರಾಷ್ಟ್ರಗಳ ಸಮೂಹವನ್ನು ಎಬ್ಬಿಸಿ ಉತ್ತರದಿಂದ ಬಾಬಿಲೋನಿಯದ ಮೇಲೆ ಬೀಳಮಾಡುವೆನು. ಅವು ಬಾಬಿಲೋನಿಗೆ ವಿರುದ್ಧ, ವ್ಯೂಹಕಟ್ಟಿ ಅದನ್ನು ಬುಡಮೇಲು ಮಾಡುವುವು. ಅವುಗಳು ಪ್ರಯೋಗಿಸುವ ಬಾಣಗಳು ಯುದ್ಧ ಪ್ರವೀಣ ಶೂರನಂತಿರುವುವು; ಅವು ಸುಮ್ಮನೆ ಹಿಂದಿರುಗವು.


ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ.


ವಿನಾಶಕಾರನು ಬಂದೆರಗಿದ್ದಾನೆ ಬಾಬಿಲೋನಿನ ಮೇಲೆ ಅದರ ಶೂರರೋ ಸೆರೆಯಾಗಿಬಿಟ್ಟಿದ್ದಾರೆ ಅವರ ಬಿಲ್ಲುಗಳೋ ಮುರಿದುಹೋಗಿವೆ. ಸರ್ವೇಶ್ವರನು ಮುಯ್ಯಿತೀರಿಸುವ ದೇವರು ಆತ ಪ್ರತಿಕ್ರಿಯೆ ವ್ಯಕ್ತಪಡಿಸದೆ ಇರನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ನಿನ್ನನ್ನು ಹಾಳುಮಾಡಿ ಜಗವನ್ನೆಲ್ಲಾ ಸಂತೋಷಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು