Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:49 - ಕನ್ನಡ ಸತ್ಯವೇದವು C.L. Bible (BSI)

49 ಹತರಾದ ಇಸ್ರಯೇಲರೇ, ಬಾಬಿಲೋನಿಯದ ಹಿತಕ್ಕಾಗಿ ಬಹುಜನ ಹತರಾದರು. ಅಂತೆಯೇ ಬಾಬಿಲೋನ್ ಹತವಾಗುವುದು. ಸರ್ವೇಶ್ವರನಾದ ನನ್ನ ನುಡಿ ಇದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 “ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ, ಹಾಗೆಯೇ ಬಾಬೆಲೂ ಹತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಹತರಾದ ಇಸ್ರಾಯೇಲ್ಯರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹುಜನರು ಹೇಗೆ ಹತರಾದರೋ ಹಾಗೆಯೇ ಬಾಬೆಲೂ ಹತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 “ಬಾಬಿಲೋನ್ ಇಸ್ರೇಲರನ್ನು ಕೊಂದಿತು. ಬಾಬಿಲೋನ್ ಭೂಮಂಡಲದ ಎಲ್ಲೆಡೆಯ ಜನರನ್ನು ಕೊಂದಿತು. ಅದಕ್ಕಾಗಿ ಬಾಬಿಲೋನ್ ಪತನವಾಗಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 “ಬಾಬಿಲೋನ್‌ನಿಂದಾಗಿ ಭೂಮಿಯಲ್ಲೆಲ್ಲಾ ಹತರಾದಂತೆಯೇ, ಇಸ್ರಾಯೇಲಿನ ಹತ್ಯೆಯಿಂದಾಗಿ ಬಾಬಿಲೋನ್ ಬೀಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:49
13 ತಿಳಿವುಗಳ ಹೋಲಿಕೆ  

“ಆದರೆ ಬಾಬಿಲೋನಿನವರು ಹಾಗು ಅದರ ಕಸ್ದೀಯರು ಸಿಯೋನಿನಲ್ಲಿ ಮಾಡಿದ ಎಲ್ಲ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೆ ಆ ಸಿಯೋನಿನವರ ಕಣ್ಣೆದುರಿಗೇ ಮುಯ್ಯಿ ತೀರಿಸುವೆನು,” ಎನ್ನುತ್ತಾರೆ ಸರ್ವೇಶ್ವರ.


“ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


‘ನಮ್ಮ ಪ್ರಾಣವನ್ನು ಹಿಂಡಿದ ದೋಷ ಬಾಬಿಲೋನಿಗೆ ತಟ್ಟಲಿ’ ಎನ್ನುತ್ತದೆ ಸಿಯೋನ್. ‘ನಮ್ಮ ರಕ್ತವನ್ನು ಸುರಿಸಿದ ಅಪರಾಧ ಅದರ ಕಸ್ದೀಯರಿಗೆ ಬಡಿಯಲಿ!’ ಎನ್ನುತ್ತದೆ ಜೆರುಸಲೇಮ್.


“ನನ್ನ ಸೊತ್ತಾದವರನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುತ್ತಿದ್ದೀರಿ! ಕಣ ತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿದ್ದೀರಿ. ಕೊಬ್ಬಿದ ಕುದುರೆಗಳಂತೆ ಕೆನೆಯುತ್ತಿದ್ದೀರಿ.


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


ಹರಿಯಿತಾ ನಗರದಲಿ ಪ್ರವಾದಿಗಳ ರಕ್ತ ದೇವಜನರ, ಭೂಮಿಯಲ್ಲಿ ಬಲಿಯಾದೆಲ್ಲರ ರಕ್ತ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು