ಯೆರೆಮೀಯ 51:5 - ಕನ್ನಡ ಸತ್ಯವೇದವು C.L. Bible (BSI)5 ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ, ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇಸ್ರಾಯೇಲ್ಯರ ಸದಮಲಸ್ವಾವಿುಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಯೆಹೂದವನ್ನಾಗಲಿ ತ್ಯಜಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ಮತ್ತು ಯೆಹೂದವನ್ನು ವಿಧವೆಯಾಗಿ ಮಾಡಿಲ್ಲ. ಆತನು ಅವರ ಕೈಬಿಟ್ಟಿಲ್ಲ. ಅವರು ಇಸ್ರೇಲಿನ ಪರಿಶುದ್ಧನನ್ನು ತೊರೆದು ಅಪರಾಧ ಮಾಡಿದರು. ಅವರು ಆತನನ್ನು ತ್ಯಜಿಸಿದರು. ಆದರೆ ಆತನು ಅವರನ್ನು ತ್ಯಜಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲನ್ನಾಗಲಿ, ಯೆಹೂದವನ್ನಾಗಲಿ ಕೈಬಿಡಲಿಲ್ಲ. ಅಧ್ಯಾಯವನ್ನು ನೋಡಿ |